ಎಚ್‌ಡಿ ಕುಮಾರಸ್ವಾಮಿಯರನ್ನು ಭೇಟಿ ಮಾಡಿ ಆರೋಗ್ಯ ವಿಚಾರಿಸಿದ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ 
ರಾಜ್ಯ

ಎಚ್‌ಡಿ ಕುಮಾರಸ್ವಾಮಿ ಭೇಟಿ ಮಾಡಿ ಆರೋಗ್ಯ ವಿಚಾರಿಸಿದ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್

ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಸೋಮವಾರ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ನಂತರ ಜೆಡಿಎಸ್ ನಾಯಕ ಮತ್ತು ಮಾಜಿ ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ಅವರನ್ನು ಬೆಂಗಳೂರಿನ ಅವರ ನಿವಾಸದಲ್ಲಿ ಭೇಟಿ ಮಾಡಿದರು. ಈ ಕುರಿತು ಟ್ವೀಟ್ ಮಾಡಿರುವ ನಳಿನ್ ಕುಮಾರ್ ಕಟೀಲ್, ಮಾಜಿ ಸಿಎಂ ಅವರ ಆರೋಗ್ಯದ ಬಗ್ಗೆ ವಿಚಾರಿಸಿದ್ದಾಗಿ ತಿಳಿಸಿದ್ದಾರೆ.

ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಸೋಮವಾರ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ನಂತರ ಜೆಡಿಎಸ್ ನಾಯಕ ಮತ್ತು ಮಾಜಿ ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ಅವರನ್ನು ಬೆಂಗಳೂರಿನ ಅವರ ನಿವಾಸದಲ್ಲಿ ಭೇಟಿ ಮಾಡಿದರು.

ಈ ಕುರಿತು ಟ್ವೀಟ್ ಮಾಡಿರುವ ನಳಿನ್ ಕುಮಾರ್ ಕಟೀಲ್, ತಮ್ಮ ಭೇಟಿಯ ಸಮಯದಲ್ಲಿ ಮಾಜಿ ಸಿಎಂ ಅವರ ಆರೋಗ್ಯದ ಬಗ್ಗೆ ವಿಚಾರಿಸಿದ್ದಾಗಿ ತಿಳಿಸಿದ್ದಾರೆ.

ಮಾಜಿ ಮುಖ್ಯಮಂತ್ರಿಗಳಾದ ಎಚ್‌ಡಿ ಕುಮಾರಸ್ವಾಮಿ ಅವರ ನಿವಾಸಕ್ಕೆ ಇಂದು ಭೇಟಿ ನೀಡಿ ಅವರ ಆರೋಗ್ಯ ಕುಶಲೋಪರಿ ವಿಚಾರಿಸಲಾಯಿತು. ಈ ಸಂದರ್ಭದಲ್ಲಿ ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ಅಶ್ವತ್ಥ್ ನಾರಾಯಣ ಉಪಸ್ಥಿತರಿದ್ದರು ಎಂದು ಫೋಟೊ ಹಂಚಿಕೊಂಡಿದ್ದಾರೆ.

ಲಘು ಪಾರ್ಶ್ವವಾಯುವಿಗೆ ತುತ್ತಾಗಿದ್ದ ಕುಮಾರಸ್ವಾಮಿ ಅವರು ಆಗಸ್ಟ್ 30ರಂದು ಬೆಂಗಳೂರಿನ ಜಯನಗರದ ಅಪೋಲೋ ಆಸ್ಪತ್ರೆಗೆ ದಾಖಲಾಗಿದ್ದರು. 

ಸೆಪ್ಟಂಬರ್ 3ರಂದು ಡಿಸ್ಚಾರ್ಜ್​ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ್ದ ಕುಮಾರಸ್ವಾಮಿ, ಭಗವಂತನ ದಯೆ, ವೈದ್ಯರು ಹಾಗೂ ತಂದೆ, ತಾಯಿ ಆಶೀರ್ವಾದದಿಂದ ಗುಣಮುಖನಾಗಿದ್ದೇನೆ. ಕಳೆದ 5 ದಿನಗಳಿಂದ ಸ್ನೇಹಿತರಲ್ಲಿ ಭಯದ ವಾತಾವರಣ ಇತ್ತು. ನಿಖರವಾದ ಆರೋಗ್ಯದ ಮಾಹಿತಿಯನ್ನೂ ನೀವು ಕೊಟ್ಟಿದ್ದೀರಿ. ತಂದೆ-ತಾಯಿ‌ ಆಶೀರ್ವಾದದಿಂದ ಪುನರ್ಜನ್ಮ ಸಿಕ್ಕಿದೆ ಎಂದಿದ್ದರು. 

ಪಾರ್ಶ್ವವಾಯು ಆದಾಗ ಯಾವಾಗ ರೀತಿ ಸ್ಪಂದಿಸಬೇಕು ಎಂದು ಈಗಷ್ಟೇ ವೈದ್ಯರು ಹೇಳಿದ್ದಾರೆ. ಇದನ್ನ ನಿರ್ಲಕ್ಷ್ಯ ಮಾಡಬೇಡಿ. ಇದು ಗೋಲ್ಡನ್ ಟೈಂ. ಜೀವನ ಪರ್ಯಂತ ಕಾಡುವಂತೆ ಮಾಡಿಕೊಳ್ಳುವುದು ಬೇಡ. ಇದು ಮೂರನೇ ಜನ್ಮವನ್ನು ನನಗೆ ಭಗವಂತ ಕೊಟ್ಟಿದ್ದಾನೆ. 64 ವರ್ಷದಲ್ಲಿ ಮೂರು ಬಾರಿ ಮರುಜನ್ಮ ಪಡೆದಿದ್ದೇನೆ. ವೈದ್ಯಕೀಯ ಹಾಗೂ ಭಗವಂತನ ದಯೆಯಿಂದ ಇಳಿದಿದ್ದೇನೆ. ನಾನು ನಿರ್ಲಕ್ಷ್ಯ ಮಾಡಿದಿದ್ದರೆ ನಿಮ್ಮೊಂದಿಗೆ ಈಗ ಸಹಜವಾಗಿ ಮಾತನಾಡಲು ಸಾಧ್ಯವಾಗುತ್ತಿರಲಿಲ್ಲ ಎಂದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮತಗಳ್ಳತನ' ನಡೆದಿರುವುದನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ನಿರಾಕರಿಸಲಿಲ್ಲ, ನನಗೆ ಆಶ್ಚರ್ಯವಾಯಿತು: ರಾಹುಲ್ ಗಾಂಧಿ

ಬೆಂಗಳೂರು: ನಮ್ಮ ಮೆಟ್ರೋದಲ್ಲಿ Alt News ಸಹ ಸ್ಥಾಪಕ ಮೊಹಮ್ಮದ್ ಜುಬೈರ್ ಗೆ ಹಿಗ್ಗಾಮುಗ್ಗ ಥಳಿತ?, Video Viral

19ನೇ ಓವರ್‌ನಲ್ಲೇ 250 ರನ್ ಚೇಸ್: ಟಿ20 ಕ್ರಿಕೆಟ್‌ನಲ್ಲಿ ಭಾರತವನ್ನು ಸೋಲಿಸಿ ದಾಖಲೆ ಬರೆದ ವಿಂಡೀಸ್

CJP Protest: ಭಾರತದ ಯುವಕರು ದೆಹಲಿಗೆ ತಲುಪುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ: ಚಿರಾಗ್ ಪಾಸ್ವಾನ್

24 ಗಂಟೆ ಇಂಟರ್ನೆಟ್ ಕಟ್, 57 ಮೆಟ್ರೋ ನಿಲ್ದಾಣ ಬಂದ್: ಸಿಜೆಪಿ ಪ್ರತಿಭಟನೆಗೂ ಮುನ್ನ ದೆಹಲಿ ಹೈ ಅಲರ್ಟ್