ಅನುಪಮ್ ಅಗರ್ವಾಲ್(ಸಂಗ್ರಹ ಚಿತ್ರ) 
ರಾಜ್ಯ

ಮಂಗಳೂರು ನಗರ ನೂತನ ಪೊಲೀಸ್ ಆಯುಕ್ತರಾಗಿ ಐಪಿಎಸ್ ಅಧಿಕಾರಿ ಅನುಪಮ್ ಅಗರ್ವಾಲ್ ನೇಮಕ

ಕರಾವಳಿ ನಗರ ಮಂಗಳೂರಿನ ನೂತನ ಪೊಲೀಸ್ ಆಯುಕ್ತರಾಗಿ ಐಪಿಎಸ್ ಅಧಿಕಾರಿ ಅನುಪಮ್ ಅಗರ್ವಾಲ್ ನೇಮಕಗೊಂಡಿದ್ದಾರೆ. 

ಮಂಗಳೂರು: ಕರಾವಳಿ ನಗರ ಮಂಗಳೂರಿನ ನೂತನ ಪೊಲೀಸ್ ಆಯುಕ್ತರಾಗಿ ಐಪಿಎಸ್ ಅಧಿಕಾರಿ ಅನುಪಮ್ ಅಗರ್ವಾಲ್ ನೇಮಕಗೊಂಡಿದ್ದಾರೆ. 

ರಾಜ್ಯ ಸರ್ಕಾರ ಹಾಲಿ ಮಂಗಳೂರು ಪೊಲೀಸ್ ಕಮೀಷನರ್ ಆಗಿರುವ ಕುಲದೀಪ್ ಕುಮಾರ್ ಆರ್ ಜೈನ್ ಅವರು ಸೇರಿದಂತೆ 35 ಐಪಿಎಸ್ ಅಧಿಕಾರಿಗಳನ್ನು ಬೆಳ್ಳಂಬೆಳಗ್ಗೆ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ಕುಲದೀಪ್ ಅವರಿಗೆ ಇನ್ನು ಹುದ್ದೆ ತೋರಿಸಿದರೇ ವರ್ಗಾವಣೆ ಮಾಡಿದೆ. ಕುಲದೀಪ್ ಅವರು ಖಡಕ್ ಆಫೀಸರ್ ದಕ್ಷ ಮತ್ತು ಪ್ರಾಮಾಣಿಕ ಅಧಿಕಾರಿ ಎಂದು ಹೆಸರುವಾಸಿಯಾಗಿದ್ದರು.

ಮಂಗಳೂರಿನ ನೂತನ ಆಯುಕ್ತರಾಗಿರುವ ಅನುಪಮ್ ಅಗರ್ವಾಲ್ 2008-ಬ್ಯಾಚ್ IPS ಅಧಿಕಾರಿಯಾಗಿದ್ದು ಮೂಲತಃ ರಾಜಸ್ಥಾನದ ಜೋಧ್‌ಪುರದವರು. ಈ ಹಿಂದೆ ಕರ್ನಾಟಕ ಪೊಲೀಸ್ ಅಕಾಡೆಮಿಯ ನಿರ್ದೇಶಕರಾಗಿ ಸೇವೆ ಸಲ್ಲಿಸಿದ್ದರು. ದಾವಣಗೆರೆಯಲ್ಲಿ ಸಹಾಯಕ ಪೊಲೀಸ್ ವರಿಷ್ಠಾಧಿಕಾರಿಯಾಗಿ, ಬೆಳಗಾವಿಯಲ್ಲಿ ಉಪ ಪೊಲೀಸ್ ಆಯುಕ್ತರಾಗಿ, ರಾಮನಗರ ಮತ್ತು ವಿಜಯಪುರದಲ್ಲಿ ಪೊಲೀಸ್ ವರಿಷ್ಠಾಧಿಕಾರಿಯಾಗಿ ಮತ್ತು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ನಿರ್ದೇಶಕರಾಗಿಯೂ ಸೇವೆ ಸಲ್ಲಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ವೆನೆಜುವೆಲಾ ಪರಿಸ್ಥಿತಿ ನಿಮಗೂ ಬರಬಹುದು.. ತಡ ಮಾಡದೇ ನಮ್ ಜೊತೆ ಒಪ್ಪಂದ ಮಾಡ್ಕೊಳ್ಳಿ': ಕ್ಯೂಬಾಗೂ Donald Trump ಎಚ್ಚರಿಕೆ!

ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ತ್ರಿಪುರದಲ್ಲಿ ಎರಡು ಸಮುದಾಯಗಳ ನಡುವೆ ಘರ್ಷಣೆ: ಉನಕೋಟಿಯಲ್ಲಿ ಮಸೀದಿ-ಮುಸ್ಲಿಂ ಅಂಗಡಿಗಳಿಗೆ ಬೆಂಕಿ

ಒಂದು ವಾರದ ಚಿಕಿತ್ಸೆ ಬಳಿಕ ಆಸ್ಪತ್ರೆಯಿಂದ ಸೋನಿಯಾ ಗಾಂಧಿ ಡಿಸ್ಚಾರ್ಜ್!

Tubelight in his head: ಹಿಮಂತಾ ಬಿಸ್ವಾ ಶರ್ಮಾ ವಿರುದ್ಧ AIMIM ಮುಖ್ಯಸ್ಥ ಓವೈಸಿ ಕಿಡಿ! ಏನಿದು ವಿವಾದ?

SCROLL FOR NEXT