ಸಾಂದರ್ಭಿಕ ಚಿತ್ರ(ಡಿ ಕೆ ಶಿವಕುಮಾರ್ ಟ್ವಿಟ್ಟರ್ ಪೇಜ್ ನಿಂದ) 
ರಾಜ್ಯ

'ಕಾವೇರಿ'ದ ವಿವಾದ: ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ತುರ್ತು ಸಭೆ, ತೀವ್ರ ಪ್ರತಿಭಟನೆ

ತಮಿಳುನಾಡಿಗೆ ಕಾವೇರಿ ನೀರು ಬಿಡುಗಡೆ ವಿಚಾರ ದಿನದಿಂದ ದಿನಕ್ಕೆ ಕಗ್ಗಂಟಾಗುತ್ತಿದೆ. ಈ ವರ್ಷ ಕೈಕೊಟ್ಟ ಮುಂಗಾರಿನ ನಡುವೆ ತಮಿಳು ನಾಡಿಗೆ ಮತ್ತೆ ಐದು ಸಾವಿರ ಕ್ಯೂಸೆಕ್ಸ್ ನೀರನ್ನು ಬಿಡುವಂತೆ ಕಾವೇರಿ ನೀರು ನಿಯಂತ್ರಣ ಸಮಿತಿ ಸೂಚನೆ ನೀಡಿರುವುದು ಕರ್ನಾಟಕಕ್ಕೆ ಗಾಯದ ಮೇಲೆ ಬರೆ ಎಳೆದಂತಾಗಿದೆ.

ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಬಿಡುಗಡೆ ವಿಚಾರ ದಿನದಿಂದ ದಿನಕ್ಕೆ ಕಗ್ಗಂಟಾಗುತ್ತಿದೆ. ಈ ವರ್ಷ ಕೈಕೊಟ್ಟ ಮುಂಗಾರಿನ ನಡುವೆ ತಮಿಳು ನಾಡಿಗೆ ಮತ್ತೆ ಐದು ಸಾವಿರ ಕ್ಯೂಸೆಕ್ಸ್ ನೀರನ್ನು ಬಿಡುವಂತೆ ಕಾವೇರಿ ನೀರು ನಿಯಂತ್ರಣ ಸಮಿತಿ ಸೂಚನೆ ನೀಡಿರುವುದು ಕರ್ನಾಟಕಕ್ಕೆ ಗಾಯದ ಮೇಲೆ ಬರೆ ಎಳೆದಂತಾಗಿದೆ.

ಈ ಹಿನ್ನೆಲೆಯಲ್ಲಿ ಇಂದು ಬುಧವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ತುರ್ತು ಸಭೆ ನಡೆಯಲಿದೆ. ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಇಂದು ಮಧ್ಯಾಹ್ನ ಸಭೆ ಕರೆಯಲಾಗಿದ್ದು, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಕಾವೇರಿ ಜಲಾನಯನ ಪ್ರದೇಶದ ವ್ಯಾಪ್ತಿಯ ಸಚಿವರುಗಳು, ಎಲ್ಲ ಪಕ್ಷಗಳ ಮಾಜಿ ಮುಖ್ಯಮಂತ್ರಿಗಳು, ರಾಜ್ಯ ಸಚಿವ ಸಂಪುಟದ ಹಿರಿಯ ಸಚಿವರು, ಲೋಕಸಭೆ ಮತ್ತು ರಾಜ್ಯ ಸಭಾ ಸದಸ್ಯರುಗಳು ಸಭೆಯಲ್ಲಿ ಭಾವಹಿಸಲಿದ್ದಾರೆ.

ಕಾವೇರಿ ನೀರು ನಿಯಂತ್ರಣ ಸಮಿತಿ ತಮಿಳುನಾಡಿಗೆ ಮತ್ತೆ 15 ದಿನ 5,000 ಕ್ಯೂಸೆಕ್ ನೀರು ಬಿಡಬೇಕೆಂದು ನಿನ್ನೆ ಮಂಗಳವಾರ ಕರ್ನಾಟಕಕ್ಕೆ ಆದೇಶ ನೀಡಿತ್ತು. ಇದರಿಂದ ಕಾವೇರಿ ತೀರದ ರೈತರಿಗೆ ಆಘಾತವಾಗಿದೆ. ರೈತರು ಸರ್ಕಾರದ ವಿರುದ್ಧ ಇನ್ನಷ್ಟು ಆಕ್ರೋಶಗೊಂಡಿದ್ದು, ರಸ್ತೆಗೆ ಇಳಿದು ಪ್ರತಿಭಟನೆ ಮಾಡುತ್ತಿದ್ದಾರೆ. 

ಈ ಬಗ್ಗೆ ನಿನ್ನೆ ಬೆಂಗಳೂರಿನಲ್ಲಿ ಪ್ರತಿಕ್ರಿಯೆ ನೀಡಿದ್ದ ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್, ಕರ್ನಾಟಕದಲ್ಲಿ ಸಮರ್ಪಕ ಮಳೆಯಾಗದ ಕಾರಣ ರಾಜ್ಯದ ಡ್ಯಾಂ ಗಳಲ್ಲಿ ಮತ್ತು ನದಿ ಜಲಾನಯನ ಪ್ರದೇಶಗಳಲ್ಲಿ ಸಾಕಷ್ಟು ನೀರು ಸಂಗ್ರಹವಾಗಿಲ್ಲ. ಹೀಗಾಗಿ ನೆರೆಯ ತಮಿಳುನಾಡಿಗೆ ಕಾವೇರಿ ನದಿ ನೀರು ಬಿಡಲು ರಾಜ್ಯಕ್ಕೆ ಸಾಧ್ಯವಾಗುತ್ತಿಲ್ಲ ಎಂದು ಹೇಳಿದ್ದರು. 

ಇಂದು ಪ್ರತಿಭಟನೆ: ತಮಿಳುನಾಡಿಗೆ ಮತ್ತೆ ನೀರು ಬಿಡುವಂತೆ ಆದೇಶ ಹಿನ್ನೆಲೆಯಲ್ಲಿ ಕನ್ನಡಪರ ಒಕ್ಕೂಟ ಸಂಘಟನೆಗಳು ಬೆಂಗಳೂರು-ಮೈಸೂರು ಹೆದ್ದಾರಿ ರಸ್ತೆ ತಡೆದು ಪ್ರತಿಭಟನೆ ಮಾಡಲು ಮುಂದಾಗಿದ್ದಾರೆ. ಇಂದು ಬೆಳಗ್ಗೆ 10:30ಕ್ಕೆ ಕುಂಬಳಗೋಡು ಬಳಿಯ ಕಣಮಿಣಕೆ ಟೋಲ್ ಬಳಿ ರಸ್ತೆ ತಡೆದು ಪ್ರತಿಭಟನೆ ನಡೆಸಲು ನಿರ್ಧರಿಸಿವೆ.

ಇನ್ನೊಂದೆಡೆ, ಕೆಆರ್​ಎಸ್​ ಜಲಾಶಯದಲ್ಲಿ ನೀರಿನ ಮಟ್ಟ 97.74 ಅಡಿಗೆ ಕುಸಿದೆ. ಕೆಆರ್​ಎಸ್​​ ಜಲಾಶಯದ ಇಂದಿನ ನೀರಿನ ಮಟ್ಟ 97.74 ಅಡಿ. ಕೆಆರ್​ಎಸ್​​ ಜಲಾಶಯದ ಗರಿಷ್ಠ ನೀರಿನ ಮಟ್ಟ 124.80 ಅಡಿ. ಒಳಹರಿವು 2741 ಕ್ಯೂಸೆಕ್, ಹೊರಹರಿವು 4498 ಕ್ಯೂಸೆಕ್ ಆಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

'ಶಾಂತಿ ಬೇಕಾದರೆ ಯುದ್ಧಕ್ಕೆ ಸಿದ್ಧರಾಗಿ.. Sudarshan Chakra ವಾಯುರಕ್ಷಣಾ ವ್ಯವಸ್ಥೆಗೆ ಮೂರೂ ಸೇನೆಗಳ ಬೃಹತ್ ಪ್ರಯತ್ನ ಬೇಕು': CDS Chauhan

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

SCROLL FOR NEXT