ರಾಜ್ಯ

ಕ್ಷೀರಭಾಗ್ಯ ದಶಮಾನೋತ್ಸವ: ಅದ್ಧೂರಿಯಾಗಿ ಆಚರಿಸಲು ರಾಜ್ಯ ಸರ್ಕಾರ ಸಿದ್ಧತೆ!

Manjula VN

ತುಮಕೂರು: ಕ್ಷೀರ ಭಾಗ್ಯ ಜಾರಿಯಾಗಿ 10 ವರ್ಷ ಪೂರೈಸಿದ್ದು, ಈ ಹಿನ್ನೆಲೆಯಲ್ಲಿ ಕಾರ್ಯಕ್ರಮವನ್ನು ಅದ್ದೂರಿಯಾಗಿ ಆಚರಿಸಲು ಸರ್ಕಾರ ಸಿದ್ಧತೆಗಳ ಆರಂಭಿಸಿದೆ.

ತುಮಕೂರು ಜಿಲ್ಲೆ ಮಧುಗಿರಿಯಲ್ಲಿ ಬೃಹತ್ ಸಮಾವೇಶ ನಡೆಸಲು ರಾಜ್ಯದ ಆಡಳಿತಾರೂಢ ಕಾಂಗ್ರೆಸ್ ಸರ್ಕಾರ ಸಿದ್ಧತೆ ನಡೆಸಿದೆ.

ಸಮಾವೇಶದಲ್ಲಿ ಒಂದು ಲಕ್ಷಕ್ಕೂ ಅಧಿಕ ಜನ ಸೇರುವ ನಿರೀಕ್ಷೆಯಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭಾಗವಹಿಸಲಿದ್ದಾರೆಂದು ತಿಳಿದುಬಂದಿದೆ.

2013ರಲ್ಲಿ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾದ ಮೊದಲ ಅವಧಿಯಲ್ಲಿ ಈ ಯೋಜನೆಗೆ ಚಾಲನೆ ನೀಡಲಾಗಿತ್ತು. ಮಹತ್ವಾಕಾಂಕ್ಷೆಯ ಕಾರ್ಯಕ್ರಮದ ಅಡಿಯಲ್ಲಿ, ಸರ್ಕಾರಿ ಶಾಲೆ ಮತ್ತು ಅಂಗನವಾಡಿ ಮಕ್ಕಳಿಗೆ ಉಚಿತವಾಗಿ ಹಾಲು ನೀಡಲಾಗುತ್ತಿದೆ.

ಸರ್ಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿ 1 ರಿಂದ 10 ನೇ ತರಗತಿಯವರೆಗೆ ಓದುತ್ತಿರುವ 65 ಲಕ್ಷಕ್ಕೂ ಹೆಚ್ಚು ಮಕ್ಕಳು ಕ್ಷೀರಭಾಗ್ಯದ ಪ್ರಯೋಜನವನ್ನು ಪಡೆಯುತ್ತಿದ್ದಾರೆ ಎಂದು ಗೃಹ ಸಚಿವ ಡಾ ಜಿ ಪರಮೇಶ್ವರ ತಿಳಿಸಿದ್ದಾರೆ.

SCROLL FOR NEXT