ರಾಜ್ಯ

ಹಿಂದೂ ಧರ್ಮ ಹುಟ್ಟಿದ್ದು ಯಾವಾಗ, ಯಾರು ಹುಟ್ಟಿಸಿದರು ಎಂಬುದೇ ಪ್ರಶ್ನೆ: ಸಚಿವ ಜಿ ಪರಮೇಶ್ವರ್

Vishwanath S

ತುಮಕೂರು: ಸನಾತನ ಧರ್ಮದ ಕುರಿತು ತಮಿಳುನಾಡು ಸಚಿವ ಉದಯನಿಧಿ ಸ್ಟಾಲಿನ್ ಹೇಳಿಕೆ ಇದೀಗ ತೀವ್ರ ಸ್ವರೂಪ ಪಡೆದುಕೊಂಡಿದೆ. ಈ ಮಧ್ಯೆ ಹಿಂದೂ ಧರ್ಮ ಹುಟ್ಟಿದ್ದು ಯಾವಾಗ, ಯಾರು ಹುಟ್ಟಿಸಿದರು ಎಂಬುದೇ ಪ್ರಶ್ನೆ ಎಂದು ಗೃಹ ಇಲಾಖೆ ಸಚಿವ ಜಿ ಪರಮೇಶ್ವರ್ ಹೇಳಿದ್ದಾರೆ.

ಕೊರಟಗೆರೆಯಲ್ಲಿ ನಡೆದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಪರಮೇಶ್ವರ್, ಜಗತ್ತಿನಲ್ಲಿ ಅನೇಕ ಧರ್ಮಗಳು ಹುಟ್ಟಿಕೊಂಡಿವೆ. ಹಿಂದೂ ಧರ್ಮವನ್ನು ಹುಟ್ಟಿಸಿದ್ದು ಯಾರು, ಯಾವಾಗ ಹುಟ್ಟಿತು ಎಂಬುದು ಇನ್ನೂ ಪ್ರಶ್ನಾರ್ಥಕ ಚಿಹ್ನೆಯಾಗಿಯೇ ಉಳಿದಿದೆ ಎಂದರು.

ಬೌದ್ಧ ಧರ್ಮ ಹಾಗೂ ಜೈನ ಧರ್ಮ ನಮ್ಮ ಭಾರತದಲ್ಲೇ ಹುಟ್ಟಿತ್ತು. ಹೊರಗಿನಿಂದ ಕ್ರೈಸ್ತ ಧರ್ಮ ಹಾಗೂ ಇಸ್ಲಾಂ ಬಂದಿವೆ. ಎಲ್ಲಾ ಧರ್ಮಗಳ ಸಾರಾಂಶ ಮನುಕುಲಕ್ಕೆ ಒಳ್ಳೆಯದ್ದು ಆಗಲಿ ಎಂಬುದೇ ಆಗಿದೆ ಎಂದು ಪರಮೇಶ್ವರ್ ಹೇಳಿದ್ದಾರೆ.

ಉದಯನಿಧಿ ಸ್ಟಾಲಿನ್ ಹೇಳಿಕೆಗೆ ಬಿಜೆಪಿ ತೀವ್ರ ವಿರೋಧ ವ್ಯಕ್ತಪಡಿಸಿದ್ದರೆ ಇತ್ತ ಕಾಂಗ್ರೆಸ್ ಅಂತರ ಕಾಯ್ದುಕೊಂಡಿದ್ದರೂ ಕೆಲ ನಾಯಕರು ಮಾತ್ರ ಪರವಾಗಿ ಮಾತನಾಡುತ್ತಿದ್ದಾರೆ.

SCROLL FOR NEXT