ಬಸ್ಸಿನ ಎಡಭಾಗ ಸಂಪೂರ್ಣ ಜಖಂಗೊಂಡಿದೆ. 
ರಾಜ್ಯ

ಚಿತ್ರದುರ್ಗ: ಸರ್ಕಾರಿ ಬಸ್​ ಮತ್ತು ಲಾರಿ ಮಧ್ಯೆ ಅಪಘಾತ; ಐವರ ಸಾವು

ಚಿತ್ರದುರ್ಗದ ಚಳ್ಳಕೆರೆ ತಾಲೂಕು ಕೇಂದ್ರದಿಂದ ಹಿರಿಯೂರಿಗೆ ಸಾಗುವ, ಬೀದರ್-ಶ್ರೀರಂಗಪಟ್ಟಣ ರಸ್ತೆಯಲ್ಲಿ (ರಾಷ್ಟ್ರೀಯ ಹೆದ್ದಾರಿ ನಂಬರ್ 14ರಲ್ಲಿ) ರಾಜ್ಯ ಸರ್ಕಾರಿ ಬಸ್ಸು ಹಾಗೂ ಲಾರಿ ನಡುವೆ ಭೀಕರ ಅಪಘಾತ ಸಂಭವಿಸಿ ಐದು ಮಂದಿ ಸಾವನ್ನಪ್ಪಿದ್ದಾರೆ.

ಹಿರಿಯೂರು: ಚಿತ್ರದುರ್ಗದ ಚಳ್ಳಕೆರೆ ತಾಲೂಕು ಕೇಂದ್ರದಿಂದ ಹಿರಿಯೂರಿಗೆ ಸಾಗುವ, ಬೀದರ್-ಶ್ರೀರಂಗಪಟ್ಟಣ ರಸ್ತೆಯಲ್ಲಿ (ರಾಷ್ಟ್ರೀಯ ಹೆದ್ದಾರಿ ನಂಬರ್ 14ರಲ್ಲಿ) ರಾಜ್ಯ ಸರ್ಕಾರಿ ಬಸ್ಸು ಹಾಗೂ ಲಾರಿ ನಡುವೆ ಭೀಕರ ಅಪಘಾತ ಸಂಭವಿಸಿ ಐದು ಮಂದಿ ಸಾವನ್ನಪ್ಪಿದ್ದಾರೆ.

ಮೃತರನ್ನು ಬೆಂಗಳೂರು ಮೂಲದ ಪಾರ್ವತಮ್ಮ(45), ಮಸ್ಕಿಯ ರಮೇಶ್(40)‌, ರಾಯಚೂರಿನ ಮಾಬಮ್ಮ, ಮಾನ್ವಿಯ ನರಸಣ್ಣ ಎಂದು ಗುರುತಿಸಲಾಗಿದೆ. ಇನ್ನೂ ಒಬ್ಬರ ಗುರುತು ಪತ್ತೆಯಾಗಿಲ್ಲ.

ಗಾಯಗೊಂಡ ಎಂಟು ಜನರಲ್ಲಿ ಐವರನ್ನು ಚಿತ್ರದುರ್ಗ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದ್ದು, ಮೂವರಿಗೆ ಚಳ್ಳಕೆರೆ ಜನರಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಪ್ರಯಾಣಿಕರ ಪ್ರಕಾರ, ಕೆಕೆಆರ್‌ಟಿಸಿ ಚಾಲಕ ಅತಿವೇಗ ಮತ್ತು ನಿರ್ಲಕ್ಷತನದಿಂದ ಬಸ್ಸನ್ನು ಚಲಾಯಿಸುತ್ತಿದ್ದ ಎಂದು ತಿಳಿದು ಬಂದಿದೆ. ನಿಧಾನವಾಗಿ ಚಲಿಸುತ್ತಿದ್ದ ಲಾರಿ ಹಿಂದಿಕ್ಕಲು ಯತ್ನಿಸಿದ ವೇಳೆ ಅಪಘಾತ ಸಂಭವಿಸಿದೆ, ಬಸ್ಸಿನ ಎಡಭಾಗ ಸಂಪೂರ್ಣ ಜಖಂಗೊಂಡಿದೆ.

ಡಿಕ್ಕಿಯ ರಭಸಕ್ಕೆ ಬಸ್ ನ ಮುಂದಿನ ಸೀಟುಗಳಲ್ಲಿ ಕುಳಿತಿದ್ದ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಘಟನೆ ಸಂಬಂಧ ಹಿರಿಯೂರು ಪೊಲೀಸರು ದೂರು ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ದಲಿತ ಸಚಿವರ ನಿಯೋಗ ಭೇಟಿ ಬೆನ್ನಲ್ಲೇ SC ಒಳ ಮೀಸಲಾತಿ ಮಸೂದೆಗೆ ರಾಜ್ಯಪಾಲರ ಅಂಕಿತ

'ಸಂಘರ್ಷಕ್ಕೆ ಮಾನವೀಯತೆ ಬಲಿಯಾಗಬಾರದು': ಗಾಜಾ ಶಾಂತಿ ಯೋಜನೆಗೆ ಪ್ರಧಾನಿ ಮೋದಿ ಬೆಂಬಲ

AI, ಕೃಷಿ, ಸೈಬರ್ ಭದ್ರತೆ, UPI ಸೇರಿದಂತೆ ಸರಣಿ ಒಪ್ಪಂದಗಳಿಗೆ ಭಾರತ ಮತ್ತು ಇಸ್ರೇಲ್ ಸಹಿ

ಹೆಲಿಪ್ಯಾಡ್, ಸ್ವಿಮ್ಮಿಂಗ್ ಪೂಲ್, ಜಿಮ್: ಅನಿಲ್ ಅಂಬಾನಿಯ 3,716 ಕೋಟಿ ರೂ. ಬೆಲೆಬಾಳುವ 17 ಅಂತಸ್ತಿನ ಕಟ್ಟಡ 'Abode ಇಡಿ ವಶಕ್ಕೆ!

T20 World Cup 2026: ವೆಸ್ಟ್ ಇಂಡೀಸ್ ವಿರುದ್ಧ ದಕ್ಷಿಣ ಆಫ್ರಿಕಾಕ್ಕೆ ಭರ್ಜರಿ ಜಯ; ಈ ಗೆಲುವಿಗಾಗಿ ಪರಿತಪಿಸುತ್ತಿತ್ತು ಭಾರತ!

SCROLL FOR NEXT