ವಿದ್ಯುತ್ ಸ್ಪರ್ಶದಿಂದ ಸಾವು 
ರಾಜ್ಯ

ಕೊಡಗು: ಕರೆಂಟ್ ಶಾಕ್ ಹೊಡೆದು ಚೆಸ್ಕಾಂ ಲೈನ್ ಮ್ಯಾನ್ ದುರ್ಮರಣ

ಮನೆಯೊಂದರಲ್ಲಿ ವಿದ್ಯುತ್ ಸಂಪರ್ಕ ಕಲ್ಪಿಸುವಾಗ ಕರೆಂಟ್ ಶಾಕ್ ಹೊಡೆದು ಚೆಸ್ಕಾಂ ಸಿಬ್ಬಂದಿ ಮೃತಪಟ್ಟಿರುವ ಘಟನೆ ವಿರಾಜಪೇಟೆಯಲ್ಲಿ ನಡೆದಿದೆ. 

ಕೊಡಗು: ಮನೆಯೊಂದರಲ್ಲಿ ವಿದ್ಯುತ್ ಸಂಪರ್ಕ ಕಲ್ಪಿಸುವಾಗ ಕರೆಂಟ್ ಶಾಕ್ ಹೊಡೆದು ಚೆಸ್ಕಾಂ ಸಿಬ್ಬಂದಿ ಮೃತಪಟ್ಟಿರುವ ಘಟನೆ ವಿರಾಜಪೇಟೆಯಲ್ಲಿ ನಡೆದಿದೆ. 

ವಿರಾಜಪೇಟೆ ಹೊರವಲಯದ ಕುಟ್ಟಂದಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು ಮೃತ ಸಿಬ್ಬಂದಿಯನ್ನು ಬಾಗಲಕೋಟೆ ಜಿಲ್ಲೆಯ ಮಾರ್ನಾಲು ನಿವಾಸಿ 26 ವರ್ಷದ ಬಸವರಾಜ್ ತೆಗ್ಗಿ ಎಂದು ಗುರುತಿಸಲಾಗಿದೆ.

ವಿದ್ಯುತ್ ಪ್ರವಹಿಸಿದ್ದರಿಂದ ಸ್ಥಳದಲ್ಲೇ ಬಸವರಾಜ್ ಕುಸಿದುಬಿದ್ದು ಮೃತಪಟ್ಟಿದ್ದಾರೆ. ವಿಷಯ ತಿಳಿಯುತ್ತಿದ್ದಂತೆ ಘಟನಾ ಸ್ಥಳಕ್ಕೆ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದರು. ನಂತರ ಮೃತದೇಹವನ್ನು  ಮರಣೋತ್ತರ ಪರೀಕ್ಷೆಗಾಗಿ ವಿರಾಜಪೇಟೆ ಸರ್ಕಾರಿ ಆಸ್ಪತ್ರೆಗೆ ರವಾನಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

24 ಗಂಟೆ ಇಂಟರ್ನೆಟ್ ಕಟ್, 57 ಮೆಟ್ರೋ ನಿಲ್ದಾಣ ಬಂದ್: ಸಿಜೆಪಿ ಪ್ರತಿಭಟನೆಗೂ ಮುನ್ನ ದೆಹಲಿ ಹೈ ಅಲರ್ಟ್

ನಂದಿಗ್ರಾಮದಲ್ಲಿ 1.22 ಲಕ್ಷ ಮತ, ಅಸ್ಸಾಂನಲ್ಲಿ BJPಗೆ ಗೆಲುವು; 2 ಕ್ಷೇತ್ರ ಗೆದ್ದ TVK: ಕಾಂಗ್ರೆಸ್, ದೀದಿಗೆ ಮುಖಭಂಗ!

ಉಪಚುನಾವಣೆಯಲ್ಲಿ ಗೆಲುವು, ಜನರೊಂದಿಗೆ NDA ಆಳವಾದ ನಂಟಿನ ಪ್ರತೀಕ: ಪ್ರಧಾನಿ ಮೋದಿ

ಮತಗಳ್ಳತನವೇ ಆಗಿದ್ದರೆ ಕೇರಳ Congress CM, ತಮಿಳುನಾಡು CM ಕೂಡ ಮತಗಳ್ಳರೇ: ಚೇತನ್ ಅಹಿಂಸಾ

'ಅಸಹ್ಯ, ಅತಿರೇಕ.. ನಿಮ್ಮನ್ನು ಈ ರೀತಿ ನೋಡಲು ಇಚ್ಛಿಸುವುದಿಲ್ಲ, BiggBoss ಶೋ ಬಿಟ್ಟು ಹೊರಬನ್ನಿ': Kichcha Sudeepಗೆ ಪತ್ರ