ಪ್ರೇಮಕುಮಾರಿ ಪ್ರಕರಣ ರದ್ದುಗೊಳಿಸಲು ಸುಪ್ರೀಂ ಕೋರ್ಟ್ ನಕಾರ; ಮಾಜಿ ಸಚಿವ ರಾಮದಾಸ್ಗೆ ಹಿನ್ನಡೆ
ಈ ಹಿಂದೆ ರಾಜ್ಯದಲ್ಲಿ ಭಾರೀ ಸದ್ದು ಮಾಡಿದ್ದ ಪ್ರೇಮಕುಮಾರಿ ಪ್ರಕರಣದಲ್ಲಿ ಬಿಜೆಪಿ ನಾಯಕ ಹಾಗೂ ಮಾಜಿ ಸಚಿವ ಎಸ್.ಎ. ರಾಮದಾಸ್ ಅವರಿಗೆ ಸುಪ್ರೀಂ ಕೋರ್ಟ್ ನಲ್ಲೂ ಹಿನ್ನಡೆಯಾಗಿದೆ.
ನವದೆಹಲಿ: ಈ ಹಿಂದೆ ರಾಜ್ಯದಲ್ಲಿ ಭಾರೀ ಸದ್ದು ಮಾಡಿದ್ದ ಪ್ರೇಮಕುಮಾರಿ ಪ್ರಕರಣದಲ್ಲಿ ಬಿಜೆಪಿ ನಾಯಕ ಹಾಗೂ ಮಾಜಿ ಸಚಿವ ಎಸ್.ಎ. ರಾಮದಾಸ್ ಅವರಿಗೆ ಸುಪ್ರೀಂ ಕೋರ್ಟ್ ನಲ್ಲೂ ಹಿನ್ನಡೆಯಾಗಿದೆ.
ಮದುವೆಯಾಗುವುದಾಗಿ ನಂಬಿಸಿ ವಂಚಿಸಿದ್ದಾರೆ ಎಂದು ಆರೋಪಿಸಿ ಪ್ರೇಮಕುಮಾರಿ ಅವರು ದಾಖಲಿಸಿದ್ದ ಪ್ರಕರಣವನ್ನು ರದ್ದುಪಡಿಸುವಂತೆ ರಾಮದಾಸ್ ಅವರು ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್ ವಜಾ ಮಾಡಿದೆ.
ತನ್ನನ್ನು ಮದುವೆಯಾಗಿ ವಂಚಿಸಿದ್ದಾರೆಂದು ಪ್ರೇಮಕುಮಾರಿ ಎನ್ನುವರು ರಾಮದಾಸ್ ವಿರುದ್ಧ ದೂರು ನೀಡಿದ್ದರು. ಈ ಪ್ರಕರಣವನ್ನು ರದ್ದುಗೊಳಿಸುವಂತೆ ರಾಮದಾಸ್ ಹೈಕೋರ್ಟ್ ಮೆಟ್ಟಿಲೇರಿದ್ದರು. ಅದರೆ ಹೈಕೋರ್ಟ್ ಪ್ರರಣವನ್ನು ರದ್ದುಪಡಿಸಲು ನಿರಾಕರಿಸಿತ್ತು.
ನಂತರ ರಾಮದಾಸ್ ಅವರು ಸುಪ್ರೀಂ ಕೋರ್ಟ್ಗೆ ಮೇಲ್ಮನವಿ ಅರ್ಜಿ ಸಲ್ಲಿಸಿದ್ದರು. ಇದೀಗ ಸುಪ್ರೀಂ ಕೋರ್ಟ್ ಸಹ ಮಾಜಿ ಸಚಿವರ ಅರ್ಜಿಯನ್ನು ತಿರಸ್ಕರಿಸಿದೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.