ಡಿ.ಕೆ ಶಿವಕುಮಾರ್ 
ರಾಜ್ಯ

ಕರ್ನಾಟಕದಲ್ಲಿ ಮಳೆ ಕೊರತೆ: ತಮಿಳುನಾಡಿಗೆ ಕಾವೇರಿ ನೀರು ಬಿಡುವ ಸ್ಥಿತಿಯಲ್ಲಿ ಇಲ್ಲ- ಡಿಸಿಎಂ ಶಿವಕುಮಾರ್

ಕರ್ನಾಟಕದಲ್ಲಿ ಸಮರ್ಪಕ ಮಳೆಯಾಗದ ಕಾರಣ ರಾಜ್ಯದ ಡ್ಯಾಂ ಗಳಲ್ಲಿ ಮತ್ತು ನದಿ ಜಲಾನಯನ ಪ್ರದೇಶಗಳಲ್ಲಿ ಸಾಕಷ್ಟು ನೀರು ಸಂಗ್ರಹವಾಗಿಲ್ಲ. ಹೀಗಾಗಿ ನೆರೆಯ ತಮಿಳುನಾಡಿಗೆ ಕಾವೇರಿ ನದಿ ನೀರು ಬಿಡಲು ರಾಜ್ಯಕ್ಕೆ ಸಾಧ್ಯವಾಗುತ್ತಿಲ್ಲ ಎಂದು ಕರ್ನಾಟಕ ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಮಂಗಳವಾರ ಹೇಳಿದ್ದಾರೆ. .

ಬೆಂಗಳೂರು: ಕರ್ನಾಟಕದಲ್ಲಿ ಸಮರ್ಪಕ ಮಳೆಯಾಗದ ಕಾರಣ ರಾಜ್ಯದ ಡ್ಯಾಂ ಗಳಲ್ಲಿ ಮತ್ತು ನದಿ ಜಲಾನಯನ ಪ್ರದೇಶಗಳಲ್ಲಿ ಸಾಕಷ್ಟು ನೀರು ಸಂಗ್ರಹವಾಗಿಲ್ಲ. ಹೀಗಾಗಿ ನೆರೆಯ ತಮಿಳುನಾಡಿಗೆ ಕಾವೇರಿ ನದಿ ನೀರು ಬಿಡಲು ರಾಜ್ಯಕ್ಕೆ ಸಾಧ್ಯವಾಗುತ್ತಿಲ್ಲ ಎಂದು ಕರ್ನಾಟಕ ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಮಂಗಳವಾರ ಹೇಳಿದ್ದಾರೆ. .

ತಮಿಳುನಾಡಿಗೆ ಮುಂದಿನ 15 ದಿನಗಳ ಕಾಲ ಪ್ರತಿದಿನ 5,000 ಕ್ಯೂಸೆಕ್ ನೀರು ಬಿಡುವಂತೆ ಕರ್ನಾಟಕಕ್ಕೆ ಕಾವೇರಿ ನೀರು ನಿಯಂತ್ರಣ ಸಮಿತಿ (ಸಿಡಬ್ಲ್ಯುಆರ್‌ಸಿ) ಶಿಫಾರಸು ಮಾಡಿದ ನಂತರ ಜಲಸಂಪನ್ಮೂಲ ಸಚಿವರೂ ಆಗಿರುವ ಡಿಕೆ ಶಿವಕುಮಾರ್ ಅವರ ಈ ಹೇಳಿಕೆ ಬಂದಿದೆ. "ನಮ್ಮಲ್ಲಿ ನೀರಿಲ್ಲ ಎಂದು ನಾನು ಸ್ಪಷ್ಟಪಡಿಸುತ್ತಿದ್ದೇನೆ. ಅವರು (ಸಿಡಬ್ಲ್ಯೂಆರ್‌ಸಿ) ಆದೇಶವನ್ನು (ಶಿಫಾರಸು) ನೀಡಿದ್ದಾರೆ, ನಾಳೆ ವಿಷಯವು ಉನ್ನತ ಸಮಿತಿಯ ಮುಂದೆ ಹೋಗುತ್ತದೆ. ಇದೇ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ (ಸಿಡಬ್ಲ್ಯುಎಂಎ)ಸಮಿತಿಯಲ್ಲಿ ನಮ್ಮ ಕಾರ್ಯದರ್ಶಿಗಳು ಕೂಡ ಸದಸ್ಯರಾಗಿದ್ದಾರೆ. ನಾನು ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಳಿಗ್ಗೆ ವಿಷಯ ಚರ್ಚಿಸಿದ್ದೇವೆ ಮತ್ತು ನಮಗೆ ನೀರು ಬಿಡಲು ಸಾಧ್ಯವಿಲ್ಲ ಎಂದು ನಮ್ಮ ಅಧಿಕಾರಿಗಳಿಗೆ ತಿಳಿಸಿದ್ದೇವೆ ಎಂದು ಶಿವಕುಮಾರ್ ಇಲ್ಲಿ ಸುದ್ದಿಗಾರರಿಗೆ ತಿಳಿಸಿದರು.

ಸಿಡಬ್ಲ್ಯುಆರ್‌ಸಿ ಶಿಫಾರಸಿಗೆ ಪ್ರತಿಕ್ರಿಯಿಸಿದ ಅವರು, ತಮಿಳುನಾಡು 12,500 ಕ್ಯೂಸೆಕ್‌ಗೆ ಬೇಡಿಕೆ ಇಟ್ಟಿದೆ ಎಂದು ಹೇಳಲಾಗುತ್ತಿದೆ ಮತ್ತು ಸಿಡಬ್ಲ್ಯೂಆರ್‌ಸಿ ಶಿಫಾರಸು 5,000 ಕ್ಯೂಸೆಕ್‌ಗೆ ಇದೆ, ಆದರೆ ಈಗ ನೀರಿಲ್ಲ. ಇಂದು ರಾತ್ರಿ ಮತ್ತು ನಾಳೆ ಬೆಳಿಗ್ಗೆ ನಮ್ಮ ದೆಹಲಿ ಕಾನೂನು ತಜ್ಞರೊಂದಿಗೆ ಚರ್ಚಿಸುತ್ತೇವೆ... ಮೊದಲು ಕುಡಿಯಲು ನೀರನ್ನು ಉಳಿಸಬೇಕು, ಆ ಬಳಿಕವೇ ರೈತ ಮತ್ತು ಕೃಷಿಗೆ ನೀರು ಬಿಡುವ ವಿಚಾರ ಬರುತ್ತದೆ. ಪ್ರಸ್ತುತ ಈಗ ಕುಡಿಯುವ ನೀರಿಗೆ ನಮ್ಮ ಆದ್ಯತೆ. ಆದ್ದರಿಂದ ನೀರು ಬಿಡುವುದು ತುಂಬಾ ಕಷ್ಟವಾಗುತ್ತದೆ ಎಂದು ನಾವು ಪ್ರಾಧಿಕಾರಕ್ಕೆ ತಿಳಿಸುತ್ತೇವೆ ಎಂದು ಡಿಕೆ ಶಿವಕುಮಾರ್ ಹೇಳಿದರು.

ಈ ವಿಷಯದಲ್ಲಿ ಮಧ್ಯಪ್ರವೇಶಿಸುವುದಿಲ್ಲ ಮತ್ತು ತಾಂತ್ರಿಕ ಸಮಿತಿಗಳು ತೀರ್ಮಾನಿಸಲಿ ಎಂದು ಸುಪ್ರೀಂ ಕೋರ್ಟ್ ಈಗಾಗಲೇ ಎರಡೂ ರಾಜ್ಯಗಳಿಗೆ ಹೇಳಿದೆ. ಇದೇ ವಿಚಾರವಾಗಿ ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್, “ನೀರು ಬಿಡುವುದು ತುಂಬಾ ಕಷ್ಟ ಎಂದು ನಾನು ಹೇಳಬಲ್ಲೆ ಎಂದರು. ಕಾವೇರಿ ನಿರ್ವಹಣಾ ಸಮಿತಿ ನೆಲದ ಪರಿಸ್ಥಿತಿಯನ್ನು ಅರ್ಥಮಾಡಿಕೊಳ್ಳಲು ಸಾಧ್ಯವಾಗುತ್ತಿಲ್ಲವೇ ಎಂಬ ಪ್ರಶ್ನೆಗೆ, "ನಾವು ಇಂದು ವಾಸ್ತವದೊಂದಿಗೆ ನಮ್ಮ ನಿಲುವನ್ನು ಹೇಳಿದ್ದೇವೆ ಮತ್ತು ನಾಳೆಯೂ ಸಮಿತಿಗೆ ನಮ್ಮ ವಾದ ಮನವರಿಕೆ ಮಾಡುತ್ತೇವೆ... ಅವರು ರಾಜ್ಯಕ್ಕೆ ಬಂದು ಪರಿಸ್ಥಿತಿಯನ್ನು ನೋಡಬಹುದು ಎಂದರು.

ಹಾಲಿ ಪರಿಸ್ಥಿತಿ ಕಾನೂನು ಹೋರಾಟಕ್ಕೆ ಕಾರಣವಾಗಲಿದೆಯೇ ಎಂಬ ಪ್ರಶ್ನೆಗೆ ಉತ್ತರಿಸಿದ ಶಿವಕುಮಾರ್, ರಾಜ್ಯದ ಹಿತ ಕಾಪಾಡಲು ಜನತೆ ಹಾಗೂ ವಿರೋಧ ಪಕ್ಷಗಳ ಸಹಕಾರ ಕೋರುತ್ತೇವೆ ಎಂದರು.  ನೀರು ಬಿಡುವ ಆದೇಶದ ಹಿಂದೆ ರಾಜಕೀಯ ಅಡಗಿದೆಯೇ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ‘ಇಲ್ಲ, ಜವಾಬ್ದಾರಿಯುತ ಸ್ಥಾನದಲ್ಲಿರುವ ಸಮಿತಿಗಳ ಮೇಲೆ ರಾಜಕೀಯ ಆರೋಪ ಮಾಡಲಾರೆ, ಅವರು ನ್ಯಾಯಾಧೀಶರ ಸ್ಥಾನದಲ್ಲಿ ಕುಳಿತಿದ್ದಾರೆ. ಕೇಂದ್ರ ಸರ್ಕಾರದ ಅಧಿಕಾರಿಗಳು, ಉಭಯ ರಾಜ್ಯಗಳ ಪ್ರತಿನಿಧಿಗಳು ಮತ್ತಿತರರು ಮತ್ತು ರಾಜ್ಯಗಳು ಅದರ ಭಾಗವಾಗಿದೆ ಎಂದರು. 

ಸಿಡಬ್ಲ್ಯುಆರ್‌ಸಿ ಶಿಫಾರಸಿನ ಆಧಾರದ ಮೇಲೆ ಆಗಸ್ಟ್ 29 ರಿಂದ ಮುಂದಿನ 15 ದಿನಗಳವರೆಗೆ ತಮಿಳುನಾಡಿಗೆ ಪ್ರತಿದಿನ 5,000 ಕ್ಯೂಸೆಕ್ ನೀರು ಬಿಡುವಂತೆ ಸಿಡಬ್ಲ್ಯೂಎಂಎ ಕರ್ನಾಟಕಕ್ಕೆ ನಿರ್ದೇಶನ ನೀಡಿತ್ತು.

ಇದಕ್ಕೂ ಮುನ್ನ ಮಾತನಾಡಿದ ಶಿವಕುಮಾರ್, ಪ್ರಸ್ತುತ ರಾಜ್ಯದಿಂದ ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿಲ್ಲ, ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ (ಸಿಡಬ್ಲ್ಯುಎಂಎ) ಕರ್ನಾಟಕ ಅಧಿಕಾರಿಗಳು ಕನಿಷ್ಠ ಕುಡಿಯಲು ನೀರನ್ನು ಉಳಿಸುವಂತೆ ಮನವಿ ಮಾಡುತ್ತಾರೆ ಎಂದರು. 

ಬೆಳೆದಿರುವ ಬೆಳೆಗಳಿಗೆ ಕಾವೇರಿ ನೀರು ಬಿಡುವಂತೆ ಕರ್ನಾಟಕಕ್ಕೆ ನಿರ್ದೇಶನ ನೀಡುವಂತೆ ತಮಿಳುನಾಡು ಸುಪ್ರೀಂ ಕೋರ್ಟ್‌ನ ಮೊರೆ ಹೋಗಿದೆ. ಮೂಲಗಳ ಪ್ರಕಾರ ಪ್ರಕರಣ ಮುಂದಿನ ವಾರ ಸುಪ್ರೀಂ ಕೋರ್ಟ್‌ಗೆ ಬರಬಹುದು. ಈ ಮಧ್ಯೆ, ಕರ್ನಾಟಕ ಬಿಜೆಪಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ತಮಿಳುನಾಡಿಗೆ ಯಾವುದೇ ಬೆಲೆಗೆ ನೀರು ಬಿಡದಂತೆ ರಾಜ್ಯ ಸರ್ಕಾರವನ್ನು ಕೋರಿದ್ದು, ಈ ವಿಚಾರದಲ್ಲಿ ಪಕ್ಷವು ತನ್ನ ಕಾನೂನು ಹೋರಾಟದಲ್ಲಿ ಸರ್ಕಾರದ ಜೊತೆ ನಿಲ್ಲುತ್ತದೆ ಎಂದು ಹೇಳಿದ್ದಾರೆ.

"ರಾಜ್ಯ ಸರ್ಕಾರ ಮತ್ತು ಮುಖ್ಯಮಂತ್ರಿಗಳಿಗೆ ನಾವು ವಿನಂತಿಸುತ್ತೇವೆ. ರಾಜ್ಯದಲ್ಲಿ ರೈತರಿಗೆ ನೀರಿಲ್ಲ, ಬರ ಪರಿಸ್ಥಿತಿ ಇದೆ, ಕುಡಿಯುವ ನೀರಿಗೂ ಅಭಾವವಿದೆ - ಇಂತಹ ಪರಿಸ್ಥಿತಿಯಲ್ಲಿ ಯಾವುದೇ ಬೆಲೆಗೆ ನೀರು ಬಿಡಬಾರದು. ಸುಪ್ರೀಂ ಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಿ ಹೋರಾಟ ನಡೆಸಬೇಕು.ನಾವು ಸರ್ಕಾರದ ಜೊತೆಗಿದ್ದೇವೆ ಎಂದ ಕಟೀಲ್ ಅವರು, ರಾಜ್ಯದ ಹಿತ ಕಾಪಾಡುವುದು ಸರ್ಕಾರದ ಕರ್ತವ್ಯ ಎಂದು ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

'ಶಾಂತಿ ಬೇಕಾದರೆ ಯುದ್ಧಕ್ಕೆ ಸಿದ್ಧರಾಗಿ.. Sudarshan Chakra ವಾಯುರಕ್ಷಣಾ ವ್ಯವಸ್ಥೆಗೆ ಮೂರೂ ಸೇನೆಗಳ ಬೃಹತ್ ಪ್ರಯತ್ನ ಬೇಕು': CDS Chauhan

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

SCROLL FOR NEXT