ರಾಜ್ಯ

ತಮಿಳುನಾಡಿಗೆ ಕಾವೇರಿ ನೀರು: ರಾಜ್ಯದ ರೈತ ಸಂಘಟನೆಗಳಿಂದ ಸುಪ್ರೀಂ ಕೋರ್ಟ್‌ಗೆ ಅರ್ಜಿ

Lingaraj Badiger

ಬೆಂಗಳೂರು: ಕೆಆರ್ ಎಸ್ ಡ್ಯಾಂನಿಂದ ತಮಿಳುನಾಡಿಗೆ ನೀರು ಬಿಡುವಂತೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ(ಸಿಡಬ್ಲ್ಯುಎಂಎ) ನೀಡಿರುವ ಆದೇಶ ಪ್ರಶ್ನಿಸಿ ಕರ್ನಾಟಕ ರೈತ ಸಂಘಟನೆಗಳು ಮಂಗಳವಾರ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಲಿವೆ.

ಈ ಸಂಬಂಧ ಸರ್ವೋದಯ ಕರ್ನಾಟಕ ಪಕ್ಷದ ಶಾಸಕ ದರ್ಶನ್ ಪುಟ್ಟಣ್ಣಯ್ಯ ಅವರು ದೆಹಲಿಗೆ ತೆರಳಿದ್ದು, ಹಿರಿಯ ವಕೀಲ ರವಿವರ್ಮ ಕುಮಾರ್ ಅವರ ಮೂಲಕ ಸುಪ್ರೀಂ ಕೋರ್ಟ್ ಗೆ ಸಲ್ಲಿಸಿವೆ.

ನಾವು ಬೆಳೆಗೆ ನೀರು ಕೇಳುತ್ತಿಲ್ಲ. ಬದಲಿಗೆ ಕುಡಿಯುವ ನೀರಿಗೆ ಆದ್ಯತೆ ಕೊಡಿ. ತಮಿಳುನಾಡು ಸರ್ಕಾರ ಕುರುವೈ ಬೆಳೆಗೆ ನೀರು ಕೇಳುತ್ತಿದೆ. ಮಂಡ್ಯ, ಮೈಸೂರು ಸುತ್ತಮುತ್ತ ಮೂರು ದಿನಕ್ಕೊಮ್ಮೆ ನೀರು ಬಿಡಲಾಗುತ್ತಿದೆ. ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ (CWMA) ತಂಡ ತಮಿಳುನಾಡಿಗೆ ಭೇಟಿ ನೀಡಿ ಪರಿಶೀಲನೆ ಮಾಡಿದೆ. ಆದರೆ, ಕರ್ನಾಟಕಕ್ಕೆ ಭೇಟಿ ನೀಡಿಲ್ಲ ಎಂದು ರೈತ ಸಂಘಟನೆಗಳು ಅರ್ಜಿಯಲ್ಲಿ ಉಲ್ಲೇಖಿಸಿವೆ.

ಕರ್ನಾಟಕದಲ್ಲಿ ಕಾವೇರಿ ಕಣಿವೆಯ ನೀರಿನ ಬಿಕ್ಕಟ್ಟಿನ ಪರಿಸ್ಥಿತಿಯನ್ನು ನ್ಯಾಯಾಲಯದ ಗಮನಕ್ಕೆ ತರಲಾಗುವುದು ಎಂದು ಮೂಲಗಳು ತಿಳಿಸಿವೆ.

SCROLL FOR NEXT