ಪ್ರಾತಿನಿಧಿಕ ಚಿತ್ರ 
ರಾಜ್ಯ

‘ಪಾಕಿಸ್ತಾನಕ್ಕೆ ಹೋಗಿ’ ಎಂದು ಇಬ್ಬರು ಮುಸ್ಲಿಂ ವಿದ್ಯಾರ್ಥಿಗಳನ್ನು ನಿಂದಿಸಿದ ಆರೋಪ: ಶಿಕ್ಷಕಿ ವರ್ಗಾವಣೆ

ಶಿವಮೊಗ್ಗದ ಸರ್ಕಾರಿ ಉರ್ದು ಶಾಲೆಯೊಂದರ ಶಿಕ್ಷಕಿಯೊಬ್ಬರು ತಮ್ಮ ತರಗತಿಯಲ್ಲಿ ಗಲಾಟೆ ಮಾಡಿಕೊಂಡ ಇಬ್ಬರು ಮುಸ್ಲಿಂ ಹುಡುಗರಿಗೆ, ಇದು ನಿಮ್ಮ ದೇಶ ಅಲ್ಲ, ಪಾಕಿಸ್ತಾನಕ್ಕೆ ಹೋಗಿ ಎಂದು ಹೇಳಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಘಟನೆ ಬಳಿಕ ಶಿಕ್ಷಕಿಯನ್ನು ವರ್ಗಾವಣೆ ಮಾಡಿ ಆದೇಶಿಸಲಾಗಿದೆ.

ಶಿವಮೊಗ್ಗ: ನಗರದ ಸರ್ಕಾರಿ ಉರ್ದು ಶಾಲೆಯೊಂದರ ಶಿಕ್ಷಕಿಯೊಬ್ಬರು ತಮ್ಮ ತರಗತಿಯಲ್ಲಿ ಗಲಾಟೆ ಮಾಡಿಕೊಂಡ ಇಬ್ಬರು ಮುಸ್ಲಿಂ ಹುಡುಗರಿಗೆ, ಇದು ನಿಮ್ಮ ದೇಶ ಅಲ್ಲ, ಪಾಕಿಸ್ತಾನಕ್ಕೆ ಹೋಗಿ ಎಂದು ಹೇಳಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಘಟನೆ ಬಳಿಕ ಶಿಕ್ಷಕಿಯನ್ನು ವರ್ಗಾವಣೆ ಮಾಡಿ ಆದೇಶಿಸಲಾಗಿದೆ.

5ನೇ ತರಗತಿಯ ಇಬ್ಬರು ವಿದ್ಯಾರ್ಥಿಗಳು ತರಗತಿಯಲ್ಲಿ ಜಗಳವಾಡುತ್ತಿದ್ದರಿಂದ ಶಿಕ್ಷಕಿಗೆ ಕೋಪ ಬಂದಿದೆ. ಆಕೆ ಇಬ್ಬರನ್ನು ಗದರಿಸಿದ ನಂತರವೂ ವಿದ್ಯಾರ್ಥಿಗಳು ಜಗಳ ಮುಂದುವರಿಸಿದಾಗ ಸಿಟ್ಟಿಗೆದ್ದ ಆಕೆ ‘ಇದು ನಿಮ್ಮ ದೇಶ ಅಲ್ಲ, ಪಾಕಿಸ್ತಾನಕ್ಕೆ ಹೋಗಿ’ ಎಂದು ವಿದ್ಯಾರ್ಥಿಗಳಿಗೆ ಸೂಚಿಸಿದ್ದಾರೆ.

ವಿದ್ಯಾರ್ಥಿಗಳ ಪೋಷಕರ ಪ್ರಕಾರ, ಶಿಕ್ಷಕಿ 'ಪಾಕಿಸ್ತಾನಕ್ಕೆ ಹೋಗಿ, ಇದು ಹಿಂದೂಗಳ ದೇಶ' ಎಂದು ಹೇಳಿದ್ದಾಗಿ ವರದಿಯಾಗಿದೆ.

ಮಾಧ್ಯಮದವರೊಂದಿಗೆ ಮಾತನಾಡಿದ ಬ್ಲಾಕ್ ಶಿಕ್ಷಣಾಧಿಕಾರಿ ಬಿ. ನಾಗರಾಜು, ಅವರು ಕನ್ನಡ ಭಾಷೆಯ ಶಿಕ್ಷಕಿಯಾಗಿದ್ದು, ಕಳೆದ 26 ವರ್ಷಗಳಿಂದ ಸಾಮಾನ್ಯ ಉದ್ಯೋಗಿಯಾಗಿದ್ದಾರೆ. ಕಳೆದ ಎಂಟು ವರ್ಷಗಳಿಂದ ಅದೇ ಶಾಲೆಯಲ್ಲಿ ಪಾಠ ಮಾಡುತ್ತಿದ್ದಾರೆ ಎಂದರು.

ಶಿಕ್ಷಕಿಯನ್ನು ಸದ್ಯ ಬೇರೆ ಶಾಲೆಗೆ ವರ್ಗಾವಣೆ ಮಾಡಲಾಗಿದ್ದು, ಈ ಕುರಿತು ಇಲಾಖಾ ತನಿಖೆ ನಡೆಸಲಾಗುವುದು. ವಿಚಾರಣೆ ವರದಿ ಬಂದ ನಂತರ ಶಿಕ್ಷಕಿ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಬ್ಲಾಕ್ ಶಿಕ್ಷಣಾಧಿಕಾರಿ ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನ್ಯಾಯಾಂಗದಲ್ಲಿ ಭ್ರಷ್ಟಾಚಾರದ ಪಾಠ: ಕೇಂದ್ರ ಕ್ಷಮೆಯಾಚಿಸುತ್ತಿದ್ದಂತೆ NCERT ಪಠ್ಯ ಪುಸ್ತಕ ಬ್ಯಾನ್, ಪ್ರತಿಗಳನ್ನು ವಶಕ್ಕೆ ಪಡೆಯಲು ಸುಪ್ರೀಂ ಸೂಚನೆ

'ನಿಮ್ಮ ಭಾಷಣ ನಾಚಿಕೆಯಿಲ್ಲದೆ ಸಮರ್ಥನೆ ಮಾಡಿಕೊಂಡಂತೆ ಇತ್ತು': 1947ರ ಐನ್ ಸ್ಟೈನ್ ನೆಹರೂಗೆ ಬರೆದ ಪತ್ರ ಉಲ್ಲೇಖಿಸಿ Modi ಟೀಕಿಸಿದ ಕಾಂಗ್ರೆಸ್

Ranji Trophy final: ಔಕಿಬ್ ನಬಿ ಬೌಲಿಂಗ್ ಮ್ಯಾಜಿಕ್‌ಗೆ ಬೆರಗಾದ ಕೆಎಲ್ ರಾಹುಲ್; ಆರಂಭದಲ್ಲೇ ಕರ್ನಾಟಕಕ್ಕೆ ಸಂಕಷ್ಟ!

T20 World cup 2026: 'ಆಕ್ರಮಣಕಾರಿ ಶೈಲಿ ಮುಂದುವರಿಸಿ': ಜಿಂಬಾಬ್ವೆ ವಿರುದ್ಧದ ಪಂದ್ಯಕ್ಕೂ ಮುನ್ನ ಟೀಂ ಇಂಡಿಯಾಗೆ ಅನಿಲ್ ಕುಂಬ್ಳೆ ಎಚ್ಚರಿಕೆ

ರಿಯಲ್ ಲೈಫ್‌ನಲ್ಲೂ ಒಂದಾದ ರೀಲ್ ಜೋಡಿ: ತೆಲುಗು ಸಂಪ್ರದಾಯದಂತೆ ರಶ್ಮಿಕಾ–ವಿಜಯ್ ವಿವಾಹ, ಸಂಜೆ ಕೊಡವ ಸಂಪ್ರದಾಯದಲ್ಲಿ ಮತ್ತೊಂದು ಸಮಾರಂಭ

SCROLL FOR NEXT