ಸಾಂದರ್ಭಿಕ ಚಿತ್ರ 
ರಾಜ್ಯ

ಸಂಚಾರ ದಟ್ಟಣೆ: ಬೆಂಗಳೂರಿನಲ್ಲಿ ಟ್ರಾಫಿಕ್‌ ತಗ್ಗಿಸಲು ಶಾಲೆ, ಕೈಗಾರಿಕೆಗಳ ಸಮಯ ಬದಲಾವಣೆಗೆ ಸರ್ಕಾರಕ್ಕೆ ಹೈಕೋರ್ಟ್ ಸಲಹೆ!

ಬೆಂಗಳೂರು ಮಹಾನಗರದಲ್ಲಿ ದಿನನಿತ್ಯ ಉಂಟಾಗುತ್ತಿರುವ ವಾಹನ ದಟ್ಟಣೆ ತಪ್ಪಿಸಲು ಶಾಲೆಗಳು ಮತ್ತು ಕೈಗಾರಿಕೆಗಳ ಕಾರ್ಯನಿರ್ವಹಣೆ ಸಮಯ ಬದಲಾವಣೆ ಮಾಡಬೇಕು ಎಂದು ಸರ್ಕಾರಕ್ಕೆ ಹೈಕೋರ್ಟ್ ಸಲಹೆ ನೀಡಿದೆ.

ಬೆಂಗಳೂರು: ಬೆಂಗಳೂರು ಮಹಾನಗರದಲ್ಲಿ ದಿನನಿತ್ಯ ಉಂಟಾಗುತ್ತಿರುವ ವಾಹನ ದಟ್ಟಣೆ ತಪ್ಪಿಸಲು ಶಾಲೆಗಳು ಮತ್ತು ಕೈಗಾರಿಕೆಗಳ ಕಾರ್ಯನಿರ್ವಹಣೆ ಸಮಯ ಬದಲಾವಣೆ ಮಾಡಬೇಕು ಎಂದು ಸರ್ಕಾರಕ್ಕೆ ಹೈಕೋರ್ಟ್ ಸಲಹೆ ನೀಡಿದೆ.

ಈ ಸಂಬಂಧ ಶಾಲೆಗಳು, ಕೈಗಾರಿಕೆಗಳು, ವಾಣಿಜ್ಯ ಸಂಸ್ಥೆಗಳು ಮತ್ತು ಕಂಪನಿಗಳ ಪ್ರತಿನಿಧಿಗಳು ಸೇರಿದಂತೆ ಸಂಬಂಧಿಸಿದ ಪಾಲುದಾರರ ಸಭೆ ಕರೆದು ಚರ್ಚೆ ನಡೆಸುವಂತೆ ನ್ಯಾಯಾಲಯ ತಾಕೀತು ಮಾಡಿದೆ.

ಬಳ್ಳಾರಿ ರಸ್ತೆ ವಿಸ್ತರಣೆ ಸಂಬಂಧ ಸರ್ಕಾರೇತರ ಸಂಸ್ಥೆ ಸಮರ್ಪಣಾ ಸಾಮಾಜಿಕ- ಸಾಂಸ್ಕೃತಿಕ ಸಂಸ್ಥೆ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಪಿ.ಬಿ. ವರಾಳೆ ಮತ್ತು ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿದ್ದ ವಿಭಾಗೀಯ ಪೀಠ ಮಂಗಳವಾರ ವಿಚಾರಣೆ ನಡೆಸಿತು.

ಕೆಲಕಾಲ ವಾದ ಆಲಿಸಿದ ಬಳಿಕ ನ್ಯಾಯಾಲಯ ‘ರಾಜ್ಯ ಸರ್ಕಾರ ಶಾಲಾ ಶಿಕ್ಷಣ ಮತ್ತು ಉನ್ನತ ಶಿಕ್ಷಣ ಇಲಾಖೆ ಕಾರ್ಯದರ್ಶಿ ಮೂಲಕ ಎಲ್ಲ ಸರ್ಕಾರಿ ಮತ್ತು ಖಾಸಗಿ ಶಾಲೆಗಳು, ಶಾಲಾ ಬಸ್ ಆಪರೇಟರ್‌ಗಳು, ಪೋಷಕರ ಸಂಘಗಳು ಸೇರಿ ಸಂಬಂಧಿಸಿದ ಎಲ್ಲರ ಸಭೆ ಕರೆಯಬೇಕು. ವಾಹನ ದಟ್ಟಣೆ ತಗ್ಗಿಸಲು ಶಾಲಾ ಸಮಯ ಬದಲಾವಣೆ ಮಾಡುವ ಬಗ್ಗೆ ಚರ್ಚೆ ನಡೆಸಿ ತೀರ್ಮಾನ ಕೈಗೊಳ್ಳಬಹುದು. ಈ ವೇಳೆ ಶಾಲಾ ಮಕ್ಕಳ ಸುರಕ್ಷತೆ ಮತ್ತು ಭದ್ರತೆಯನ್ನೂ ಪರಿಗಣಿಸಬೇಕಾಗುತ್ತದೆ’ ಎಂದು ನಿರ್ದೇಶನ ನೀಡಿದೆ.

ಅಂತೆಯೇ, ಕೈಗಾರಿಕೆ ಮತ್ತು ಕಾರ್ಮಿಕ ಇಲಾಖೆ ಕಾರ್ಯದರ್ಶಿ ಮೂಲಕ ಎಲ್ಲ ಕೈಗಾರಿಕೆಗಳ ಒಕ್ಕೂಟಗಳು, ಕಾರ್ಮಿಕ ಸಂಘಟನೆಗಳು, ವಾಣಿಜ್ಯ ಮತ್ತು ಕೈಗಾರಿಕೆಗಳ ಮಹಾಸಂಸ್ಥೆಗಳ ಒಕ್ಕೂಟ, ಕಂಪನಿಗಳ ಪ್ರತಿನಿಧಿಗಳ ಜತೆ ಚರ್ಚೆ ನಡೆಸಿ ಕೆಲಸದ ಅವಧಿಯನ್ನು ಬದಲಾವಣೆ ಮಾಡಬಹುದು ಎಂದು ನ್ಯಾಯಪೀಠ ಸೂಚಿಸಿತು.

ದುಡಿಯುವ ಸಮಯವನ್ನು ಸರಳಗೊಳಿಸುವುದು, ಜನದಟ್ಟಣೆ ಸಮಯದಲ್ಲಿ ವಾಹನ ದಟ್ಟಣೆ ತಗ್ಗಿಸುವ ಸಂಬಂಧ ಸಂಬಂಧಿಸಿದ ಎಲ್ಲರಿಂದಲೂ ಸಲಹೆ-ಸೂಚನೆಗಳನ್ನು ಪಡೆದು ಸರ್ಕಾರ ಮುಂದುವರಿಯಬಹುದು ಎಂದು ನ್ಯಾಯಾಲಯ ಹೇಳಿತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT