ಕರ್ನಾಟಕ ಹೈಕೋರ್ಟ್ 
ರಾಜ್ಯ

ಸಿಎಂ ರಾಜಕೀಯ ಕಾರ್ಯದರ್ಶಿ, ಮಾಧ್ಯಮ ಸಲಹೆಗಾರರ ನೇಮಕ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿ ವಜಾ!

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ರಾಜಕೀಯ ಕಾರ್ಯದರ್ಶಿಗಳು ಮತ್ತು ಮಾಧ್ಯಮ ಸಲಹೆಗಾರರ ​​ನೇಮಕವನ್ನು ಪ್ರಶ್ನಿಸಿ ಬೆಂಗಳೂರು ಮೂಲದ ವಕೀಲರೊಬ್ಬರು ಸಲ್ಲಿಸಿದ್ದ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ಮಂಗಳವಾರ ವಜಾಗೊಳಿಸಿದೆ.

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ರಾಜಕೀಯ ಕಾರ್ಯದರ್ಶಿಗಳು ಮತ್ತು ಮಾಧ್ಯಮ ಸಲಹೆಗಾರರ ​​ನೇಮಕವನ್ನು ಪ್ರಶ್ನಿಸಿ ಬೆಂಗಳೂರು ಮೂಲದ ವಕೀಲರೊಬ್ಬರು ಸಲ್ಲಿಸಿದ್ದ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ಮಂಗಳವಾರ ವಜಾಗೊಳಿಸಿದೆ.

ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಿ ವರಾಳೆ ಮತ್ತು ನ್ಯಾಯಮೂರ್ತಿ ಕೃಷ್ಣ ಎಸ್ ದೀಕ್ಷಿತ್ ಅವರಿದ್ದ ವಿಭಾಗೀಯ ಪೀಠವು, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಗಳಾಗಿ ನಜೀರ್ ಅಹಮದ್ ಮತ್ತು ಕೆ. ಗೋವಿಂದರಾಜ್, ಮುಖ್ಯಮಂತ್ರಿಗಳ ಮುಖ್ಯ ಸಲಹೆಗಾರರಾಗಿ ಸುನೀಲ್ ಕಾನುಗೋಲು ಹಾಗೂ ಮಾಧ್ಯಮ ಸಲಹೆಗಾರರಾಗಿ ಕೆವಿ ಪ್ರಭಾಕರ್ ಅವರನ್ನು ನೇಮಿಸಿ, ಸಂಪುಟ ದರ್ಜೆಯ ಸ್ಥಾನಮಾನ ನೀಡಿರುವ ಕ್ರಮವನ್ನು ಪ್ರಶ್ನಿಸಿ ಉಮಾಪತಿ ಎಸ್ ಎಂಬುವವರು ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿ ಆದೇಶ ಹೊರಡಿಸಿದೆ. 

ಮುಖ್ಯಮಂತ್ರಿಗಳ ಸಲಹೆಗಾರರ ನೇಮಕಕ್ಕೆ ನಿಷೇಧ ಎಲ್ಲಿದೆ ಎಂಬುದನ್ನು ತೋರಿಸಿ ಎಂದು ನ್ಯಾಯಪೀಠ ಅರ್ಜಿದಾರರನ್ನು ಪ್ರಶ್ನಿಸಿತು. ಅರ್ಜಿದಾರರ ದೊರಕಿದ ಉತ್ತರಕ್ಕೆ ಸಂತುಷ್ಟಗೊಳ್ಳದ ನ್ಯಾಯಾಲಯವು ಅರ್ಜಿಗಳನ್ನು ವಜಾಗೊಳಿಸಿತು. ಸೂಕ್ತ ಕಾರಣಗಳನ್ನು ಒಳಗೊಂಡ ವಿಸ್ತೃತ ಆದೇಶ ಪ್ರಕಟಿಸಲಾಗುವುದು ಎಂದು ಮೌಖಿಕವಾಗಿ ಹೇಳಿತು.

ಸಂವಿಧಾನದ 164 (1A) ವಿಧಿಯ ಪ್ರಕಾರ, ಒಂದು ರಾಜ್ಯದಲ್ಲಿ ಸಿಎಂ ಸೇರಿದಂತೆ ಒಟ್ಟು ಮಂತ್ರಿಗಳ ಸಂಖ್ಯೆಯು ಒಟ್ಟು ಶಾಸಕರ ಶೇ 15 ರಷ್ಟನ್ನು ಮೀರಬಾರದು ಎಂದು ಸೂಚಿಸುತ್ತದೆ. ಆದರೆ, ರಾಜಕೀಯ ಕಾರ್ಯದರ್ಶಿ, ಮಾಧ್ಯಮ ಸಲಹೆಗಾರರು ಮತ್ತು ಮುಖ್ಯ ಸಲಹೆಗಾರರ ನೇಮಕದಿಂದಾಗಿ ಈ ಮಿತಿಯನ್ನು ಉಲ್ಲಂಘಿಸಲಾಗಿದೆ ಎಂದು ಅರ್ಜಿದಾರರು ವಾದಿಸಿದರು.

ಸಿಎಂ ಕಾರ್ಯದರ್ಶಿಗಳು, ಮಾಧ್ಯಮ ಉಸ್ತುವಾರಿಗಳು ಮತ್ತು ಮುಖ್ಯ ಸಲಹೆಗಾರರಾಗಿ ನೇಮಕಗೊಂಡವರು ಯಾರೂ ಸಚಿವರಾಗಿ ನೇಮಕಗೊಂಡಿಲ್ಲವಾದ್ದರಿಂದ 164ನೇ ವಿಧಿ ಅನ್ವಯವಾಗುವುದಿಲ್ಲ ಮತ್ತು ಆದ್ದರಿಂದ ಅರ್ಜಿಯು ಪರಿಗಣನೆಗೆ ಅನರ್ಹವಾಗಿದೆ ಎಂದು ಸರ್ಕಾರಿ ವಕೀಲರು ವಾದಿಸಿದರು.

'ಪ್ರತಿವಾದಿಗಳನ್ನು ಮಂತ್ರಿಗಳಾಗಿ ನೇಮಿಸಿದ್ದರೆ, ಆರ್ಟಿಕಲ್ 164ರ ಆವಾಹನೆಗೆ ಅವಕಾಶವಿತ್ತು. ನಿರ್ದಿಷ್ಟ ಹುದ್ದೆಗಳಿಗೆ ನೇಮಕಗೊಂಡವರಿಗೆ ಕ್ಯಾಬಿನೆಟ್ ಸ್ಥಾನಮಾನ ನೀಡಲಾಗಿದೆ ಎಂಬ ಕಾರಣಕ್ಕಾಗಿ, ಅರ್ಜಿಯನ್ನು ಪರಿಗಣಿಸಲು ಸಾಧ್ಯವಿಲ್ಲ. ಸಚಿವರನ್ನು ಹೊರತುಪಡಿಸಿ ಇತರರಿಗೆ ಸಂಪುಟ ದರ್ಜೆ ಸ್ಥಾನಮಾನ ನೀಡಬಾರದು ಎಂಬುದಾಗಿ ಎಲ್ಲಿಯೂ ಹೇಳಿಲ್ಲ. ಅರ್ಜಿಯಲ್ಲಿ ಪ್ರತಿವಾದಿಗಳಾಗಿರುವವರಿಗೆ ಯಾವುದೇ ಇಲಾಖೆಯ ಉಸ್ತುವಾರಿ ನೀಡಿ ಸರ್ಕಾರದ ಜವಾಬ್ದಾರಿಗಳನ್ನು ನೀಡಿಲ್ಲ' ಎಂದು ನ್ಯಾಯಾಲಯ ಹೇಳಿತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮತ್ತೆ ಗಡಿಯೊಳಗೆ ನುಗ್ಗಿದ 'ಪಾಕ್ ಡ್ರೋನ್' ಗಳು, ಭಾರತೀಯ ಸೇನಾಪಡೆಯಿಂದ ಗುಂಡಿನ ದಾಳಿ!

'ಕರ್ನಾಟಕದ ಹಿತಕ್ಕಿಂತ, ಹೈಕಮಾಂಡ್ ಹಂಗೇ ಹೆಚ್ಚಾಯಿತೇ? ಜರ್ಮನಿ ಚಾನ್ಸೆಲರ್ ಸ್ವಾಗತಿಸದ CM, DCM, ವಿರುದ್ಧ ಬಿಜೆಪಿ ಕಿಡಿ!

ಮುಡಾ ಹಗರಣ: ಸಿಎಂ ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತ ಬಿ- ರಿಪೋರ್ಟ್, ಜ. 22ಕ್ಕೆ ಆದೇಶ ಕಾಯ್ದಿರಿಸಿದ ನ್ಯಾಯಾಲಯ!

ಕುರ್ಚಿ ಕಾಳಗ: ಸಿದ್ದರಾಮಯ್ಯ, ಡಿಕೆಶಿ ಜತೆ ರಾಹಲ್ ಗಾಂಧಿ ಪ್ರತ್ಯೇಕ ಚರ್ಚೆ; ಕುತೂಹಲ ಮೂಡಿಸಿದೆ ಚುಟುಕು ಮಾತುಕತೆ! Video

ಫಿನಾಲೆ ಹಂತಕ್ಕೆ 'ಬಿಗ್‌ಬಾಸ್‌ ಕನ್ನಡ' 12; ಎಲ್ಲೆಲ್ಲೂ ಗಿಲ್ಲಿ ನಟನ ಹಾವಳಿ! ಗೆಲ್ಲುವ ಅದೃಷ್ಟ ಯಾರಿಗಿದೆ?

SCROLL FOR NEXT