ರಾಜ್ಯ

ಬಳ್ಳಾರಿ: ಜಿಲ್ಲೆಯಲ್ಲಿ ಆಗಸ್ಟ್ ನಲ್ಲಿ 10 ವರ್ಷಗಳಲ್ಲೇ ಅತ್ಯಂತ ಕಡಿಮೆ ಮಳೆ!

Nagaraja AB

ಬಳ್ಳಾರಿ: ಬಳ್ಳಾರಿ ಜಿಲ್ಲೆಯಲ್ಲಿ ಆಗಸ್ಟ್ ತಿಂಗಳಲ್ಲಿ ಕಳೆದ 10 ವರ್ಷಗಳಲ್ಲೇ ಅತ್ಯಂತ ಕಡಿಮೆ ಮಳೆಯಾಗಿದ್ದು, ಶೇ. 45 ರಷ್ಟು ಮಳೆ ಕೊರತೆಯಾಗಿದೆ. ಜಿಲ್ಲೆಯಲ್ಲಿ ಬರಗಾಲದ ಪರಿಸ್ಥಿತಿ ಎದುರಾಗಿದ್ದು, ರೈತರು ಬೆಳೆ ಉಳಿಸಿಕೊಳ್ಳಲು ಹರಸಾಹಸ ಪಡುತ್ತಿದ್ದಾರೆ.

ಭತ್ತ ಇಲ್ಲಿನ ಪ್ರಮುಖ ಬೆಳೆಯಾಗಿದೆ. ಅದಕ್ಕೆ ಹೆಚ್ಚಿನ ಪ್ರಮಾಣದಲ್ಲಿ ನೀರಿನ ಅಗತ್ಯವಿರುವುದರಿಂದ ಬೆಳೆಗಾಗರರು ಟ್ರ್ಯಾಕ್ಟರ್‌ಗಳಲ್ಲಿ ನೀರು ಪಡೆದು ಹೊಲಗಳಿಗೆ ನೀರುಣಿಸುತ್ತಿದ್ದಾರೆ. ಬಳ್ಳಾರಿ, ಸಿರುಗುಪ್ಪ, ಕಂಪ್ಲಿ ಮತ್ತು ಕುರುಗೋಡು ತಾಲೂಕುಗಳಲ್ಲಿ ಹೆಚ್ಚು ಹಾನಿಯಾಗಿದೆ. ಸಾಮಾನ್ಯ ವರ್ಷದಲ್ಲಿ ತುಂಗಭದ್ರಾ ಕಾಲುವೆ ಮೂಲಕ ಈ ಹೊಲಗಳಿಗೆ ನೀರು ಹರಿಸಲಾಗುತ್ತದೆ. ಆದರೆ ಈ ವರ್ಷ ಮಳೆ ಕೊರತೆಯಿಂದ ಕಾಲುವೆಗೆ ನೀರು ಬಿಡುವಲ್ಲಿ ಅಧಿಕಾರಿಗಳು ವಿಫಲರಾಗಿದ್ದಾರೆ.

''1,78,97 ಹೆಕ್ಟೇರ್‌ನಲ್ಲಿ ಕೃಷಿ ಚಟುವಟಿಕೆಗಳು ನಡೆದಿವೆ. ಈ ವರ್ಷ ಸರಾಸರಿ 276 ಮಿ.ಮೀ ನಂತೆ ಕೇವಲ 176 ಮಿ.ಮೀ ಮಳೆಯಾಗಿದೆ. ಕಳೆದ ವರ್ಷ ಜಿಲ್ಲೆಯಲ್ಲಿ ವಾಡಿಕೆಗಿಂತ ಶೇ.30ರಷ್ಟು ಹೆಚ್ಚಾಗಿ 795 ಮಿ.ಮೀ. ಮಳೆಯಾಗಿತ್ತು.
ಈ ವರ್ಷ ಜಿಲ್ಲೆಯ ಕುಡಿಯುವ ನೀರಿನ ಅಗತ್ಯವನ್ನು ಪೂರೈಸಲು ಕಷ್ಟವಾಗಬಹುದು ಎಂದು ಹೆಸರು ಹೇಳಲು ಇಚ್ಚಿಸದ ಕೃಷಿ ಅಧಿಕಾರಿಯೊಬ್ಬರು ಹೇಳಿದರು.

ಬೆಳೆ ಉಳಿಸಿಕೊಳ್ಳಲು ಹರಸಾಹಸ ಪಡುತ್ತಿರುವುದಾಗಿ ತಿಳಿಸಿದ ಕುರುಗೋಡು ರೈತ ಶಾಂತಕುಮಾರ್, ಸರ್ಕಾರ ಬೆಳೆ ಹಾನಿಯನ್ನು ಅಂದಾಜಿಸಿ ಶೀಘ್ರ ಪರಿಹಾರ ಘೋಷಿಸಬೇಕು ಎಂದು ಒತ್ತಾಯಿಸಿದರು. ಜಿಲ್ಲೆಯಲ್ಲಿ ಕಳೆದ ಎರಡು ದಿನಗಳಲ್ಲಿ ಉತ್ತಮ ಮಳೆಯಾಗಿದೆ, ಆದರೆ ಮುಂಬರುವ ಬರಗಾಲದಂತಹ ಪರಿಸ್ಥಿತಿಯನ್ನು ನೀಗಿಸಲು ಇದು ಸಾಕಾಗುವುದಿಲ್ಲ ಎಂದು ಕೃಷಿ ಅಧಿಕಾರಿ ಹೇಳಿದರು.

SCROLL FOR NEXT