ನನ್ನ ಮೈತ್ರಿ ಯೋಜನೆ ಭಿತ್ತಿಪತ್ರ 
ರಾಜ್ಯ

ʻನನ್ನ ಮೈತ್ರಿʼಯೋಜನೆಗೆ ನಾಳೆ ಮಂಗಳೂರಿನಲ್ಲಿ ಚಾಲನೆ- ಆರೋಗ್ಯ ಸಚಿವ ದಿನೇಶ್ ಗುಂಡೂರಾವ್

ಬೆಂಗಳೂರು: ರಾಜ್ಯದ ಪದವಿಪೂರ್ವ ಕಾಲೇಜುಗಳ ವಿದ್ಯಾರ್ಥಿನಿಯರ ಆರೋಗ್ಯ ಸಂರಕ್ಷಣೆಗಾಗಿ ಋತುಸ್ರಾವ ಕಪ್ (ಮೆನ್ಸ್ಟ್ರುಯಲ್ ಕಪ್) ವಿತರಿಸುವ ಮಹತ್ವದ ʻನನ್ನ ಮೈತ್ರಿʼ ಯೋಜನೆಗೆ ನಾಳೆ ಮಂಗಳೂರಿನಲ್ಲಿ ಚಾಲನೆ ದೊರೆಯಲಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.

ಬೆಂಗಳೂರು: ರಾಜ್ಯದ ಪದವಿಪೂರ್ವ ಕಾಲೇಜುಗಳ ವಿದ್ಯಾರ್ಥಿನಿಯರ ಆರೋಗ್ಯ ಸಂರಕ್ಷಣೆಗಾಗಿ ಋತುಸ್ರಾವ ಕಪ್ (ಮೆನ್ಸ್ಟ್ರುಯಲ್ ಕಪ್) ವಿತರಿಸುವ ಮಹತ್ವದ ʻನನ್ನ ಮೈತ್ರಿʼ ಯೋಜನೆಗೆ ನಾಳೆ ಮಂಗಳೂರಿನಲ್ಲಿ ಚಾಲನೆ ದೊರೆಯಲಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.

 ಸ್ಯಾನಿಟರಿ‌ ನ್ಯಾಪ್ಕಿನ್ ಗೆ ಪರ್ಯಾಯವಾಗಿ ಪರಿಸರ ಸ್ನೇಹಿ ಹಾಗೂ ದೀರ್ಘ ಬಾಳಿಕೆ ಬರುವ ಮೆನ್ ಸ್ಟ್ರುಯಲ್ ಕಪ್ ಗಳನ್ನ ವಿದ್ಯಾರ್ಥಿನಿಯರಿಗೆ ಉಚಿತವಾಗಿ ವಿತರಿಸಲು ನಿರ್ಧರಿಸಲಾಗಿದೆ. ಪ್ರಾಯೋಗಿಕವಾಗಿ ದಕ್ಷಿಣ ಕನ್ನಡ ಹಾಗೂ ಚಾಮರಾಜನಗರ ಎರಡು ಜಿಲ್ಲೆಗಳಲ್ಲಿ ʻನನ್ನ ಮೈತ್ರಿʼಯೋಜನೆ ಕೈಗೆತ್ತಿಕೊಳ್ಳಲಾಗುತ್ತಿದೆ ಎಂದು ಸಚಿವರು ತಮ್ಮ ಎಕ್ಸ್ ಖಾತೆಯಲ್ಲಿ ಮಾಹಿತಿ ನೀಡಿದ್ದಾರೆ.

ರಾಜ್ಯದಲ್ಲಿ ಪ್ರಾಯೋಗಿಕ ಪರೀಕ್ಷೆ ನಡೆಸಲಾದ ದಕ್ಷಿಣಕನ್ನಡ ಜಿಲ್ಲೆಯಲ್ಲಿ 11,000 ವಿದ್ಯಾರ್ಥಿನಿಯರು ಹಾಗೂ ಚಾಮರಾಜ ನಗರದ 4,000 ವಿದ್ಯಾರ್ಥಿನಿಯರಿಗೆ ಕಪ್‌ ವಿತರಣೆಯಾಗಲಿದೆ. ಸರಕಾರಿ ಹಾಗೂ ಅನುದಾನಿತ ಕಾಲೇಜಿನಲ್ಲಿ ಕಲಿಯುತ್ತಿರುವ 17-18 ವರ್ಷದೊಳಗಿನ ಹೆಣ್ಣು ಮಕ್ಕಳಿಗೆ ತಲಾ ಒಂದರಂತೆ ಒಟ್ಟು 15,000 ಕಪ್‌ ವಿತರಿಸಲಾಗುತ್ತದೆ. ಈ ಪ್ರಯೋಗ ಯಶಸ್ವಿಯಾದ ಬಳಿಕ ಉಳಿದ ಜಿಲ್ಲೆಗಳಿಗೂ ವಿಸ್ತರಿಸಲಾಗುವುದು ಎಂದು ಸಚಿವರು ತಿಳಿಸಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಜನರು ಬಿಜೆಪಿ, ಮೋದಿ ಅವರೊಂದಿಗಿದ್ದಾರೆ': 2029ರ ಚುನಾವಣೆಯಲ್ಲಿ ಮತ್ತೊಂದು 'ಭಾರಿ ಸೋಲಿಗೆ' ಸಿದ್ಧರಾಗಿ: ರಾಹುಲ್ ಗಾಂಧಿ ವಿರುದ್ಧ ಅಮಿತ್ ಶಾ ವಾಗ್ದಾಳಿ

'ನನ್ನ ಜೊತೆ ಮಲಗಿದ್ರೆ ಸಿನಿಮಾ ಅವಕಾಶ’: ಚಿಕ್ಕ ವಯಸ್ಸಿಗೆ ಚಿತ್ರರಂಗ ಬಿಟ್ಟಿದ್ದೇಕೆ; ಸೌಥ್ ನಿರ್ದೇಶಕನ ಬಗ್ಗೆ ನಟಿ ಶಾಕಿಂಗ್ ಹೇಳಿಕೆ!

3 ಬಾರಿ ಸಿಎಂ ಕೂಡ ಸುರಕ್ಷಿತವಾಗಿಲ್ಲ: ಮಮತಾ ಬ್ಯಾನರ್ಜಿ ಮೇಲೆ ಚಾಕುವಿನಿಂದ ದಾಳಿಗೆ ಯತ್ನ; ಮಹಿಳೆ ಬಂಧನ

ವಿಚಿತ್ರವಾದ್ರೂ ಸತ್ಯ: ಅಪ್ರಾಪ್ತೆಯನ್ನು ಹಿಂಬಾಲಿಸಿ ಲೈಂಗಿಕ ದೌರ್ಜನ್ಯ; ರೋಬೋಟ್ ವಶಕ್ಕೆ ಪಡೆದ ಪೊಲೀಸರು!

'ಏನೇನ್ ದಾಖಲೆ ಇದೆ ಎಲ್ಲಾ ತರಿಸುತ್ತೇನೆ': HDK 'ಸ್ಟಿಂಗ್' ಆರೋಪಕ್ಕೆ CM ಡಿಕೆಶಿ ಶಾಕಿಂಗ್ ರಿಯಾಕ್ಷನ್!