ಸಚಿವ ಈಶ್ವರ್‌ ಖಂಡ್ರೆ 
ರಾಜ್ಯ

ರಾಜ್ಯದಲ್ಲಿ ಪ್ರಾಣಿ ದಾಳಿಯಿಂದ ಕಳೆದ 15 ದಿನಗಳಲ್ಲಿ 11 ಜನ ಸಾವು: ಈಶ್ವರ್ ಖಂಡ್ರೆ

ರಾಜ್ಯದಲ್ಲಿ ಇತ್ತೀಚಿಗೆ ಮಾನವ ಮತ್ತು ಪ್ರಾಣಿಗಳ ನಡುವಿನ ಸಂಘರ್ಷ ಹೆಚ್ಚುತ್ತಿದ್ದು, ವನ್ಯ ಪ್ರಾಣಿಗಳ ದಾಳಿಯಿಂದ ಕಳೆದ 15 ದಿನಗಳಲ್ಲಿ 11 ಜನ ಮೃತಪಟ್ಟಿದ್ದಾರೆ. ಈ ವರ್ಷದ ಮೊದಲಾರ್ಧದಲ್ಲಿ 28 ಜನ ಮೃತ ಪಟ್ಟಿದ್ದಾರೆ ಎಂದು ಅರಣ್ಯ ಸಚಿವ...

ಬೆಂಗಳೂರು: ರಾಜ್ಯದಲ್ಲಿ ಇತ್ತೀಚಿಗೆ ಮಾನವ ಮತ್ತು ಪ್ರಾಣಿಗಳ ನಡುವಿನ ಸಂಘರ್ಷ ಹೆಚ್ಚುತ್ತಿದ್ದು, ವನ್ಯ ಪ್ರಾಣಿಗಳ ದಾಳಿಯಿಂದ ಕಳೆದ 15 ದಿನಗಳಲ್ಲಿ 11 ಜನ ಮೃತಪಟ್ಟಿದ್ದಾರೆ. ಈ ವರ್ಷದ ಮೊದಲಾರ್ಧದಲ್ಲಿ 28 ಜನ ಮೃತ ಪಟ್ಟಿದ್ದಾರೆ ಎಂದು ಅರಣ್ಯ ಸಚಿವ ಈಶ್ವರ್ ಖಂಡ್ರೆ ಅವರು ಮಂಗಳವಾರ ಹೇಳಿದ್ದಾರೆ.

ಇಂದು ವಿಧಾನಸೌಧದಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಅರಣ್ಯ ಸಚಿವರು, ರಾಜ್ಯದಲ್ಲಿ ಆನೆಗಳ ದಾಳಿಯಿಂದಲೇ ಅಧಿಕ ಸಾವು ಸಂಭವಿಸುತ್ತಿದೆ. ಕಳೆದ ಐದೂವರೆ ವರ್ಷದಲ್ಲಿ 148 ಜನ ಕಾಡಾನೆ ದಾಳಿಯಿಂದ ಮೃತಪಟ್ಟಿದ್ದಾರೆ ಎಂದು ತಿಳಿಸಿದರು.

ಜನವಸತಿ ಪ್ರದೇಶಕ್ಕೆ ಆನೆ ಬರದಂತೆ ತಡೆಯಲು 640 ಕಿಮೀ ರೈಲ್ವೆ ಬ್ಯಾರಿಕೇಡ್ ಹಾಕಬೇಕಿದೆ. ಹೆಚ್ಚುವರಿ 300 ಕಿಮೀ ರೈಲ್ವೆ ಬ್ಯಾರಿಕೇಡ್ ಹಾಕಲು ಮುಖ್ಯಮಂತ್ರಿಗಳಿಗೆ ಮನವಿ ಮಾಡಲಿದ್ದೇನೆ. 1000 ಕಿಮೀ ಸೋಲಾರ್ ತಂತಿ ಅಳವಡಿಸಲಾಗಿದೆ. 7 ಎಲಿಫೆಂಟಾ ಟಾಸ್ಕ್ ಫೋರ್ಸ್​ಗಳನ್ನು ರಚನೆ ಮಾಡಿದ್ದೇವೆ. ಇದರಲ್ಲಿ 38 ಜನ ನುರಿತವರು ಇರುತ್ತಾರೆ ಎಂದು ಈಶ್ವರ್ ಖಂಡ್ರೆ ಅವರು ಹೇಳಿದ್ದಾರೆ.

ಮಾನವ ಮತ್ತು ವನ್ಯ ಜೀವಿ ಸಂಘರ್ಷ ಇಂದು ನಿನ್ನೆಯದೇನಲ್ಲ. ಹಿಂದಿನಿಂದ ನಡೆಯುತ್ತಿದೆ. ಆದರೆ, ಅರಣ್ಯ ಪ್ರದೇಶ ಕಡಿಮೆ ಆಗುತ್ತಿದ್ದು, ಕಾಡು ಪ್ರಾಣಿಗಳ ಸಂಖ್ಯೆ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಸಂಘರ್ಷಗಳು ಹೆಚ್ಚಾಗುತ್ತಿವೆ ಎಂದು ಸಚಿವರು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test: ‘ಶ್ರೀಲಂಕಾ ಆಟಗಾರರ ವರ್ತನೆ ವೃತ್ತಿಪರವಾಗಿರಲಿಲ್ಲ’: ಬ್ಯಾಡ್ ಲೈಟ್ ವಿವಾದಕ್ಕೆ Sanjay Manjrekar ಕಿಡಿ

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel

ಮಂಡ್ಯ ಜೈಲಿನ ಕರ್ಮಕಾಂಡ ಬಯಲು: ಆಸ್ಪತ್ರೆ​​ ವಾರ್ಡ್​​​ನಲ್ಲಿ ಮಹಿಳೆ​​ ಜೊತೆ ಸಿಕ್ಕಿಬಿದ್ದ ವಿಚಾರಣಾಧೀನ ಸರ್ಕಾರಿ ಅಧಿಕಾರಿ!