ವಿನಯ್ ಕುಲಕರ್ಣಿ 
ರಾಜ್ಯ

ವಿನಯ್ ಕುಲಕರ್ಣಿ ‘ಓಲೈಸಲು’ ಸವದತ್ತಿಯಲ್ಲಿ ಕಾರ್ಯಕ್ರಮ; ಶಿಕ್ಷಕರ ದಿನಾಚರಣೆಗೆ ರಜೆ?

ಮಾಜಿ ಸಚಿವ ಹಾಗೂ ಧಾರವಾಡ ವಿಧಾನಸಭಾ ಕ್ಷೇತ್ರದ ಶಾಸಕ ವಿನಯ್ ಕುಲಕರ್ಣಿ ಅವರನ್ನು ‘ಓಲೈಸಲು’ ಸವದತ್ತಿಯಲ್ಲಿ ಶಿಕ್ಷಕರ ದಿನಾಚರಣೆ ಕಾರ್ಯಕ್ರಮ ನಡೆಸಲಾಗಿದೆ ಮತ್ತು ಈ ಕಾರ್ಯಕ್ರಮದಲ್ಲಿ ಶಿಕ್ಷಕರು ಭಾಗವಹಿಸುವುದಕ್ಕಾಗಿ...

ಹುಬ್ಬಳ್ಳಿ: ಮಾಜಿ ಸಚಿವ ಹಾಗೂ ಧಾರವಾಡ ವಿಧಾನಸಭಾ ಕ್ಷೇತ್ರದ ಶಾಸಕ ವಿನಯ್ ಕುಲಕರ್ಣಿ ಅವರನ್ನು ‘ಓಲೈಸಲು’ ಸವದತ್ತಿಯಲ್ಲಿ ಶಿಕ್ಷಕರ ದಿನಾಚರಣೆ ಕಾರ್ಯಕ್ರಮ ನಡೆಸಲಾಗಿದೆ ಮತ್ತು ಈ ಕಾರ್ಯಕ್ರಮದಲ್ಲಿ ಶಿಕ್ಷಕರು ಭಾಗವಹಿಸುವುದಕ್ಕಾಗಿ ಕ್ಷೇತ್ರದ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ ಎಂಬ ಮಾತುಗಳು ಕೇಳಿಬರುತ್ತಿವೆ.

ಬೆಳಗಾವಿ ಜಿಲ್ಲೆಯ ಸವದತ್ತಿಯಲ್ಲಿ ನಡೆದ ಶಿಕ್ಷಕರ ದಿನಾಚರಣೆಗೆ ಆಗಮಿಸುವ ಶಿಕ್ಷಕರಿಗೆ ಅನುಕೂಲ ಮಾಡಿಕೊಡುವ ಉದ್ದೇಶದಿಂದ ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ಎಸ್.ಎಸ್.ಕೆಳದಿಮಠ ಅವರು ಧಾರವಾಡ ವಿಧಾನಸಭಾ ಕ್ಷೇತ್ರದ ಶಾಲೆಗಳಿಗೆ ಬುಧವಾರ ರಜೆ ಘೋಷಿಸಿದ್ದಾರೆ. ಆದರೆ, ಭಾನುವಾರದಂದು ತರಗತಿಗಳನ್ನು ನಡೆಸುವ ಮೂಲಕ ಈ ರಜೆಯನ್ನು ಸರಿದೂಗಿಸಲು ಶಾಲೆಗಳಿಗೆ ನಿರ್ದೇಶನ ನೀಡಲಾಗಿದೆ. 

ಬಿಜೆಪಿ ಸದಸ್ಯ ಯೋಗೇಶಗೌಡ ಹತ್ಯೆ ಪ್ರಕರಣದಲ್ಲಿ ವಿಚಾರಣೆ ಎದುರಿಸುತ್ತಿರುವ ಧಾರವಾಡ ಶಾಸಕ ವಿನಯ್ ಕುಲಕರ್ಣಿ ಅವರ ನಿರ್ದೇಶನದ ಮೇರೆಗೆ ಸವದತ್ತಿಯಲ್ಲಿ ಶಿಕ್ಷಕರ ದಿನಾಚರಣೆ ಕಾರ್ಯಕ್ರಮ ಆಯೋಜಿಸಲಾಗಿತ್ತು ಎಂದು ಹೇಳಲಾಗುತ್ತಿದೆ.

ಸ್ಥಳೀಯ ಆಡಳಿತ ಹಾಗೂ ಶಿಕ್ಷಕರ ಸಂಘದ ವತಿಯಿಂದ ಸವದತ್ತಿಯಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. 

ಈ ಸಮಾರಂಭಕ್ಕೆ ಹಾಜರಾಗುವಂತೆ ಶಿಕ್ಷಕರಿಗೆ ಸೂಚಿಸಿದ್ದರಿಂದ ಕೆಳದಿಮಠ ಅವರು ಮಂಗಳವಾರ ರಜೆಯ ಅಧಿಸೂಚನೆ ಹೊರಡಿಸಿದ್ದರು.

ಜಿಲ್ಲಾ ಉಸ್ತುವಾರಿ ಸಚಿವರ ನಿರ್ದೇಶನ ಹಾಗೂ ಧಾರವಾಡ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ಮೌಖಿಕ ಸೂಚನೆ ಮೇರೆಗೆ ಇಂತಹ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ. 

ಕೆಳದಿಮಠ ಅವರ ಈ ನಡೆ ಎಲ್ಲರೂ ಹುಬ್ಬೇರುವಂತೆ ಮಾಡಿದ್ದು, ಒಬ್ಬ ವ್ಯಕ್ತಿಯನ್ನು ಓಲೈಸಲು ಸ್ಥಳೀಯ ಆಡಳಿತವನ್ನು ದುರ್ಬಳಕೆ ಮಾಡಿಕೊಳ್ಳಲಾಗಿದೆ ಮತ್ತು ಕೇವಲ ಸ್ಥಳೀಯ ಶಾಸಕರನ್ನು ತೃಪ್ತಿಪಡಿಸಲು ಜಿಲ್ಲೆಯ ಹೊರಗೆ ಕಾರ್ಯಕ್ರಮ ನಡೆಸಲಾಗಿದೆ ಎಂಬ ಆರೋಪ ಕೇಳಿ ಬರುತ್ತಿದೆ.

ಈ ಬಗ್ಗೆ ಪ್ರತಿಕ್ರಿಯಿಸಿದ ಕೆಳದಿಮಠ ಅವರು, ಯಾರದ್ದೋ ಒತ್ತಡಕ್ಕೆ ಮಣಿದು ಅಥವಾ ಯಾರನ್ನೊ ತೃಪ್ತಿಪಡಿಸಿಲು ರಜಾ ಅಧಿಸೂಚನೆ ಹೊರಡಿಸಿಲ್ಲ. ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಶಾಸಕರು ಬಯಸಿದ್ದರು. ಶಿಕ್ಷಕರಿಗೆ ಸಮಾರಂಭದಲ್ಲಿ ಪಾಲ್ಗೊಳ್ಳಲು ಅನುಕೂಲವಾಗುವಂತೆ ಅಧಿಸೂಚನೆ ಹೊರಡಿಸಲಾಗಿದೆ ಅಷ್ಟೆ ಎಂದಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Goa Nightclub Tragedy: ನೈಟ್‌ಕ್ಲಬ್‌ ಮ್ಯಾನೇಜರ್‌ ಬಂಧನ, ಮಾಲೀಕನ ವಿರುದ್ಧ ವಾರಂಟ್‌ ಜಾರಿ

ಗೋವಾ ನೈಟ್ ಕ್ಲಬ್​ನಲ್ಲಿ ಭೀಕರ ಅಗ್ನಿ ದುರಂತ: ಪ್ರವಾಸಿಗರು ಸೇರಿ 25 ಮಂದಿ ಸಜೀವ ದಹನ, ತನಿಖೆಗೆ ಆದೇಶ

'ಮದುವೆ ರದ್ದಾಗಿದೆ': ಪಲಾಶ್ ಮುಚ್ಚಲ್ ಜೊತೆಗಿನ ವಿವಾಹದ ಬಗ್ಗೆ ಮೌನ ಮುರಿದ ಸ್ಮೃತಿ ಮಂಧಾನ!

500 ಕೋಟಿ ರು ಕೊಟ್ಟು ಪಂಜಾಬ್ CM ಕುರ್ಚಿಯಲ್ಲಿ ಕುಳಿತುಕೊಳ್ಳಲು ನಮ್ಮ ಬಳಿ ಹಣವಿಲ್ಲ; ನವಜೋತ್ ಸಿಧು ಪತ್ನಿ ಹೇಳಿಕೆ

RCB ಫ್ಯಾನ್ಸ್ ಗೆ ಗುಡ್ ನ್ಯೂಸ್: ಚಿನ್ನಸ್ವಾಮಿಯಿಂದ IPL ಪಂದ್ಯಗಳು ಸ್ಥಳಾಂತರವಾಗಲು ಬಿಡಲ್ಲ; ಡಿ.ಕೆ. ಶಿವಕುಮಾರ್

SCROLL FOR NEXT