ಸಂಗ್ರಹ ಚಿತ್ರ 
ರಾಜ್ಯ

ಕೇಂದ್ರ/ರಾಜ್ಯ ಸರ್ಕಾರಗಳ ಆರ್ಥಿಕ ಸೇವೆಗಳ ಬಗ್ಗೆ ಜಾಗೃತಿ ಮೂಡಿಸಲು ಅಂಚೆ ಇಲಾಖೆಯಿಂದ ವಿಶಿಷ್ಟ ಅಭಿಯಾನ

ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಸೇವೆಗಳನ್ನು ಸಾರ್ವಜನಿಕರ ಅನುಕೂಲಕ್ಕಾಗಿ ಒಂದೇ ಸೂರಿನಡಿ ತರುವ ನಿಟ್ಟಿನಲ್ಲಿ ಕರ್ನಾಟಕ ಅಂಚೆ ಇಲಾಖೆ ಮುಂದಾಗಿದೆ.

ಬೆಂಗಳೂರು: ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಸೇವೆಗಳನ್ನು ಸಾರ್ವಜನಿಕರ ಅನುಕೂಲಕ್ಕಾಗಿ ಒಂದೇ ಸೂರಿನಡಿ ತರುವ ನಿಟ್ಟಿನಲ್ಲಿ ಕರ್ನಾಟಕ ಅಂಚೆ ಇಲಾಖೆ ಮುಂದಾಗಿದೆ.

ಇದರ ಮೊದಲ ಭಾಗವಾಗಿ ಶಿರಸಿ ಅಂಚೆ ವಿಭಾಗವು ಮೂರು ದಿನಗಳ ಕಾಲ “ದಕ್ ಜನ ಸಂಪರ್ಕ ಅಭಿಯಾನ” ಕಾರ್ಯಕ್ರಮವನ್ನು ಆಯೋಜಿಸಿತ್ತು. ಈ ಕಾರ್ಯಕ್ರಮವನ್ನು ಆಗಸ್ಟ್ 29 ರಿಂದ 31 ರವರೆಗೆ ಕಾಂಗೋಡು ಗ್ರಾಮದಲ್ಲಿ ಹಮ್ಮಿಕೊಳ್ಳಲಾಗಿತ್ತು.

ಈ ಅಭಿಯಾನದಲ್ಲಿ ಇಲಾಖೆಯ ವಿವಿಧ ಉಳಿತಾಯ ಯೋಜನೆಗಳು ಮತ್ತು ಅಂಚೆ ಜೀವ ವಿಮಾ ಸೌಲಭ್ಯಗಳು/ ಅಪಘಾತ ವಿಮಾ ಯೋಜನೆಗಳ ಮಾಹಿತಿಯನ್ನು ಜನರಿಗೆ ತಿಳಿಸಲಾಯಿತು. ಅಂಚೆ ಇಲಾಖೆಯ ಈ ಕಾರ್ಯಕ್ಕೆ ಗ್ರಾಮ ಪಂಚಾಯಿತಿ ಸದಸ್ಯರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

200 ಕ್ಕೂ ಹೆಚ್ಚು ಜನರು ಈ ಉಳಿತಾಯ ಯೋಜನೆಗಳನ್ನು (ಉಳಿತಾಯ ಬ್ಯಾಂಕ್ ಖಾತೆ, ಮಹಿಳಾ ಸಮ್ಮಾನ್ ಉಳಿತಾಯ ಪ್ರಮಾಣಪತ್ರ, ಸಾರ್ವಜನಿಕ ಭವಿಷ್ಯ ನಿಧಿ), ಅಂಚೆ ಜೀವ ವಿಮಾ ಸೇವೆ ಮತ್ತು ಇಂಡಿಯಾ ಪೋಸ್ಟ್ ಪೇಮೆಂಟ್ಸ್ ಬ್ಯಾಂಕ್ ಸೇವೆಗಳನ್ನು ಸದುಪಯೋಗಪಡಿಸಿಕೊಂಡಿದ್ದಾರೆ.

ಜನರಲ್ಲಿ ಆರ್ಥಿಕತೆ ಸೇವೆಗಳ ಬಗ್ಗೆ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಮತ್ತು ಸರ್ಕಾರದ ಸಾರ್ವಜನಿಕ ಸೇವೆಗಳನ್ನು ಜನರಿಗೆ ತಿಳಿಸುವ ನಿಟ್ಟಿನಲ್ಲಿ ಪ್ರತಿ ತಿಂಗಳು ಎಲ್ಲಾ ಅಂಚೆ ವಿಭಾಗಗಳಿಂದ ದಕ್ ಜನ ಸಂಪರ್ಕ ಅಭಿಯಾನವನ್ನು ವಿವಿಧ ಸ್ಥಳಗಳಲ್ಲಿ ಆಯೋಜಿಸಲಾಗುವುದು ಎಂದು ಅಂಚೆ ಇಲಾಖೆ ತಿಳಿಸಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT