ಸಾಂದರ್ಭಿಕ ಚಿತ್ರ 
ರಾಜ್ಯ

ಬೆಂಗಳೂರು: BMTC ಬಸ್‌ನಲ್ಲಿದ್ದ ಎಐ ಕ್ಯಾಮೆರಾ ಸಹಾಯದಿಂದ ಕಳ್ಳನನ್ನು ಹಿಡಿದ ಪೊಲೀಸರು!

ಸಂಜಯನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಮನೆ ಕಳ್ಳತನಕ್ಕೆ ಸಂಬಂಧಿಸಿದಂತೆ ಬೆಂಗಳೂರು ಉತ್ತರ ವಿಭಾಗದ ಪೊಲೀಸರು ಬಿಎಂಟಿಸಿ ಸಿಸಿಟಿವಿ ಕ್ಯಾಮೆರಾ ಸಹಾಯದಿಂದ ಪಶ್ಚಿಮ ಬಂಗಾಳ ಮೂಲದ ವ್ಯಕ್ತಿಯನ್ನು ಬಂಧಿಸಿದ್ದಾರೆ.

ಬೆಂಗಳೂರು: ಸಂಜಯನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಮನೆ ಕಳ್ಳತನಕ್ಕೆ ಸಂಬಂಧಿಸಿದಂತೆ ಬೆಂಗಳೂರು ಉತ್ತರ ವಿಭಾಗದ ಪೊಲೀಸರು ಬಿಎಂಟಿಸಿ ಸಿಸಿಟಿವಿ ಕ್ಯಾಮೆರಾ ಸಹಾಯದಿಂದ ಪಶ್ಚಿಮ ಬಂಗಾಳ ಮೂಲದ ವ್ಯಕ್ತಿಯನ್ನು ಬಂಧಿಸಿದ್ದಾರೆ.

ಸಂಜಯನಗರದ ಪಟೇಲಪ್ಪ ಲೇಔಟ್‌ನಲ್ಲಿರುವ ಮನೆಯೊಂದರಲ್ಲಿ 211 ಗ್ರಾಂ ಚಿನ್ನಾಭರಣ ಹಾಗೂ 10 ಲಕ್ಷ ರೂ.ಗಳನ್ನು ಕಳ್ಳತನ ಮಾಡಿದ್ದ 28 ವರ್ಷದ ಆರೋಪಿ ಜಾಲಹಳ್ಳಿ ನಿವಾಸಿ ಸುಬ್ರತಾ ಮೊಂಡಲ್ ಎಂಬಾತನನ್ನು ಬಂಧಿಸಲಾಗಿದೆ. ಮೊಂಡೋಲ್ ಹಲವು ಮನೆ ಕಳ್ಳತನ ಪ್ರಕರಣದಲ್ಲಿ ಭಾಗಿಯಾಗಿದ್ದಕ್ಕಾಗಿ ಈತನ ವಿರುದ್ಧ ಯಶವಂತಪುರ ಪೊಲೀಸ್ ಠಾಣೆಯಲ್ಲಿ ಈ ಹಿಂದೆ ಪ್ರಕರಣ ದಾಖಲಾಗಿತ್ತು.

ಮನೆ ಮಾಲೀಕ ರಾಮಯ್ಯ ಶೆಟ್ಟಿ ದೂರು ಸಲ್ಲಿಸಿದ್ದು, ಕುಟುಂಬದ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಳ್ಳಲು ಆಗಸ್ಟ್ 27 ರಂದು ಮಧ್ಯಾಹ್ನದ ಸುಮಾರಿಗೆ ತಾವು ಮತ್ತು ತಮ್ಮ ಕುಟುಂಬದವರು ಹೊರಗೆ ಹೋಗಿದ್ದರು. ಎರಡು ಗಂಟೆಗಳಲ್ಲಿ ಹಿಂದಿರುಗಿದಾಗ, ಗೇಟ್ ತೆರೆದಿರುವುದನ್ನು ಕಂಡು ಬಂದಿದೆ. ಮನೆಯೊಳಗೆ ಹೋಗಿ ಪರಿಶೀಲಿಸಿದಾಗ 10 ಲಕ್ಷ ರೂಪಾಯಿ ಹಾಗೂ 211 ಗ್ರಾಂ ಚಿನ್ನಾಭರಣ ನಾಪತ್ತೆಯಾಗಿರುವುದು ಗೊತ್ತಾಗಿದೆ.

ಸುಬ್ರತಾ ಮೊಂಡಲ್

ಕಳ್ಳತನ ಮಾಡಿದ ಬಳಿಕ ಮೊಂಡಲ್ ಬಿಎಂಟಿಸಿ ಬಸ್ ಹತ್ತಿದ್ದಾನೆ. ಬಿಎಂಟಿಸಿ ಬಸ್‌ಗಳಲ್ಲಿ ಅಳವಡಿಸಲಾಗಿರುವ ಎಐ ಆಧಾರಿತ ಕ್ಯಾಮೆರಾ ವ್ಯವಸ್ಥೆಯಾದ ನೇತ್ರಾ ಸಾಧನವನ್ನು ಬಳಸಿಕೊಂಡು ಪೊಲೀಸರು ಆತನನ್ನು ಪತ್ತೆಹಚ್ಚಿದ್ದಾರೆ. ಈ ಸಾಧನವು 2ಕ್ಯಾಮೆರಾ ಮೂಲಕ, ಟ್ರ್ಯಾಕಿಂಗ್ ಉದ್ದೇಶಗಳಿಗಾಗಿ ನಂಬರ್ ಪ್ಲೇಟ್‌ಗಳು ಮತ್ತು ಚಾಲಕನ ಚಟುವಟಿಕೆಗಳನ್ನು ಮೇಲ್ವಿಚಾರಣೆ ಮಾಡುತ್ತದೆ.

ಕ್ಯಾಮರಾ ದೃಶ್ಯಾವಳಿಗಳನ್ನು ಬಳಸಿ, ಪೊಲೀಸರು ಬಸ್ ಸಂಖ್ಯೆಯನ್ನು ಗುರುತಿಸಿ ಶಂಕಿತನನ್ನು ಪತ್ತೆಹಚ್ಚಿದರು. ವಿಚಾರಣೆ ವೇಳೆ ಆರೋಪಿ ತಾನು ಕೃತ್ಯದಲ್ಲಿ ಭಾಗಿಯಾಗಿರುವುದನ್ನು ಒಪ್ಪಿಕೊಂಡಿದ್ದಾನೆ. ಪೊಲೀಸರು 211 ಗ್ರಾಂ ಚಿನ್ನಾಭರಣ ಮತ್ತು 75 ಸಾವಿರ ನಗದು ವಶಪಡಿಸಿಕೊಂಡಿದ್ದಾರೆ.

ಮುಂಜಾಗ್ರತೆ ವಹಿಸುವುದು ಮತ್ತು ಹೆಚ್ಚಿನ ಪ್ರಮಾಣದ ನಗದು ಇಟ್ಟುಕೊಳ್ಳುವುದನ್ನು ತಪ್ಪಿಸುವುದು ಇಂತಹ ಘಟನೆಗಳನ್ನು ತಡೆಯಲು ಸಹಾಯ ಮಾಡುತ್ತದೆ. ಮನೆಯಲ್ಲಿ ಯಾರೂ ಇಲ್ಲದಿರುವಾಗ ಮನೆ ಖಾಲಿಯಾಗಿ ಕಾಣಿಸದಂತೆ ನೋಡಿಕೊಳ್ಳುವುದು ಮುಖ್ಯ ಎಂದು ಉತ್ತರ ವಿಭಾಗದ ಡಿಸಿಪಿ ಶಿವಪ್ರಕಾಶ ದೇವರಾಜು ಹೇಳಿದ್ದಾರೆ.

ಸಂಜಯನಗರ ಪೊಲೀಸ್ ಠಾಣೆಯಲ್ಲಿ ಐಪಿಸಿ ಸೆಕ್ಷನ್ 380 (ವಾಸದ ಮನೆಯಲ್ಲಿ ಕಳ್ಳತನ) ಮತ್ತು 450 (ಅಪರಾಧ ಮಾಡಲು ಮನೆ ಅತಿಕ್ರಮಣ) ಅಡಿಯಲ್ಲಿ ದೂರು ದಾಖಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT