ಭಾರತ್ ಜೋಡೋ ಯಾತ್ರೆ(ಸಂಗ್ರಹ ಚಿತ್ರ) 
ರಾಜ್ಯ

ರಾಹುಲ್ ಗಾಂಧಿ ಭಾರತ್ ಜೋಡೋ ಯಾತ್ರೆಗೆ ವರ್ಷಾಚರಣೆ: ಕೆಪಿಸಿಸಿ ವತಿಯಿಂದ ರಾಮನಗರದಲ್ಲಿ ಬೃಹತ್ ಕಾರ್ಯಕ್ರಮ

ಭಾರತ್ ಜೋಡೋ ಯಾತ್ರೆಗೆ ಒಂದು ವರ್ಷ ತುಂಬುತ್ತಿರುವ ಹಿನ್ನೆಲೆಯಲ್ಲಿ ಗುರುವಾರ ರಾಮನಗರದಲ್ಲಿ ಕಾಂಗ್ರೆಸ್ ಕಾರ್ಯಕ್ರಮ ಹಮ್ಮಿಕೊಂಡಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಹಲವು ನಾಯಕರು ಭಾಗವಹಿಸಲಿದ್ದಾರೆ.

ಬೆಂಗಳೂರು: ಭಾರತ್ ಜೋಡೋ ಯಾತ್ರೆಗೆ ಒಂದು ವರ್ಷ ತುಂಬುತ್ತಿರುವ ಹಿನ್ನೆಲೆಯಲ್ಲಿ ಗುರುವಾರ ರಾಮನಗರದಲ್ಲಿ ಕಾಂಗ್ರೆಸ್ ಕಾರ್ಯಕ್ರಮ ಹಮ್ಮಿಕೊಂಡಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಹಲವು ನಾಯಕರು ಭಾಗವಹಿಸಲಿದ್ದಾರೆ.

ಮಂಗಳವಾರ ಕನಕಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಪಾದಯಾತ್ರೆಯ ವಾರ್ಷಿಕೋತ್ಸವದ ಅಂಗವಾಗಿ ಅಖಿಲ ಭಾರತ ಕಾಂಗ್ರೆಸ್ ಸಮಿತಿ (ಎಐಸಿಸಿ) ದೇಶಾದ್ಯಂತ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲು ನಿರ್ಧರಿಸಿದೆ.

ಅದರ ಭಾಗವಾಗಿ ರಾಮನಗರದಲ್ಲಿ ರಾಜ್ಯ ಕಾಂಗ್ರೆಸ್ ಪಾದಯಾತ್ರೆ ಹಮ್ಮಿಕೊಂಡಿದೆ. ಬೆಂಗಳೂರಿನಲ್ಲಿ ಕಾರ್ಯಕ್ರಮ ನಡೆಸಲು ನಿರ್ಧರಿಸಲಾಗಿತ್ತು ಆದರೆ ಸಂಚಾರಕ್ಕೆ ತೊಂದರೆಯಾಗುವುದರಿಂದ ಸ್ಥಳ ಬದಲಾಯಿಸುವಂತೆ ಸೂಚಿಸಿದ್ದೇನೆ ಎಂದು ಶಿವಕುಮಾರ್ ಹೇಳಿದ್ದಾರೆ.

ಕೆಪಿಸಿಸಿ ಅಧ್ಯಕ್ಷ ಶಿವಕುಮಾರ್ ಮತ್ತು ಸಿಎಂ ಸಿದ್ದರಾಮಯ್ಯ ಅವರು ಸಾರ್ವಜನಿಕರೊಂದಿಗೆ ರಾಮನಗರದಲ್ಲಿ ಒಂದು ಗಂಟೆ ಪಾದಯಾತ್ರೆ ನಡೆಸಲಿದ್ದಾರೆ ಎಂದು ತಿಳಿಸಿದರು.

ಗುರುವಾರ ಸಂಪುಟ ಸಭೆ ನಡೆಯಲಿರುವ ಕಾರಣ ಶುಕ್ರವಾರ ಕಾರ್ಯಕ್ರಮ ನಡೆಸಲು ಸಚಿವರಿಗೆ ಮನವಿ ಮಾಡಲಾಗುವುದು ಎಂದು ಶಿವಕುಮಾರ್ ತಿಳಿಸಿದರು. ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಪಾದಯಾತ್ರೆಯನ್ನು ಆಯೋಜಿಸಲಾಗುವುದು ಎಂದು ಅವರು ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

30 ನಿಮಿಷಗಳಲ್ಲಿ ಹಿಂದಕ್ಕೆ ಹೋಗಿ: ಶಾಂತಿ ಮಾತುಕತೆ ಮಧ್ಯೆ ಹಾರ್ಮುಜ್'ಗೆ ನುಗ್ಗಿದ ಅಮೆರಿಕದ Destroyer ಯುದ್ಧನೌಕೆಗೆ ಇರಾನ್ ಎಚ್ಚರಿಕೆ!

"ಇರಾನ್ ದೊಡ್ಡ ಮಟ್ಟದಲ್ಲಿ ಸೋಲುತ್ತಿದೆ": ಮಾತುಕತೆ ಮುಕ್ತಾಯಕ್ಕೂ ಮುನ್ನ ಟ್ರಂಪ್ ಘೋಷಣೆ

IPL 2026: ಸ್ಯಾಮ್ಸನ್ ಬ್ಯಾಟಿಂಗ್ ಅಬ್ಬರ; DC ವಿರುದ್ಧ CSK ಗೆ 23 ರನ್ ಗಳ ಭರ್ಜರಿ ಜಯ

ಖ್ಯಾತ ಗಾಯಕಿ ಆಶಾ ಭೋಸ್ಲೆಗೆ ಹೃದಯಾಘಾತ: ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲು

IPL 2026: ಚೆನ್ನೈ ಪರ ಸಂಜು ಸ್ಯಾಮ್ಸನ್ ಸ್ಫೋಟಕ ಬ್ಯಾಟಿಂಗ್; MS ಧೋನಿ ದಾಖಲೆ ಪುಡಿ; ದಿಗ್ಗಜರ ಗುಂಪಿಗೆ ಸೇರ್ಪಡೆ

SCROLL FOR NEXT