ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ರಾಜ್ಯ

ಸಂಸದ ಪ್ರಜ್ವಲ್ ರೇವಣ್ಣ ಅನರ್ಹತೆಗೆ ತಡೆ ಕೋರಿ ಅರ್ಜಿ: ತೀರ್ಪನ್ನು ಕಾಯ್ದಿರಿಸಿದ ಹೈಕೋರ್ಟ್

ಹಾಸನ ಸಂಸದ ಸ್ಥಾನದಿಂದ ತಮ್ಮನ್ನು ಅನರ್ಹಗೊಳಿಸಿದ ಆದೇಶಕ್ಕೆ ತಡೆ ಕೋರಿ ಜೆಡಿಎಸ್ ಯುವ ನಾಯಕ ಪ್ರಜ್ವಲ್ ರೇವಣ್ಣ ಅವರು ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ಹೈಕೋರ್ಟ್ ಶುಕ್ರವಾರ ಮುಕ್ತಾಯಗೊಳಿಸಿದೆ.

ಪ್ರಜ್ವಲ್ ರೇವಣ್ಣ
Lingaraj Badiger
Updated On : 8 Sept 2023, 7:20 pm

ಬೆಂಗಳೂರು: ಹಾಸನ ಸಂಸದ ಸ್ಥಾನದಿಂದ ತಮ್ಮನ್ನು ಅನರ್ಹಗೊಳಿಸಿದ ಆದೇಶಕ್ಕೆ ತಡೆ ಕೋರಿ ಜೆಡಿಎಸ್ ಯುವ ನಾಯಕ ಪ್ರಜ್ವಲ್ ರೇವಣ್ಣ ಅವರು ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ಹೈಕೋರ್ಟ್ ಶುಕ್ರವಾರ ಮುಕ್ತಾಯಗೊಳಿಸಿದೆ. 

ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಕೆ.ನಟರಾಜನ್ ಅವರು ತೀರ್ಪನ್ನು ಕಾಯ್ದಿರಿಸಿದ್ದು, ಸೆಪ್ಟೆಂಬರ್ 11 ಅಥವಾ 12 ರಂದು ಆದೇಶ ಪ್ರಕಟಿಸುವ ಸಾಧ್ಯತೆ ಇದೆ.

ಇದನ್ನು ಓದಿ: ಸಂಸದ ಸ್ಥಾನದಿಂದ ಅನರ್ಹ: ಆದೇಶಕ್ಕೆ ತಡೆ ಕೋರಿ ಹೈ ಕೋರ್ಟ್ ಮೆಟ್ಟಿಲೇರಿದ ಪ್ರಜ್ವಲ್ ರೇವಣ್ಣ​

Advertisement

Advertisement

ಪ್ರಜ್ವಲ್ ರೇವಣ್ಣ ಪರ ಹಿರಿಯ ವಕೀಲ ಉದಯ ಹೊಳ್ಳ ಅವರು, ಸಂಸದ ಸ್ಥಾನದಿಂದ ಅನರ್ಹಗೊಳಿಸಿದ ಆದೇಶ ಪ್ರಶ್ನಿಸಿ ಸುಪ್ರೀಂಕೋರ್ಟ್​ಗೆ ಮೇಲ್ಮನವಿ ಸಲ್ಲಿಸುವವರೆಗೆ ಈ ಆದೇಶಕ್ಕೆ ತಡೆ ನೀಡುವಂತೆ ಕೋರಿ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದಾರೆ.

ಇದನ್ನು ಓದಿ: ಅನರ್ಹತೆ ಕುರಿತಂತೆ ಸುಪ್ರೀಂ ಕೋರ್ಟ್‌ನಲ್ಲಿ ಕಾನೂನು ಹೋರಾಟಕ್ಕೆ ಪ್ರಜ್ವಲ್ ರೇವಣ್ಣ ಸಿದ್ಧ: ಎಚ್‌ಡಿ ದೇವೇಗೌಡ

ಚುನಾವಣಾ ಅಕ್ರಮದ ಆಧಾರದ ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡರ ಮೊಮ್ಮಗ ಪ್ರಜ್ವಲ್ ರೇವಣ್ಣ ಅವರ ಆಯ್ಕೆಯನ್ನು ಅಸಿಂಧುಗೊಳಿಸಿ ಸೆಪ್ಟೆಂಬರ್ 1 ರಂದು ಹೈಕೋರ್ಟ್ ತೀರ್ಪು ನೀಡಿದೆ. 

ಪ್ರಜ್ವಲ್ ರೇವಣ್ಣ ಅವರು ಸಲ್ಲಿಸಿರುವ ಚುನಾವಣಾ ಅಫಿಡವಿಟ್‌ನಲ್ಲಿ ಚುನಾವಣಾ ಆಯೋಗಕ್ಕೆ ಸುಳ್ಳು ಮಾಹಿತಿ ನೀಡಿದ್ದು, ಅವರು ಹೊಂದಿರುವ ಆಸ್ತಿಗಳ ನೈಜ ಮೌಲ್ಯವನ್ನು ಮರೆಮಾಚಲಾಗಿದೆ ಎಂದು ಆರೋಪಿಸಲಾಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement