ಎಚ್ ಡಿ ಕುಮಾರಸ್ವಾಮಿ 
ರಾಜ್ಯ

ಅರೆಬೆಂದ 'ಶಕ್ತಿ' ಯೋಜನೆ ಫಲವಾಗಿ ಖಾಸಗಿ ಸಂಚಾರ ವ್ಯವಸ್ಥೆ ಬುಡಮೇಲಾಗಿದೆ: ಕುಮಾರಸ್ವಾಮಿ ವಾಗ್ದಾಳಿ

ರಾಜ್ಯ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿಗಳ 'ಅಡ್ಡ ಪರಿಣಾಮ'ದ ತೀವ್ರತೆ ಜನರಿಗೆ ತಟ್ಟುತ್ತಿದೆ. ಅವೈಜ್ಞಾನಿಕ, ಅರೆಬೆಂದ 'ಶಕ್ತಿ' ಯೋಜನೆಯ ಫಲವಾಗಿ ಇವತ್ತು ಖಾಸಗಿ ಸಂಚಾರ ವ್ಯವಸ್ಥೆ ಬುಡಮೇಲಾಗಿದೆ ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್ .ಡಿ. ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ.

ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿಗಳ 'ಅಡ್ಡ ಪರಿಣಾಮ'ದ ತೀವ್ರತೆ ಜನರಿಗೆ ತಟ್ಟುತ್ತಿದೆ. ಅವೈಜ್ಞಾನಿಕ, ಅರೆಬೆಂದ 'ಶಕ್ತಿ' ಯೋಜನೆಯ ಫಲವಾಗಿ ಇವತ್ತು ಖಾಸಗಿ ಸಂಚಾರ ವ್ಯವಸ್ಥೆ ಬುಡಮೇಲಾಗಿದೆ ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್ .ಡಿ. ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ.

ಖಾಸಗಿ ಸಾರಿಗೆ ಒಕ್ಕೂಟಗಳಿಂದ ಬೆಂಗಳೂರು ಬಂದ್ ಕುರಿತು ಎಕ್ಸ್ ನಲ್ಲಿ ಸರಣಿ ಟ್ವೀಟ್ ಮೂಲಕ ಕಿಡಿಕಾರಿರುವ ಕುಮಾರಸ್ವಾಮಿ, ಸಾಲಸೋಲ ಮಾಡಿ ಕ್ಯಾಬ್, ಆಟೋ ಓಡಿಸಿಕೊಂಡು ಬದುಕುತ್ತಿದ್ದವರು ಬೀದಿ ಪಾಲಾಗಿದ್ದಾರೆ. ನಿತ್ಯದ ಬದುಕು ಸಾಗಿಸುವುದೇ ದುಸ್ತರ ಎನ್ನುವ ಸ್ಥಿತಿಯಲ್ಲಿ ಅವರಿದ್ದಾರೆ. ಇನ್ನು, ಸರಕಾರಿ ಸಾರಿಗೆಯಷ್ಟೇ ಉತ್ತಮವಾಗಿ ಸೇವೆ ಒದಗಿಸುತ್ತಿರುವ ಖಾಸಗಿ ಬಸ್ ಜಾಲವನ್ನು ಸರಕಾರ ಹಾಳು ಮಾಡಿದೆ. ಅನೇಕರ ಬದುಕಿಗೆ ಗ್ಯಾರಂಟಿ ಇಲ್ಲದಂತೆ ಮಾಡಿದೆ. ಈ ಬಂದ್ ನಿಂದ ಸರಕಾರಿ ಸಾರಿಗೆಗೆ ಪರ್ಯಾಯವಾಗಿದ್ದ ಖಾಸಗಿ ಸಾರಿಗೆ ಜಾಲ ಸಂಪೂರ್ಣ ಸ್ಥಗಿತವಾಗಿದೆ. ಶಾಲಾ ಮಕ್ಕಳು, ಸಾರ್ವಜನಿಕರು, ವಿಮಾನ ನಿಲ್ದಾಣಕ್ಕೆ ತೆರಳುವವರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಹಣ್ಣು, ತರಕಾರಿ ಸೇರಿ ಅಗತ್ಯ ವಸ್ತುಗಳ ಸಾಗಣೆಯಲ್ಲಿ ವ್ಯತ್ಯಯ ಆಗಿದೆ ಎಂದು ಆರೋಪಿಸಿದ್ದಾರೆ.

ಸರ್ಕಾರ ಖಾಸಗಿ ಸಾರಿಗೆ ಒಕ್ಕೂಟದವರ ಬೇಡಿಕೆಗಳನ್ನು ಪ್ರತಿಷ್ಠೆ ಪಕ್ಕಕ್ಕಿಟ್ಟು ಮಾನವೀಯತೆಯಿಂದ ಪರಿಶೀಲಿಸಬೇಕು. ಅವರ ಬೇಡಿಕೆಗಳು ಈಡೇರಿಸಲಾಗದ ಅಸಾಧ್ಯ ಡಿಮ್ಯಾಂಡ್ ಗಳಲ್ಲ. ಅವರಿಗೂ ಕುಟುಂಬಗಳಿವೆ, ತಂದೆತಾಯಿ, ಮಕ್ಕಳು ಇರುತ್ತಾರೆ ಎನ್ನುವುದನ್ನು ಸರಕಾರ ಮರೆಯಬಾರದು. ಕಾಟಾಚಾರಕ್ಕೆ ಕರೆದು ಮಾತನಾಡುವುದಲ್ಲ. ವಾಸ್ತವತೆಗೆ ತಕ್ಕಂತೆ ಕಷ್ಟದಲ್ಲಿರುವ ಅವರಿಗೆ ನೆರವಾಗಬೇಕು. ನುಡಿದಂತೆಯೇ ನಡೆದು, 'ಗ್ಯಾರಂಟಿ ಬಾಧಿತರ' ಬದುಕಿಗೆ ಪರಿಹಾರ ಒದಗಿಸಬೇಕು ಎನ್ನುವುದು ನನ್ನ ಆಗ್ರಹ.ತಕ್ಷಣವೇ ಬಂದ್ ನಿರತರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರು ಕರೆದು ಮಾತನಾಡಬೇಕು ಎಂದು ಅವರು ಒತ್ತಾಯಿಸಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 32 ಮಂದಿ ಸಾವು

Shocking: ಆಸಿಸ್ ಕ್ರಿಕೆಟ್ ದಿಗ್ಗಜ Michael Clarkeಗೆ 'ಚರ್ಮದ ಕ್ಯಾನ್ಸರ್'!

'ಮದುವೆಗೆ ಮುನ್ನ ಪೋಷಕರ ಒಪ್ಪಿಗೆ ಕಡ್ಡಾಯಗೊಳಿಸಿ': ಹರಿಯಾಣ BJP ಶಾಸಕ

ಭಾರತದ ಮೇಲೆ ಸುಂಕಾಸ್ತ್ರ ಜಾರಿ: ಮತ್ತೆ ಇಂಡೋ-ಪಾಕ್ ಯುದ್ಧ ನಿಲ್ಲಿಸಿದ್ದು ನಾನೇ ಎಂದು ಪುನರುಚ್ಛರಿಸಿದ ಡೊನಾಲ್ಡ್ ಟ್ರಂಪ್

SCROLL FOR NEXT