ಕೃಷ್ಣ ಬೈರೇಗೌಡ 
ರಾಜ್ಯ

ರಾಜ್ಯದಲ್ಲಿ 62 ತಾಲೂಕುಗಳಲ್ಲಿ ತೀವ್ರ ಬರ: ಸಚಿವ ಕೃಷ್ಣ ಬೈರೇಗೌಡ

ಮುಂಗಾರು ಅವಧಿಯಲ್ಲಿ ರಾಜ್ಯ ಮಳೆಯಿಲ್ಲದೇ ಬರ ಪರಿಸ್ಥಿತಿ ಎದುರಿಸಿದ್ದು, ಕೃಷಿ ಮತ್ತು ಕಂದಾಯ ಇಲಾಖೆಗಳ ಜಂಟಿ ಸಮೀಕ್ಷೆಯ ನಂತರ ರಾಜ್ಯದ 134 ತಾಲೂಕುಗಳನ್ನು ಬರಪೀಡಿತ ಎಂದು ಘೋಷಣೆ ಮಾಡಲಾಗುವುದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ.

ಬೆಂಗಳೂರು: ಮುಂಗಾರು ಅವಧಿಯಲ್ಲಿ ರಾಜ್ಯ ಮಳೆಯಿಲ್ಲದೇ ಬರ ಪರಿಸ್ಥಿತಿ ಎದುರಿಸಿದ್ದು, ಕೃಷಿ ಮತ್ತು ಕಂದಾಯ ಇಲಾಖೆಗಳ ಜಂಟಿ ಸಮೀಕ್ಷೆಯ ನಂತರ ರಾಜ್ಯದ 134 ತಾಲೂಕುಗಳನ್ನು ಬರಪೀಡಿತ ಎಂದು ಘೋಷಣೆ ಮಾಡಲಾಗುವುದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ.

ಸಂಪುಟ ಉಪಸಮಿತಿಯ ಸಭೆ ಬಳಿಕ ಮಾತನಾಡಿದ ಅವರು, ಇಂದು ನೈಸರ್ಗಿಕ ವಿಕೋಪಗಳಿಗೆ ತೀರ್ಮಾನ ತೆಗೆದುಕೊಳ್ಳುವ ಸಂಪುಟ ಉಪ ಸಮಿತಿ ಸಭೆ ಮಾಡಿದೆವು. ಇನ್ನೂ 63  ತಾಲೂಕಿನಲ್ಲಿ ಮತ್ತೆ ಬೆಳೆ ಸಮೀಕ್ಷೆ ಮಾಡಲು ತೀರ್ಮಾನ ಮಾಡಿದ್ದೇವೆ. ಕೇಂದ್ರ ಸರ್ಕಾರದ ಕಡ್ಡಾಯ ಅವಶ್ಯಕತೆ ಪ್ರಕಾರ 63 ತಾಲೂಕಿನಲ್ಲಿ ಬೆಳೆ ಸಮೀಕ್ಷೆ ಮಾಡಬೇಕಾಗುತ್ತದೆ. ಸಮೀಕ್ಷೆ ಆದ ಬಳಿಕ ಬರ ಘೋಷಣೆ ತೀರ್ಮಾನ ಮಾಡಲಾಗುತ್ತದೆ ಎಂದು ಸಚಿವರು ಮಾಹಿತಿ ನೀಡಿದರು.

ಹಾವೇರಿಯಲ್ಲಿ ಕಾಂಗ್ರೆಸ್ ಶಾಸಕರ ಅನುದಾನದಲ್ಲಿ ಮೋಡ ಬಿತ್ತನೆ ಕಾರ್ಯ!
ಕರ್ನಾಟಕದ ಹಾವೇರಿ ಜಿಲ್ಲೆಯಲ್ಲಿ ಭೀಕರ ಬರಗಾಲದಿಂದ ಕಂಗೆಟ್ಟಿರುವ ರೈತರ ಆತಂಕವನ್ನು ನಿವಾರಿಸುವ ಪ್ರಯತ್ನದಲ್ಲಿ ಕಾಂಗ್ರೆಸ್ ಶಾಸಕ ಪ್ರಕಾಶ್ ಕೆ ಕೋಳಿವಾಡ್ ಮೋಡ ಬಿತ್ತನೆ ಕಾರ್ಯಕ್ಕೆ ಚಾಲನೆ ನೀಡಿದರು. ಇನ್ನೆರಡು ದಿನ ಮೋಡ ಬಿತ್ತನೆ ನಡೆಯಲಿದೆ ಎಂದರು.

ಹುಬ್ಬಳ್ಳಿ ವಿಮಾನ ನಿಲ್ದಾಣದಿಂದ ಹಾರಾಟ ನಡೆಸಿದ ವಿಮಾನ ಹಾವೇರಿ ಜಿಲ್ಲೆಯತ್ತ ಸಾಗಿ ಅಲ್ಲಿ ತಾಲೀಮು ನಡೆಸಲಾಯಿತು. ಮೋಡ ಬಿತ್ತನೆ ಮಾಡಿದರೆ ಬರಗಾಲದ ಪರಿಸ್ಥಿತಿ ದೂರವಾಗಬಹುದು ಎಂದು ನಿರೀಕ್ಷಿಸಲಾಗಿದೆ. ಪಿಕೆಕೆ ಲಿಮಿಟೆಡ್ ಈ ಹಿಂದೆಯೂ ಕರ್ನಾಟಕದ ವಿವಿಧ ಭಾಗಗಳಲ್ಲಿ ಇದೇ ರೀತಿಯ ಚಟುವಟಿಕೆಗಳನ್ನು ನಡೆಸಿದೆ. ಕೋಳಿವಾಡ್ ಈ ಹಿಂದೆ ಸಂಸ್ಥೆಯ ಪ್ರವರ್ತಕರಾಗಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT