ಕೃಷ್ಣ ಜಯಂತಿ ಕಾರ್ಯಕ್ರಮದಲ್ಲಿ ಸಿದ್ದರಾಮಯ್ಯ 
ರಾಜ್ಯ

ಧರ್ಮಕ್ಕೋಸ್ಕರ ಮನುಷ್ಯ ಅಲ್ಲ, ಮನುಷ್ಯನಿಗಾಗಿ ಧರ್ಮ: ಮುಖ್ಯಮಂತ್ರಿ ಸಿದ್ದರಾಮಯ್ಯ

ಧರ್ಮಕ್ಕೋಸ್ಕರ ಮನುಷ್ಯ ಅಲ್ಲ. ಮನುಷ್ಯನಿಗಾಗಿ ಧರ್ಮ ಇದೆ. ಮಾನವನಾಗಿ ಹುಟ್ಟಿದ ಕೃಷ್ಣ ಯಾವತ್ತೂ ಕೈಯಲ್ಲಿ ಶಸ್ತ್ರ ಹಿಡಿಯದೆ ದೈವತ್ವಕ್ಕೆ ಏರಿದ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು.

ಬೆಂಗಳೂರು: ಧರ್ಮಕ್ಕೋಸ್ಕರ ಮನುಷ್ಯ ಅಲ್ಲ. ಮನುಷ್ಯನಿಗಾಗಿ ಧರ್ಮ ಇದೆ. ಮಾನವನಾಗಿ ಹುಟ್ಟಿದ ಕೃಷ್ಣ ಯಾವತ್ತೂ ಕೈಯಲ್ಲಿ ಶಸ್ತ್ರ ಹಿಡಿಯದೆ ದೈವತ್ವಕ್ಕೆ ಏರಿದ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ರವೀಂದ್ರ ಕಲಾ ಕ್ಷೇತ್ರದಲ್ಲಿ ಹಮ್ಮಿಕೊಂಡಿದ್ದ ಶ್ರೀ ಕೃಷ್ಣ ಜಯಂತಿಯನ್ನು‌ ಉದ್ಘಾಟಿಸಿ ಮಾತನಾಡಿದರು.

ಮನುಷ್ಯ ಮನುಷ್ಯನನ್ನು ಪ್ರೀತಿಸುವುದೇ ಧರ್ಮ. ಧರ್ಮದ ಹೆಸರಿನಲ್ಲಿ ಮನುಷ್ಯರನ್ನು ದ್ವೇಷಿಸುವುದು ಅಧರ್ಮ. ಮನುಷ್ಯ ದ್ವೇಷದ ಅಧರ್ಮದ ವಿರುದ್ಧವೇ ಕೃಷ್ಣ ಕೈಯಲ್ಲಿ ಶಸ್ತ್ರ ಹಿಡಿಯದೆ ಹೋರಾಡಿ ಧರ್ಮ ಸ್ಥಾಪನೆ ಮಾಡಿದ ಎಂದರು.

ನಮ್ಮ ಸ್ವಾತಂತ್ರ್ಯ ಹೋರಾಟಗಾರರ ಕನಸು ಕೂಡ ಮನುಷ್ಯ ಪ್ರೀತಿಯ ಸಮಾನತೆಯ ಸಮಾಜ ಸೃಷ್ಟಿ ಆಗಬೇಕು ಎನ್ನುವುದಾಗಿತ್ತು. ಸ್ವತಂತ್ರ ಭಾರತಕ್ಕೆ ಸಂವಿಧಾನ ಕೊಟ್ಟ ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಆಶಯವೂ ಇದೇ ಆಗಿತ್ತು. ಪ್ರತಿಯೊಬ್ಬರಿಗೂ ಅವರವರ ಇಷ್ಟದ ಧರ್ಮವನ್ಮು ಒಪ್ಪಿಕೊಳ್ಳುವ, ಆಚರಿಸುವ ಸ್ವಾತಂತ್ರ್ಯವನ್ನು ನೀಡಿತು. ಜಾತಿ, ಧರ್ಮ ಆಧಾರಿತ ತಾರತಮ್ಯ ಮತ್ತು ಅಸಮಾನತೆಯನ್ನು ಸಂವಿಧಾನಬಾಹಿರ ಎಂದು ಅಂಬೇಡ್ಕರ್ ಘೋಷಿಸಿದರು.

ಹೀಗಾಗಿ ಸಂವಿಧಾನವನ್ನು ರಕ್ಷಿಸುವವರ ಕೈಯಲ್ಲಿ ಅಧಿಕಾರ ಇರಬೇಕು. ಸಂವಿಧಾನ ವಿರೋಧಿಗಳ ಕೈಗೆ ದೇಶದ ಅಧಿಕಾರವನ್ನು ನೀಡಿ ಪರಿತಪಿಸಬೇಡಿ ಎಂದು ಕಿವಿಮಾತು ಹೇಳಿದರು.

ಯಾದವ ಸಮುದಾಯದ ಪ್ರತಿಯೊಬ್ಬರೂ ಶಿಕ್ಷಣ ಪಡೆದಾಗ ಮಾತ್ರ ತಾರತಮ್ಯದಿಂದ ಹೊರಗೆ ಬರಬಹುದು. ಶಿಕ್ಷಣದ ಮೂಲಕ ಅಸಮಾನತೆಯನ್ನು ತೊಡೆದು ಹಾಕಬಹುದು. ಯಾದವ ಸಮುದಾಯದ ಯಾರೊಬ್ಬರೂ ಶಾಸಕರಾಗಿ ಗೆಲ್ಲದ ಕಾರಣದಿಂದ ನಾನು ಈ ಸಮುದಾಯಕ್ಕೆ ಸೇರಿದ ನಾಗರಾಜ ಯಾದವರನ್ನು ಕರೆದು ವಿಧಾನ ಪರಿಷತ್ ಸದಸ್ಯರನ್ನಾಗಿ ಮಾಡಿದ್ದೆ. ಇದೇ ರೀತಿ ಸಮುದಾಯದ ಹಲವು ಮಂದಿಗೆ ನಾನಾ ರೀತಿಯ ರಾಜಕೀಯ ಪ್ರಾತಿನಿಧ್ಯ , ಅವಕಾಶಗಳನ್ನು ನಾನು ಒದಗಿಸಿದ್ದೇನೆ ಎಂದರು.

ಗೊಲ್ಲ, ಕಾಡುಗೊಲ್ಲ ಸಮುದಾಯವನ್ನು ಎಸ್ ಟಿ ಗೆ ಸೇರಿಸಿ ಎಂದು ಕೇಂದ್ರಕ್ಕೆ ಶಿಫಾರಸ್ಸು ಮಾಡಿದ್ದೇನೆ. ಕೇಂದ್ರ ಸರ್ಕಾರ ಹಿಡ್ಕೊಂಡು ಕುಳಿತಿದೆ. ರಾಜ್ಯ ಸರ್ಕಾರಕ್ಕೆ ಅಧಿಕಾರ ಇದ್ದಿದ್ದರೆ ಇಷ್ಟೊತ್ತಿಗೆ ನಾನೇ ಮಾಡಿ ಮುಗಿಸುತ್ತಿದ್ದೆ.  ಆದರೂ ನಮ್ಮ ಶಿಫಾರಸ್ಸನ್ನು ಜಾರಿ ಮಾಡುವಂತೆ ಕೇಂದ್ರಕ್ಕೆ ಒತ್ತಡ ಹಾಕುತ್ತೇವೆ. ಮೀಸಲಾತಿ ಪ್ರಮಾಣವನ್ನು ಶೇ 50 ಕ್ಕಿಂತ ಹೆಚ್ಚಿಸಲು ಕಾನೂನು ತರಲು ಅಗತ್ಯ ಕ್ರಮ ಕೈಮ ಕೈಗೊಂಡು ಕೇಂದ್ರಕ್ಕೆ ಪತ್ರ ಬರೆಯುತ್ತೇನೆ ಎಂದು ಮುಖ್ಯಮಂತ್ರಿಗಳು ಭರವಸೆ ನೀಡಿದರು.

ಯಾದವ ಸಮುದಾಯದ ಒಬ್ಬರನ್ನು ಕೆಪಿಎಸ್ ಸಿ ಸದಸ್ಯರನ್ನಾಗಿ ಮಾಡಿ ಎನ್ನುವ ಬೇಡಿಕೆ ಇದೆ. ಮುಂದೆ ಅವಕಾಶ ಒದಗಿಸುತ್ತೇನೆ. ನಾನು ಸಾಮಾಜಿಕ ನ್ಯಾಯದಿಂದ ವಂಚಿತರಾದ ಎಲ್ಲಾ ಜಾತಿ ಸಮುದಾಯಗಳ ಪರವಾಗಿ ನಾನು ಇರುತ್ತೇನೆ‌. ಸಾಮಾಜಿಕ ನ್ಯಾಯದ ಹಿತಾಸಕ್ತಿ ಕಾಪಾಡುತ್ತೇನೆ ಎಂದು ಭರವಸೆ ನೀಡಿದರು.

ಚಿತ್ರದುರ್ಗ ಜಿಲ್ಲೆ ಶ್ರೀ ಕೃಷ್ಣ ಯಾದವ ಮಹಾಸಂಸ್ಥಾನ ಮಠದ ಯಾದವಾನಂದ ಶ್ರೀಗಳು ದಿವ್ಯ ಸಾನ್ನಿಧ್ಯ ವಹಿಸಿದ್ದ ಕಾರ್ಯಕ್ರಮದಲ್ಲಿ ಕನ್ನಡ ಮತ್ತು ಸಂಸ್ಕೃತಿ ಸಚಿವರಾದ ಶಿವರಾಜ್ ಎಸ್ ತಂಗಡಗಿ ಪ್ರಾಸ್ತಾವಿಕ ನುಡಿಗಳನ್ನು ಆಡಿದರು. ವಿಧಾನ‌ ಪರಿಷತ್ ಸದಸ್ಯ ನಾಗರಾಜ್ ಯಾದವ್, ಮುಖ್ಯಮಂತ್ರಿಗಳ ರಾಜಕೀಯ ಸಲಹೆಗಾರರಾದ ನಸೀರ್ ಅಹಮದ್ ಸೇರಿ ಹಲವು ಮುಖಂಡರು ಉಪಸ್ಥಿತರಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ನಮ್ಮ ಪಾತ್ರವಿಲ್ಲ': ಆಫ್ಘನ್ ಸಚಿವರ ಸುದ್ದಿಗೋಷ್ಠಿ ವೇಳೆ ಮಹಿಳಾ ಪತ್ರಕರ್ತೆಯರಿಗೆ ನಿರ್ಬಂಧ ಕುರಿತು 'ಕೇಂದ್ರ' ಸ್ಪಷ್ಟನೆ

'ನಂಗೇ ಕೊಡಿ ಎಂದು ನಾನೇನು ಕೇಳಿಲ್ಲ..': ನೊಬೆಲ್ ಶಾಂತಿ ಪ್ರಶಸ್ತಿ ಕುರಿತು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಾತು!

ಬ್ಯಾಂಕ್‌ಗೆ ನಕಲಿ ಗ್ಯಾರಂಟಿ: ರಿಲಯನ್ಸ್‌ ಪವರ್‌ನ ಮುಖ್ಯ ಹಣಕಾಸು ಅಧಿಕಾರಿ ಅಶೋಕ್ ಪಾಲ್ ಬಂಧನ

2nd test, Day 2: 518 ರನ್ ಗಳಿಗೆ ಭಾರತ ಇನ್ನಿಂಗ್ಸ್ ಡಿಕ್ಲೇರ್!

CM ಆಗುವ ಕಾಲ ಹತ್ತಿರ ಬಂದಿದೆ ಎಂದು ನಾನು ಹೇಳಿಲ್ಲ: ಸುದ್ದಿ ತಿರುಚಿ ಪ್ರಸಾರ ಮಾಡಿದರೆ ಮಾನನಷ್ಟ ಮೊಕದ್ದಮೆ ಅನಿವಾರ್ಯ; ಡಿ ಕೆ ಶಿವಕುಮಾರ್

SCROLL FOR NEXT