ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ರಾಜ್ಯ

ಬಿಜೆಪಿ ಟಿಕೆಟ್ ಕೊಡಿಸುವುದಾಗಿ ವಂಚನೆ: ಹಿಂದೂ ಕಾರ್ಯಕರ್ತೆ ಚೈತ್ರಾ ಕುಂದಾಪುರ ಸೇರಿ ಆರು ಮಂದಿ 10 ದಿನ ಸಿಸಿಬಿ ಕಸ್ಟಡಿಗೆ!

ಉಡುಪಿ ಜಿಲ್ಲೆಯ ಬೈಂದೂರು ಕ್ಷೇತ್ರದ ಬಿಜೆಪಿ ಟಿಕೆಟ್‌ ನೀಡುವುದಾಗಿ ನಂಬಿಸಿ ಉದ್ಯಮಿ ಗೋವಿಂದ ಬಾಬು ಪೂಜಾರಿ ಎಂಬುವವರಿಗೆ ಕೋಟ್ಯಂತರ ರೂಪಾಯಿ ವಂಚಿಸಿದ ಪ್ರಕರಣಕ್ಕೆ...

ಚೈತ್ರಾ ಕುಂದಾಪುರ
Vishwanath S
Updated On : 13 Sept 2023, 7:57 pm

ಬೆಂಗಳೂರು: ಉಡುಪಿ ಜಿಲ್ಲೆಯ ಬೈಂದೂರು ಕ್ಷೇತ್ರದ ಬಿಜೆಪಿ ಟಿಕೆಟ್‌ ನೀಡುವುದಾಗಿ ನಂಬಿಸಿ ಉದ್ಯಮಿ ಗೋವಿಂದ ಬಾಬು ಪೂಜಾರಿ ಎಂಬುವವರಿಗೆ ಕೋಟ್ಯಂತರ ರೂಪಾಯಿ ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಹಿಂದೂ ಕಾರ್ಯಕರ್ತೆ ಚೈತ್ರಾ ಕುಂದಾಪುರ ಸೇರಿದಂತೆ ಆರು ಆರೋಪಿಗಳನ್ನು ಸೆಪ್ಟೆಂಬರ್ 23ರವರೆಗೆ ಸಿಸಿಬಿ ಕಸ್ಟಡಿಗೆ ಆದೇಶಿಸಲಾಗಿದೆ.

ಪ್ರಕರಣ ಸಂಬಂಧ ಕರಾವಳಿ ಮೂಲದ ಹಿಂದೂ ಕಾರ್ಯಕರ್ತೆ ಚೈತ್ರಾ ಕುಂದಾಪುರ ಸೇರಿದಂತೆ ಶ್ರೀಕಾಂತ್, ರಮೇಶ್, ಗಗನ್, ಪ್ರಜ್ವಲ್, ಧನರಾಜ್ ನನ್ನು ಬಂಧಿಸಿದ್ದ ಬೆಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದು ಇಂದು ಬೆಂಗಳೂರಿನ 1ನೇ ಎಸಿಎಂಎಂ ಕೋರ್ಟ್​ ಗೆ ಹಾಜರುಪಡಿಸಿತ್ತು. 

ಇದನ್ನೂ ಓದಿ: ಬಂಧನಕ್ಕೆ ಮುನ್ನ ಮುಸ್ಲಿಂ ಸ್ನೇಹಿತೆ ಮನೆಯಲ್ಲಿ ಅವಿತಿದ್ದ ಚೈತ್ರಾ ಕುಂದಾಪುರ: ಹಿಂದೂ ಕಾರ್ಯಕರ್ತೆ ಜೊತೆ ಮೂವರ ಅರೆಸ್ಟ್

Advertisement

Advertisement

ಈ ವೇಳೆ ಆರೋಪಿಗಳನ್ನು 14 ದಿನಗಳ ಕಾಲ ಸಿಸಿಬಿ ಕಸ್ಟಡಿಗೆ ನೀಡುವಂತೆ ಪೊಲೀಸರು ಮನವಿ ಮಾಡಿದರು. ಆದರೆ ಕೋರ್ಟ್ ಆರು ಮಂದಿ ಆರೋಪಿಗಳಿಗೂ 10 ದಿನಗಳ ಕಾಲ ಸಿಸಿಬಿ ಕಸ್ಟಡಿಗೆ ನೀಡಿದೆ.  

ಆರೋಪಿಗಳು ಉದ್ಯಮಿ ಗೋವಿಂದ ಬಾಬು ಪೂಜಾರಿಗೆ ಬಿಜೆಪಿ ಟಿಕೆಟ್ ಕೊಡಿಸುವುದಾಗಿ 5 ಕೋಟಿ ರೂ. ಪಡೆದು ವಂಚಿಸಿದ್ದಾರೆ ಎಂದು ಆರೋಪಿಸಲಾಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement