ಸಾಂದರ್ಭಿಕ ಚಿತ್ರ 
ರಾಜ್ಯ

ಬೆಂಗಳೂರು: ವಂಚನೆಗೆ ಬಳಸುತ್ತಿದ್ದ 15,000 ಸಿಮ್ ಕಾರ್ಡ್‌ಗಳನ್ನು ಬ್ಲಾಕ್ ಮಾಡಿದ ಪೊಲೀಸರು

ಸೈಬರ್ ಕ್ರೈಮ್ ತಡೆಗಟ್ಟುವ ನಿಟ್ಟಿನಲ್ಲಿ ಕಳೆದ ಮೂರು ವಾರಗಳಲ್ಲಿ ಬೆಂಗಳೂರಿನ ನಿವಾಸಿಗಳನ್ನು ವಂಚಿಸಲು ಬಳಸುತ್ತಿದ್ದ 15,000ಕ್ಕೂ ಹೆಚ್ಚು ಸಿಮ್ ಕಾರ್ಡ್‌ಗಳನ್ನು ನಗರದ ಪೊಲೀಸರು ಗುರುತಿಸಿ ಬ್ಲಾಕ್ ಮಾಡಿದ್ದಾರೆ.

ಬೆಂಗಳೂರು: ಸೈಬರ್ ಕ್ರೈಮ್ ತಡೆಗಟ್ಟುವ ನಿಟ್ಟಿನಲ್ಲಿ ಕಳೆದ ಮೂರು ವಾರಗಳಲ್ಲಿ ಬೆಂಗಳೂರಿನ ನಿವಾಸಿಗಳನ್ನು ವಂಚಿಸಲು ಬಳಸುತ್ತಿದ್ದ 15,000ಕ್ಕೂ ಹೆಚ್ಚು ಸಿಮ್ ಕಾರ್ಡ್‌ಗಳನ್ನು ನಗರದ ಪೊಲೀಸರು ಗುರುತಿಸಿ ಬ್ಲಾಕ್ ಮಾಡಿದ್ದಾರೆ.
ನಗರ ವ್ಯಾಪ್ತಿಯಲ್ಲಿ ಸೈಬರ್ ಅಪರಾಧ ಪ್ರಕರಣಗಳು ಹೆಚ್ಚಾದ ನಂತರ ಪೊಲೀಸರು ಈ ಕ್ರಮ ಕೈಗೊಂಡಿದ್ದಾರೆ ಎಂದು ಅವರು ಶನಿವಾರ ತಿಳಿಸಿದ್ದಾರೆ.

ಪೊಲೀಸರ ಪ್ರಕಾರ, ನಗರದಲ್ಲಿ ಸೈಬರ್ ಕ್ರೈಮ್ ಘಟನೆಗಳನ್ನು ಪರಿಶೀಲಿಸುವ ಉದ್ದೇಶದಿಂದ ಆಗಸ್ಟ್ 16 ರಂದು ವಿಶೇಷ ಅಭಿಯಾನವನ್ನು ಪ್ರಾರಂಭಿಸಲಾಗಿದೆ. ಇದರ ಭಾಗವಾಗಿ, ಪೊಲೀಸರು ಆಗಸ್ಟ್ 16 ರಿಂದ ಸೆಪ್ಟೆಂಬರ್ 7ರವರೆಗೆ 15,378 ಸಿಮ್ ಕಾರ್ಡ್‌ಗಳನ್ನು ನಿರ್ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ ಎಂದರು.

ಈ ಸಿಮ್ ಕಾರ್ಡ್‌ಗಳಲ್ಲಿ ಹೆಚ್ಚಿನವು ಉತ್ತರ ಭಾರತದಲ್ಲಿ ಕಾರ್ಯನಿರ್ವಹಿಸುತ್ತಿವೆ ಮತ್ತು ವಂಚಕರು ಬೆಂಗಳೂರಿನ ನಿವಾಸಿಗಳನ್ನು ಗುರಿಯಾಗಿಸಿಕೊಂಡು ವಂಚಿಸುತ್ತಿದ್ದರು.

'ಈ ವರ್ಷದ ಜನವರಿಯಿಂದ ಸೈಬರ್ ಕ್ರೈಮ್‌ ಪ್ರಕರಣಗಳ ಉಲ್ಬಣವಾಗಿದೆ ಮತ್ತು ಸಂತ್ರಸ್ತರು ಸಂಪರ್ಕ ಸಂಖ್ಯೆಗಳನ್ನು ಹಂಚಿಕೊಂಡಿರುವ ಸಾಕಷ್ಟು ದೂರುಗಳನ್ನು ನಾವು ಸ್ವೀಕರಿಸಿದ್ದೇವೆ. ಈ ಮೂಲಕ ವಿವಿಧ ಯೋಜನೆಗಳೊಂದಿಗೆ ವಂಚಕರು ಅವರನ್ನು ಸಂಪರ್ಕಿಸಿದ್ದಾರೆ ಮತ್ತು ಅಂತಿಮವಾಗಿ ಅವರನ್ನು ವಂಚಿಸಿದ್ದಾರೆ' ಎಂದು ಹೇಳಿದರು.

ಆದ್ದರಿಂದ, ನಾವು ಈ ಫೋನ್ ಸಂಖ್ಯೆಗಳನ್ನು ಗುರುತಿಸಿದ್ದೇವೆ. ಅವುಗಳನ್ನು ಪರಿಶೀಲಿಸಿದ್ದೇವೆ ಮತ್ತು ಅವುಗಳನ್ನು ತಕ್ಷಣವೇ ನಿರ್ಬಂಧಿಸಿದ್ದೇವೆ ಎಂದು ಅವರು ಹೇಳಿದರು.

ಉಪ ಪೊಲೀಸ್ ಆಯುಕ್ತ (ಕಮಾಂಡ್ ಸೆಂಟರ್) ರವೀಂದ್ರ ಗಡಾಡಿ ಮಾತನಾಡಿ, ಒಂದೇ ಸಿಮ್ ಕಾರ್ಡ್ ಬಳಸಿ ಅನೇಕ ಅಮಾಯಕರನ್ನು ವಂಚಿಸಬಹುದು. ಆದ್ದರಿಂದ ಆ ಸಿಂಗಲ್ ಸಿಮ್ ಕಾರ್ಡ್ ಅನ್ನು ತಕ್ಷಣವೇ ಬ್ವಾಕ್ ಮಾಡಲಾಗಿದ್ದು, ಇತರ ಸಂತ್ರಸ್ತರನ್ನು ಗುರಿಯಾಗಿಸಲು ಮತ್ತೆ ಅದೇ ಕಾರ್ಡ್ ಅನ್ನು ಬಳಸಲು ಸಾಧ್ಯವಿಲ್ಲ ಎಂದು ಹೇಳಿದರು.

ಈ ರೀತಿಯಾಗಿ ಇದು ಸಂತ್ರಸ್ತರ ಸಂಖ್ಯೆಯನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ ಮತ್ತು ಪ್ರಕರಣಗಳ ಸಂಖ್ಯೆಯನ್ನು ಕಡಿಮೆ ಮಾಡುತ್ತದೆ. ಚಾಲ್ತಿಯಲ್ಲಿರುವ ಅಭಿಯಾನದ ಅಡಿಯಲ್ಲಿ ನಾವು ಅನುಮಾನಾಸ್ಪದ ಸಂಖ್ಯೆಗಳನ್ನು ಗುರುತಿಸುತ್ತೇವೆ ಮತ್ತು ಅಂತಹ ಸಿಮ್ ಕಾರ್ಡ್‌ಗಳನ್ನು ನಿರ್ಬಂಧಿಸುತ್ತೇವೆ ಎಂದರು.

ವಂಚಿಸಲು ಬಳಸಲಾದ ಹೆಚ್ಚಿನ ಸಿಮ್ ಕಾರ್ಡ್‌ಗಳನ್ನು ಗುರುತಿಸಲು ಪೊಲೀಸರು ಹಿಂದಿನ ವರ್ಷಗಳ ಪ್ರಕರಣದ ಫೈಲ್‌ಗಳನ್ನು ವಿಶ್ಲೇಷಿಸುತ್ತಿದ್ದಾರೆ. ಇದರಿಂದಾಗಿ ಅದೇ ಉದ್ದೇಶಕ್ಕಾಗಿ ಇನ್ನೂ ಬಳಸಿದರೆ ಅವುಗಳನ್ನು ನಿರ್ಬಂಧಿಸಬಹುದು ಎಂದು ಮಾಹಿತಿ ನೀಡಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT