ನಮ್ಮಲ್ಲಿ ನೀರಿಲ್ಲ' ಬಿಡುವುದು ಎಲ್ಲಿಂದ?: ಡಿಸಿಎಂ ಡಿಕೆ ಶಿವಕುಮಾರ್
ನಮ್ಮಲ್ಲಿ ಮಳೆ ಕೊರತೆಯಿಂದಾಗಿ ಅಗತ್ಯ ಪ್ರಮಾಣದ ನೀರಿಲ್ಲ. ನಾವು ಕುಡಿಯುವ ಉದ್ದೇಶಕ್ಕೆ ನೀರು ಹೊಂದಿಸಿಕೊಳ್ಳುವುದಕ್ಕೆ ಕಷ್ಟವಿದೆ, ತಮಿಳುನಾಡಿಗೆ ನೀರು ಬಿಡುವ ಸ್ಥಿತಿಯಲ್ಲಿ ನಾವು ಇಲ್ಲ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ.
ಬೆಂಗಳೂರು: ನಮ್ಮಲ್ಲಿ ಮಳೆ ಕೊರತೆಯಿಂದಾಗಿ ಅಗತ್ಯ ಪ್ರಮಾಣದ ನೀರಿಲ್ಲ. ನಾವು ಕುಡಿಯುವ ಉದ್ದೇಶಕ್ಕೆ ನೀರು ಹೊಂದಿಸಿಕೊಳ್ಳುವುದಕ್ಕೆ ಕಷ್ಟವಿದೆ, ತಮಿಳುನಾಡಿಗೆ ನೀರು ಬಿಡುವ ಸ್ಥಿತಿಯಲ್ಲಿ ನಾವು ಇಲ್ಲ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ.
ರಾಜ್ಯದಲ್ಲಿ ನೀರು ಇಲ್ಲದೇ ಇರುವ ವಾಸ್ತವಾಂಶವನ್ನು ನಾವು ತಿಳಿಸುತ್ತೇವೆ. ನಾವು ಕುಡಿಯುವ ನೀರು ಹೊಂದಿಸಿಕೊಳ್ಳಲು ಅವಕಾಶ ನೀಡಿ ಎಂದು ಪ್ರಾಧಿಕಾರದ ಮುಂದೆ ಮನವಿ ಮಾಡುತ್ತೇವೆ” ಎಂದು ಡಿಸಿಎಂ ಹೇಳಿದ್ದಾರೆ.
ಇದನ್ನೂ ಓದಿ: ಮುಂದಿನ 15 ದಿನ ತಮಿಳುನಾಡಿಗೆ 5 ಸಾವಿರ ಕ್ಯೂಸೆಕ್ಸ್ ಕಾವೇರಿ ನೀರು ಹರಿಸಲು ಕರ್ನಾಟಕಕ್ಕೆ CWRC ಸೂಚನೆ!
12ರ ನಂತರ ನೀರು ನಿಲ್ಲಿಸುತ್ತೀರಾ ಎಂಬ ಪತ್ರಕರ್ತರ ಪ್ರಶ್ನೆಗೆ, “ಈಗ ನೀರು ಹೋಗುತ್ತಿಲ್ಲ, ಇನ್ನು ಬಂದ್ ಮಾಡುವುದು ಎಲ್ಲಿ. ಮಳೆ ಬರಲಿ ಎಂದು ನೀವೆಲ್ಲರೂ ಪ್ರಾರ್ಥನೆ ಮಾಡಿ” ಎಂದು ಹೇಳಿದರು.
ತಮಿಳುನಾಡಿಗೆ ಮುಂದಿನ 15 ದಿನಗಳವರೆಗೂ ಪ್ರತಿದಿನ 5,000 ಕ್ಯೂಸೆಕ್ಸ್ ನೀರು ಹರಿಸಬೇಕೆಂದು ಕಾವೇರಿ ನದಿ ನೀರು ನಿರ್ವಹಣಾ ಸಮಿತಿ ಕರ್ನಾಟಕಕ್ಕೆ ಸೂಚನೆ ನೀಡಿದೆ. ಈ ಬೆನ್ನಲ್ಲೇ ಡಿಸಿಎಂ ಹೇಳಿಕೆ ನೀಡಿದ್ದಾರೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.