ಸಂಗ್ರಹ ಚಿತ್ರ 
ರಾಜ್ಯ

ನೇತ್ರದಾನ ಮಹಾದಾನ: ಜಾಗೃತಿ ಕಾರ್ಯಕ್ರಮಗಳ ನಡುವೆಯೂ ರಾಜ್ಯದಲ್ಲಿ ಕೇವಲ 845 ಮಂದಿ ಮಾತ್ರ ಕಣ್ಣುಗಳ ದಾನಕ್ಕೆ ಮುಂದು!

ನೇತ್ರದಾನ ಸರ್ವಕಾಲಕ್ಕೂ ಶ್ರೇಷ್ಠದಾನ. ಪ್ರತಿಯೊಬ್ಬರt ತಮ್ಮ ಅಮೂಲ್ಯವಾದ ದೃಷ್ಟಿಯನ್ನು ತಮ್ಮ ಜೀವಿತಾವಧಿಯ ನಂತರ ಮತ್ತಿಬ್ಬರಿಗೆ ನೀಡಬಹುದಾಗಿದೆ. ಆ ಮೂಲಕ ತಮ್ಮ ಕಣ್ಣುಗಳನ್ನು ತಮ್ಮ ನಂತರವು ಈ ಸುಂದರವಾದ ಪ್ರಪಂಚವನ್ನು ನೋಡಲು ಬಳಸಬಹುದಾಗಿದೆ.

ಬೆಂಗಳೂರು: ನೇತ್ರದಾನ ಸರ್ವಕಾಲಕ್ಕೂ ಶ್ರೇಷ್ಠದಾನ. ಪ್ರತಿಯೊಬ್ಬರt ತಮ್ಮ ಅಮೂಲ್ಯವಾದ ದೃಷ್ಟಿಯನ್ನು ತಮ್ಮ ಜೀವಿತಾವಧಿಯ ನಂತರ ಮತ್ತಿಬ್ಬರಿಗೆ ನೀಡಬಹುದಾಗಿದೆ. ಆ ಮೂಲಕ ತಮ್ಮ ಕಣ್ಣುಗಳನ್ನು ತಮ್ಮ ನಂತರವು ಈ ಸುಂದರವಾದ ಪ್ರಪಂಚವನ್ನು ನೋಡಲು ಬಳಸಬಹುದಾಗಿದೆ.

ನೇತ್ರದಾನ, ಕಾರ್ನಿಯಲ್ ಕುರುಡುತನ ಮತ್ತು ಕಾರ್ನಿಯಾ ಕಸಿ ಕುರಿತು ಜನರಲ್ಲಿ ಜಾಗೃತಿ ಮೂಡಿಸಲು ರಾಷ್ಟ್ರೀಯ ನೇತ್ರದಾನ ಪಾಕ್ಷಿಕವನ್ನು ಪ್ರತಿವರ್ಷ ಆಗಸ್ಟ್ 25 ಮತ್ತು ಸೆಪ್ಟೆಂಬರ್ 8ರ ನಡುವೆ ಆಚರಿಸಲಾಗುತ್ತದೆ. ಈ ನೇತ್ರದಾನ ಪಾಕ್ಷಿಕ ಇಂದಿಗೆ ಕೊನೆಗೊಳ್ಳುತ್ತಿದೆ. ರಾಜ್ಯದಲ್ಲಿ ಅಂಗಾಂಗದಾನ ಪೋರ್ಟಲ್ ಮೂಲಕ ನಗರದ 33 ಮಂದಿ ಮಾತ್ರ ನೇತ್ರದಾನ ಮಾಡುವ ಪ್ರತಿಜ್ಞೆ ಮಾಡಿದ್ದು, ಒಟ್ಟಾರೆ ರಾಜ್ಯದಲ್ಲಿ  ಕೇವಲ 848 ಮಂದಿ ಮಾತ್ರ ಪ್ರತಿಜ್ಞೆ ಮಾಡಿರುವುದು ಕಂಡು ಬಂದಿದೆ.

ವಿಜಯಪುರದಲ್ಲಿ (169), ಹಾವೇರಿ (179), ಬೀದರ್ (76) ನಂತಹ ಕೆಲವು ಜಿಲ್ಲೆಗಳಲ್ಲಿ ಹೆಚ್ಚಿನ ದಾನಿಗಳು ಕಂಡು ಬಂದಿದೆ ಎಂದು ಅಂಕಿಅಂಶಗಳಿಂದ ತಿಳಿದುಬಂದಿದೆ.

ನಾರಾಯಣ ನೇತ್ರಾಲಯದ ಅಧ್ಯಕ್ಷ ಡಾ.ರೋಹಿತ್ ಶೆಟ್ಟಿ ಮಾತನಾಡಿ, ನೇತ್ರದಾನದ ಬಗ್ಗೆ ಸರ್ಕಾರ ಮತ್ತು ಖಾಸಗಿ ಮಟ್ಟದಲ್ಲಿ ಜಾಗೃತಿ ಮೂಡಿಸಲಾಗುತ್ತಿದೆ. ಒಂದು ಸಮಯದಲ್ಲಿ ದಾನಿಗಳ ಪ್ರಮಾಣ ಇದ್ದಕ್ಕಿದ್ದಂತೆ ಏರಿಕೆಯಾಗುತ್ತದೆ. ನಂತರ ಕಡಿಮೆಯಾಗುತ್ತದೆ. ನಟ ಪುನೀತ್ ರಾಜ್ ಕುಮಾರ್ ಅವರನ್ನು ಉದಾಹರಣೆಯಾಗಿ ತೆಗೆದುಕೊಂಡು ಹಲವರು ನೇತ್ರದಾನದ ಪ್ರತಿಜ್ಞೆ ಮಾಡಲು ಮುಂದೆ ಬಂದಿದ್ದರು. ನಂತರ ದಾನಿಗಳ ಸಂಖ್ಯೆ ಕಡಿಮೆಯಾಗ ತೊಡಗಿತು ಎಂದು ಹೇಳಿದ್ದಾರೆ.

ನೇತ್ರದಾನದ ಕುರಿತು ಜಾಗೃತಿ ಮೂಡಿಸಲು ಆನ್‌ಲೈನ್ ಮತ್ತು ಆಫ್‌ಲೈನ್ ಜಾಗೃತಿ ಅಭಿಯಾನಗಳನ್ನು ನಡೆಸಲಾಗುತ್ತಿದೆ ಟಾಕ್ ಶೋಗಳು ಮತ್ತು ಮಧ್ಯರಾತ್ರಿಯ ಮ್ಯಾರಥಾನ್‌ಗಳನ್ನು ಆಯೋಜಿಸಲಾಗುತ್ತಿದೆ. ಹಿಂದಿನ 15 ದಿನಗಳ ಅಂಕಿಅಂಶಗಳಿಗೆ ಹೋಲಿಸಿದರೆ, ದಾನಿಗಳ ಸಂಖ್ಯೆ ಇಳಿಕೆಯಾಗಿರುವುದು ಕಂಡು ಬಂದಿದೆ. 2021 ರಲ್ಲಿ ಪುನೀತ್ ರಾಜ್‌ಕುಮಾರ್ ಅವರ ಮರಣದ ನಂತರ, ಬಹಳಷ್ಟು ಜನರು ನೇತ್ರದಾನಕ್ಕೆ ಮುಂದಾಗಿದ್ದರು. 2022 ರಲ್ಲಿ ನಡೆದ ನೇತ್ರದಾನ ಪಾಕ್ಷಿಕದಲ್ಲಿ ಸುಮಾರು 1,000 ಕ್ಕೂ ಹೆಚ್ಚು ಜನರು ನೇತ್ರದಾನಕ್ಕೆ ಪ್ರತಿಜ್ಞೆ ಮಾಡಿದ್ದರು. ಈ ವರ್ಷ ಕೇವಲ 500 ಜನರು ಮಾತ್ರ ಸ್ವಯಂಸೇವಕರಾಗಿ ಮುಂದೆ ಬಂದಿದ್ದಾರೆಂದು. ನೇತ್ರದಾನದ ಬಗ್ಗೆ ಕೇವಲ 15 ದಿನಗಳಷ್ಟೇ ಅಲ್ಲದೆ, ವರ್ಷವಿಡೀ ಜಾಗೃತಿ ಮೂಡಿಸುವ ಅಗತ್ಯವಿದೆ ಎಂದು ಸಲಹೆ ನೀಡಿದ್ದಾರೆ.

ಬೆಂಗಳೂರು ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆ (ಬಿಎಂಸಿಆರ್‌ಐ)ಗೆ ಸಂಯೋಜಿತವಾಗಿರುವ ಮಿಂಟೊ ಕಣ್ಣಿನ ಆಸ್ಪತ್ರೆಯ ವೈದ್ಯಕೀಯ ನಿರ್ದೇಶಕಿ ಡಾ.ಸುಜಾತಾ ರಾಥೋಡ್ ಅವರು ಮಾತನಾಡಿ, ನೇತ್ರದಾನಕ್ಕೆ ಸಮರ್ಪಿತ ಪ್ರಯತ್ನಗಳ ನಡೆಸುವುದು ಮುಖ್ಯವಾಗಿದೆ ಎಂದು ಹೇಳಿದ್ದಾರೆ.

ಎಲ್ಲಾ ಹೊರರೋಗಿ ವಿಭಾಗಗಳಲ್ಲಿ (OPDs) ನೇತ್ರದಾನದ ನಮೂನೆಗಳು ಇರಿಸಿ ಹಾಗೂ. ಅನೇಕ ಪ್ರದೇಶಗಳಲ್ಲಿ ಕ್ಯೂಆರ್ ಕೋಡ್ ಗಳನ್ನು ಹಾಕಿ ಜನರಲ್ಲಿ ಸದಾಕಾಲ ನೇತ್ರದಾನದ ಬಗ್ಗೆ ಅರಿವು ಮೂಡಿಸುವ ಕೆಲಸ ಮಾಡಬೇಕೆಂದು ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

'ಶಾಂತಿ ಬೇಕಾದರೆ ಯುದ್ಧಕ್ಕೆ ಸಿದ್ಧರಾಗಿ.. Sudarshan Chakra ವಾಯುರಕ್ಷಣಾ ವ್ಯವಸ್ಥೆಗೆ ಮೂರೂ ಸೇನೆಗಳ ಬೃಹತ್ ಪ್ರಯತ್ನ ಬೇಕು': CDS Chauhan

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

SCROLL FOR NEXT