ಬೆಂಗಳೂರು: ಈ ಹಿಂದೆ ವರ್ಗಾವಣೆಯಾಗಿದ್ದ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ದಾಸರಿ ಅವರಿಗೆ (Rohini Sindhuri) ಕೊನೆಗೂ ರಾಜ್ಯ ಸರ್ಕಾರ ಹುದ್ದೆ ನೀಡಿದ್ದು, ಕರ್ನಾಟಕ ಗೆಜೆಟಿಯರ್ ಇಲಾಖೆಗೆ ಮುಖ್ಯ ಸಂಪಾದಕರ ಹುದ್ದೆಗೆ ರೋಹಿಣಿ ಸಿಂಧೂರಿ ಅವರನ್ನು ವರ್ಗಾವಣೆ ಮಾಡಲಾಗಿದೆ.
ಐಪಿಎಸ್ ಅಧಿಕಾರಿ ರೂಪಾ ಮೌದ್ಗಿಲ್ ಜತೆಗಿನ ವಿವಾದದ ಆರು ತಿಂಗಳ ಬಳಿಕ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಅವರಿಗೆ ಸರ್ಕಾರ ಹುದ್ದೆ ನಿಯೋಜನೆ ಮಾಡಿದೆ. ಸದ್ಯ ರೋಹಿಣಿ ಸಿಂಧೂರಿ ಅವರು ಕರ್ನಾಟಕ ಗೆಜೆಟಿಯರ್ ಡಿಪಾರ್ಟ್‌ಮೆಂಟ್‌ನ ಮುಖ್ಯ ಸಂಪಾದಕರಾಗಿದ್ದಾರೆ. ಬುಧವಾರ ರಾಜ್ಯದ ಹಲವು ಐಎಎಸ್ ಅಧಿಕಾರಿಗಳ ವರ್ಗಾವಣೆಯಾಗಿದ್ದು, ಈ ವೇಳೆ ಹಲವು ದಿನಗಳಿಂದ ಹುದ್ದೆಗಾಗಿ ಕಾದು ಕುಳಿತಿದ್ದ ರೋಹಿಣಿ ಸಿಂಧೂರಿ ಅವರಿಗೆ ಹುದ್ದೆ ನಿಯೋಜನೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ಈಗಿನಿಂದ ಮುಂದಿನ ಆದೇಶದವರೆಗೂ ಅವರು ಕರ್ನಾಟಕ ಗೆಜೆಟಿಯರ್ ಇಲಾಖೆಯ ಮುಖ್ಯ ಸಂಪಾದಕರು ಹುದ್ದೆ ನಿರ್ವಹಿಸುವಂತೆ ಸೂಚಿಸಲಾಗಿದೆ.
ಕಳೆದ ಕೆಲ ತಿಂಗಳ ಹಿಂದೆ ರೋಹಿಣಿ ಸಿಂಧೂರಿ ಹಾಗೂ ಐಪಿಎಸ್ ಅಧಿಕಾರಿ ರೂಪಾ ಮೌದ್ಗಿಲ್ ನಡುವೆ ಕಿತ್ತಾಟ ನಡೆದಿತ್ತು. ಈ ವೇಳೆ ಇಬ್ಬರಿಗೂ ಸರ್ಕಾರ ಹುದ್ದೆಯನ್ನು ನೀಡದೆ ವರ್ಗಾವಣೆ ಮಾಡಿತ್ತು. ಕಳೆದ 6 ತಿಂಗಳಿನಿಂದ ಸರ್ಕಾರ ರೋಹಿಣಿ ಸಿಂಧೂರಿಗೆ ಯಾವುದೇ ಹುದ್ದೆ ನೀಡಿರಲಿಲ್ಲ.
ಹಲವರ ವರ್ಗ
ಈಗಾಗಲೇ ಹಲವು ಐಎಎಸ್ ಅಧಿಕಾರಿಗಳ ವರ್ಗಾವಣೆ ಮಾಡಿರುವ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಮತ್ತೆ ಕೆಲ ಅಧಿಕಾರಿಗಳನ್ನು ವರ್ಗಾವಣೆ ಮಾಡಿದೆ. ಇದರಲ್ಲಿ ರೋಹಿಣಿ ಸಿಂಧೂರಿಗೂ ಹುದ್ದೆ ನೀಡಿದೆ. ಇದೀಗ ರೋಹಿಣಿ ಸಿಂಧೂರಿಗೆ ಕರ್ನಾಟಕ ಗೆಜೆಟಿಯರ್ ಇಲಾಖೆಗೆ ಮುಖ್ಯ ಸಂಪಾದಕರಾಗಿ ವರ್ಗಾವಣೆ ಮಾಡಿದೆ.
ಇದನ್ನೂ ಓದಿ: ಸರ್ಕಾರದ ಯೋಜನೆ ಬಗ್ಗೆ ತಪ್ಪು ಮಾಹಿತಿ ಪ್ರಸಾರ ಆರೋಪ; ಹಿಂದಿ ಸುದ್ದಿ ವಾಹಿನಿ, ಕನ್ಸಲ್ಟಿಂಗ್ ಎಡಿಟರ್ ವಿರುದ್ಧ ಎಫ್ಐಆರ್
ಯಾರೆಲ್ಲಾ ಐಎಎಸ್ ಅಧಿಕಾರಿಗಳು ವರ್ಗಾವಣೆ?