ಸಿಎಂ ಸಿದ್ದರಾಮಯ್ಯ 
ರಾಜ್ಯ

ಶೀಘ್ರದಲ್ಲೇ ಕ್ರೈಸ್ತ ಅಭಿವೃದ್ಧಿ ನಿಗಮ ಸ್ಥಾಪನೆ: ಸಿಎಂ ಸಿದ್ದರಾಮಯ್ಯ

ಶೀಘ್ರದಲ್ಲೇ ಕ್ರೈಸ್ತ ಅಭಿವೃದ್ಧಿ ನಿಗಮ ಸ್ಥಾಪನೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ ಹೇಳಿದರು.

ಬೆಂಗಳೂರು: ಶೀಘ್ರದಲ್ಲೇ ಕ್ರೈಸ್ತ ಅಭಿವೃದ್ಧಿ ನಿಗಮ ಸ್ಥಾಪನೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ ಹೇಳಿದರು.

ಶುಕ್ರವಾರ ಇಲ್ಲಿನ ಶಿವಾಜಿನಗರದ ಸೇಂಟ್ ಮೇರಿ ಬೆಸಿಲಿಕಾ ಚರ್ಚ್‍ನಲ್ಲಿ ತಾಯಿ ಮೇರಿ ಜಯಂತೋತ್ಸವವನ್ನು ಉದ್ಘಾಟಿಸಿ ಮಾತನಾಡಿದ ಅವರು, ‘ಕ್ರೈಸ್ತ ಅಭಿವೃದ್ಧಿ ನಿಗಮ ಸ್ಥಾಪನೆಯನ್ನು ನಾವು ಬಜೆಟ್‍ನಲ್ಲೇ ಘೋಷಿಸಿದ್ದೇವೆ. ಇದಕ್ಕಾಗಿ 100 ಕೋಟಿ ರೂಪಾಯಿಗಳನ್ನು ಮೀಸಲಿಟ್ಟು ಆದಷ್ಟು ಬೇಗ ನಿಗಮ ಸ್ಥಾಪಿಸಿ ಅದಕ್ಕೆ ಅರ್ಹ ಅಧ್ಯಕ್ಷರನ್ನು ನೇಮಿಸಲಾಗುವುದು’ ಎಂದು ಹೇಳಿದರು.

‘ಬೆಸಿಲಿಕಾ ಪ್ರಾರ್ಥನಾ ಮಂದಿರಕ್ಕೆ ಎಲ್ಲ ಜಾತಿ, ಧರ್ಮದವರು ಬರುತ್ತಾರೆ. ಹೀಗಾಗಿ ಇದೊಂದು ಭಾವೈಕ್ಯತಾ ಕೇಂದ್ರವಾಗಿ ರೂಪುಗೊಂಡಿದೆ. ಹೀಗಾಗಿ ನಾನು ಈ ಜಯಂತೋತ್ಸವಕ್ಕೆ ಮತ್ತು ಹಬ್ಬಕ್ಕೆ ಪ್ರತಿ ವರ್ಷ ತಪ್ಪದೆ ಹಾಜರಾಗುತ್ತೇನೆ. ಇದು ನನಗೆ ಬಹಳ ಖುಷಿಯ ಸಂಗತಿ’ ಎಂದು ಅವರು ಬಣ್ಣಿಸಿದರು.

‘ಭಾರತವೇ ಒಂದು ಭಾವೈಕ್ಯ ಕೇಂದ್ರ. ಇಲ್ಲಿ ಜಾತಿ-ಧರ್ಮದ ಹೆಸರಿನಲ್ಲಿ ಮನುಷ್ಯ ದ್ವೇಷಕ್ಕೆ ಜಾಗ ಇಲ್ಲ. ಕೆಲವರು ಮನುಷ್ಯ ದ್ವೇಷವನ್ನೇ ಸಂಸ್ಕೃತಿಯನ್ನಾಗಿ ಆಚರಿಸಲು ಪ್ರಯತ್ನಿಸುತ್ತಿದ್ದಾರೆ. ನಮ್ಮ ಸರಕಾರ ದ್ವೇಷದ ವಾತಾವರಣ ಹರಡಿಸುವವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಂಡು ಭಾರತದ ಭಾವೈಕ್ಯತಾ ಪರಂಪರೆಯನ್ನು ಕಾಪಾಡಲು ಬದ್ದವಾಗಿದೆ’ ಎಂದು ತಿಳಿಸಿದರು.

‘ಯಾವ ಧರ್ಮವೂ ಮನುಷ್ಯ ದ್ವೇಷವನ್ನು ಹೇಳುವುದಿಲ್ಲ. ಆದರೆ, ಕೆಲವು ಕಪಟಿಗಳು ಧರ್ಮದ ಹೆಸರಿನಲ್ಲಿ ಮನುಷ್ಯರನ್ನು, ಸಮಾಜವನ್ನು ವಿಭಜಿಸುವ ಕೆಲಸ ಮಾಡುತ್ತಿದ್ದಾರೆ. ನಮ್ಮ ಸರಕಾರ ಇಂತಹವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಿದೆ. ಅನೈತಿಕ ಪೊಲೀಸ್‍ಗಿರಿ ನೆಪದಲ್ಲಿ ಯಾರಾದರೂ ಕಾನೂನು ಕೈಗೆತ್ತಿಕೊಂಡರೆ ಅವರಿಗೆ ತಕ್ಕ ಕಾನೂನಿನ ಶಾಸ್ತಿ ಆಗಲಿದೆ’ ಎಂದು ಎಚ್ಚರಿಕೆ ನೀಡಿದರು.

ಇದೇ ವೇಳೆ ಶಿವಾಜಿನಗರ ಮೆಟ್ರೋ ನಿಲ್ದಾಣಕ್ಕೆ ‘ಸೇಂಟ್ ಮೇರೀಸ್ ನಿಲ್ದಾಣ’ ಎಂದು ಹೆಸರಿಡಬೇಕು ಎನ್ನುವುದೂ ಸೇರಿ ಸಮುದಾಯದ ಮುಖಂಡರು ಮುಂದಿಟ್ಟಿರುವ ಮೂರು ಬೇಡಿಕೆಗಳ ಬಗ್ಗೆ ಪರಿಶೀಲಿಸಿ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ಭರವಸೆ ನೀಡಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT