ರಾಜ್ಯ

ತುಮಕೂರಿನಲ್ಲಿ ಹೆರಿಗೆ ಆಸ್ಪತ್ರೆ ನಿರ್ಮಾಣಕ್ಕೆ ಇನ್ಫೋಸಿಸ್ ಮುಂದು!

Manjula VN

ಬೆಂಗಳೂರು: ಇನ್ಫೋಸಿಸ್ ಫೌಂಡೇಷನ್‌, ಸಮಾಜಸೇವಾ ಸಂಸ್ಥೆ ಮತ್ತು ಇನ್ಫೋಸಿಸ್‌ ಸಂಸ್ಥೆಯ ಸಿಎಸ್‌ಆರ್‌ ನಿಧಿಯಿಂದ ತುಮಕೂರಿನ ಕುಣಿಗನ್ ನಲ್ಲಿ 100 ಹಾಸಿಗೆಗಳ ಹೆರಿಗೆ ಆಸ್ಪತ್ರೆಯನ್ನು ನಿರ್ಮಾಣ ಮಾಡಲು ಮುಂದಾಗಿದೆ.

ತಾಲೂಕು ಜನರಲ್ ಆಸ್ಪತ್ರೆ ಆವರಣದಲ್ಲಿ ಆಸ್ಪತ್ರೆ ನಿರ್ಮಿಸಲು 55 ಕೋಟಿ ರೂ. ನೀಡಲಾಗುತ್ತಿದ್ದು, ಕರ್ನಾಟಕ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ನಿರ್ದೇಶನಾಲಯದ ಸಹಯೋಗದೊಂದಿಗೆ ಆಸ್ಪತ್ರೆ ನಿರ್ಮಾಣ ಮಾಡಲಾಗುವುದು ಎಂದು ಇನ್ಫೋಸಿಸ್ ಹೇಳಿದೆ.

ಸಮಯೋಚಿತ, ಸಮಗ್ರ ಮತ್ತು ಕೈಗೆಟುಕುವ ದರದಲ್ಲಿ ಆರೋಗ್ಯ ಸೇವೆಯನ್ನು ಒದಗಿಸುವ ಗುರಿಯೊಂದಿಗೆ ಆಸ್ಪತ್ರೆ ನಿರ್ಮಾಣ ಮಾಡಲಾಗುತ್ತಿದ್ದು, ಪ್ರತೀ ವರ್ಷ ಸರಿಸುಮಾರು 30,000 ರೋಗಿಗಳಿಗೆ ಉತ್ತಮ-ಗುಣಮಟ್ಟದ ಚಿಕಿತ್ಸೆ, ಶಸ್ತ್ರಚಿಕಿತ್ಸೆ, ಪೂರ್ವ ಮತ್ತು ಪಸವೋತ್ತರ ಸೇವೆಗಳ ಒದಗಿಸಲಾಗುತ್ತದೆ ಎಂದು ತಿಳಿಸಿದೆ.

ಕುಣಿಗಲ್‌ನಲ್ಲಿರುವ ಗರ್ಭಿಣಿಯರು, ತಾಯಿ ಮತ್ತು ಮಕ್ಕಳಿಗೆ ಸುಲಭವಾಗಿ ಹಾಗೂ ಕೈಗೆಟುಕುವ ದರದಲ್ಲಿ ಗುಣಮಟ್ಟದ ಆರೋಗ್ಯ ಸೇವೆಯನ್ನು ಈ ಉಪಕ್ರಮ ಖಚಿತಪಡಿಸುತ್ತದೆ ಎಂದು ಡಿ.ಕೆ.ಸುರೇಶ್ ಅವರು ಹೇಳಿದ್ದಾರೆ.

SCROLL FOR NEXT