ಸಾಂದರ್ಭಿಕ ಚಿತ್ರ 
ರಾಜ್ಯ

ಬೆಂಗಳೂರು: ಅಪ್ರಾಪ್ತ ಗ್ರಾಹಕರೇ ಅಧಿಕವಾಗಿದ್ದ ಪಬ್ ಗಳ ಮೇಲೆ ಸಿಸಿಬಿ ದಾಳಿ

ಸಿಲಿಕಾನ್ ಸಿಟಿಯ ಪಬ್, ಬಾರ್ ಆ್ಯಂಡ್ ರೆಸ್ಟೋರೆಂಟ್ ಮತ್ತು ಹುಕ್ಕಾ ಬಾರ್​ಗಳ ಮೇಲೆ ತಡರಾತ್ರಿ ಸಿಸಿಬಿ ಅಧಿಕಾರಿಗಳು ಏಕಕಾಲಕ್ಕೆ ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ.

ಬೆಂಗಳೂರು:  ಸಿಲಿಕಾನ್ ಸಿಟಿಯ ಪಬ್, ಬಾರ್ ಆ್ಯಂಡ್ ರೆಸ್ಟೋರೆಂಟ್ ಮತ್ತು ಹುಕ್ಕಾ ಬಾರ್​ಗಳ ಮೇಲೆ ತಡರಾತ್ರಿ ಸಿಸಿಬಿ ಅಧಿಕಾರಿಗಳು ಏಕಕಾಲಕ್ಕೆ ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ.

ಕೋರಮಂಗಲ, ಇಂದಿರಾನಗರ, ಹೆಚ್ಎಸ್ಆರ್ ಲೇಔಟ್, ಬಾಣಸವಾಡಿ, ಹೆಣ್ಣೂರು ಸೇರಿದಂತೆ ನಗರದ ಹಲವು ಕಡೆ ದಾಳಿ ನಡೆಸಲಾಗಿದೆ. ದಾಳಿ ವೇಳೆ ಸುಮಾರು ಕಡೆಗಳಲ್ಲಿ ಸಿಗರೇಟ್ ಮತ್ತು ಇತರೆ ತಂಬಾಕು ಉತ್ಪನ್ನಗಳ ಕಾಯ್ದೆ, ಬಾಲ ನ್ಯಾಯ ಕಾಯ್ದೆ, ಅಬಕಾರಿ ನಿಯಮಗಳನ್ನು ಉಲ್ಲಂಘಿಸಲಾಗಿದೆ. 

ಅಪ್ರಾಪ್ತ ವಯಸ್ಸಿನವರಿಗೆ ಧೂಮಪಾನಕ್ಕೆ ಅವಕಾಶ, ಮದ್ಯ ಸರಬರಾಜು ಮಾಡುತ್ತಿರುವುದು ಕಂಡು ಬಂದಿದೆ. ಇದೇ ಸಂದರ್ಭದಲ್ಲಿ ಪಬ್ ಒಂದರಲ್ಲಿ ಪತ್ತೆಯಾದ ಅಪ್ರಾಪ್ತರು ನಾವು ಶಾಸಕರ ಕಡೆಯವರು, ಕಿರುತೆರೆ ಕಲಾವಿದರು ಎಂದು ಪೊಲೀಸರೊಂದಿಗೆ ವಾಗ್ವಾದ ನಡೆಸಿದ ಪ್ರಸಂಗವೂ ನಡೆದಿದೆ.

ನಾಲ್ಕು ಕಡೆಗಳಲ್ಲಿ ಪಬ್ ಮಾಲೀಕರ ವಿರುದ್ಧ ಸಿಗರೇಟ್ ಮತ್ತು ಇತರೆ ತಂಬಾಕು ಉತ್ಪನ್ನಗಳ ಕಾಯ್ದೆ, ಬಾಲ ನ್ಯಾಯ ಕಾಯ್ದೆ, ಅಬಕಾರಿ ನಿಯಮಗಳ ಉಲ್ಲಂಘನೆ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ನಗರ ಪೊಲೀಸ್ ಆಯುಕ್ತ ಬಿ ದಯಾನಂದ್ ತಿಳಿಸಿದ್ದಾರೆ.

ನಗರದ ಕೆಲವೆಡೆ ಕಾಲೇಜು ವಿದ್ಯಾರ್ಥಿಗಳು ಪಬ್, ಬಾರ್ ಆ್ಯಂಡ್ ರೆಸ್ಟೋರೆಂಟ್ ಮತ್ತು ಹುಕ್ಕಾ ಬಾರ್​ಗಳತ್ತ ಹೋಗುತ್ತಿದ್ದಾರೆ. ಇದಕ್ಕೆ ಕಡಿವಾಣ ಹಾಕಿ ಎಂದು ಕೆಲ ಕಾಲೇಜು ಮುಖ್ಯಸ್ಥರು ನಗರ ಪೊಲೀಸ್ ಆಯುಕ್ತ ಬಿ ದಯಾನಂದ್ ಅವರಿಗೆ ದೂರು ನೀಡಿದ್ದರು. ದೂರನ್ನು ಗಂಭೀರವಾಗಿ ಪರಿಗಣಿಸಿದ ಆಯುಕ್ತರ ಸೂಚನೆಯ ಮೇರೆಗೆ ಸಿಸಿಬಿ ಪೊಲೀಸರು ತಡರಾತ್ರಿ ದಾಳಿ ನಡೆಸಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮತಗಳ್ಳತನ' ನಡೆದಿರುವುದನ್ನು ಅಧ್ಯಕ್ಷೆ ದ್ರೌಪದಿ ಮುರ್ಮು ನಿರಾಕರಿಸಲಿಲ್ಲ, ನನಗೆ ಆಶ್ಚರ್ಯವಾಯಿತು: ರಾಹುಲ್ ಗಾಂಧಿ

ಬೆಂಗಳೂರು: ನಮ್ಮ ಮೆಟ್ರೋದಲ್ಲಿ Alt News ಸಹ ಸ್ಥಾಪಕ ಮೊಹಮ್ಮದ್ ಜುಬೈರ್ ಗೆ ಹಿಗ್ಗಾಮುಗ್ಗ ಥಳಿತ?, Video Viral

19ನೇ ಓವರ್‌ನಲ್ಲೇ 250 ರನ್ ಚೇಸ್: ಟಿ20 ಕ್ರಿಕೆಟ್‌ನಲ್ಲಿ ಭಾರತವನ್ನು ಸೋಲಿಸಿ ದಾಖಲೆ ಬರೆದ ವಿಂಡೀಸ್

CJP Protest: ಭಾರತದ ಯುವಕರು ದೆಹಲಿಗೆ ತಲುಪುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ: ಚಿರಾಗ್ ಪಾಸ್ವಾನ್

24 ಗಂಟೆ ಇಂಟರ್ನೆಟ್ ಕಟ್, 57 ಮೆಟ್ರೋ ನಿಲ್ದಾಣ ಬಂದ್: ಸಿಜೆಪಿ ಪ್ರತಿಭಟನೆಗೂ ಮುನ್ನ ದೆಹಲಿ ಹೈ ಅಲರ್ಟ್