ಮುಖ್ಯಮಂತ್ರಿ ಸಿದ್ದರಾಮಯ್ಯ 
ರಾಜ್ಯ

ಜನ, ಜಾನುವಾರುಗಳಿಗೆ ಸಂಕಷ್ಟ, ತಮಿಳುನಾಡಿಗೆ ಕಾವೇರಿ ನೀರು ಹರಿಸಲು ಸಾಧ್ಯವಿಲ್ಲ: ಕೇಂದ್ರಕ್ಕೆ ಸಿಎಂ ಸಿದ್ದರಾಮಯ್ಯ ಪತ್ರ

ಕಾವೇರಿ ನೀರಿನ ಮೇಲೆ ಅವಲಂಬಿತರಾಗಿರುವ ರೈತರು, ಕುಡಿಯುವ ನೀರಿಗಾಗಿ ಅವಲಂಬಿತರಾಗಿರುವ ಜಾನುವಾರು ಹಾಗೂ ಮಾನವರ ಹಿತಾಸಕ್ತಿಯನ್ನು ಸಂಕಷ್ಟಕ್ಕೆ ದೂಡಿ ಕಾವೇರಿ ನೀರು ನಿಯಂತ್ರಣ ಸಮಿತಿಯ ತೀರ್ಪನ್ನು ಅನುಷ್ಠಾನ ಮಾಡಲು ಸಾಧ್ಯವಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕೇಂದ್ರಕ್ಕೆ ಬರೆದಿರುವ ಪತ್ರದಲ್ಲಿ ತಿಳಿಸಿದ್ದಾರೆ. 

ಬೆಂಗಳೂರು: ಕಾವೇರಿ ನೀರಿನ ಮೇಲೆ ಅವಲಂಬಿತರಾಗಿರುವ ರೈತರು, ಕುಡಿಯುವ ನೀರಿಗಾಗಿ ಅವಲಂಬಿತರಾಗಿರುವ ಜಾನುವಾರು ಹಾಗೂ ಮಾನವರ ಹಿತಾಸಕ್ತಿಯನ್ನು ಸಂಕಷ್ಟಕ್ಕೆ ದೂಡಿ ಕಾವೇರಿ ನೀರು ನಿಯಂತ್ರಣ ಸಮಿತಿಯ ತೀರ್ಪನ್ನು ಅನುಷ್ಠಾನ ಮಾಡಲು ಸಾಧ್ಯವಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕೇಂದ್ರ ಜಲಶಕ್ತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅವರಿಗೆ ಬರೆದಿರುವ ಪತ್ರದಲ್ಲಿ ತಿಳಿಸಿದ್ದಾರೆ. 

ಕಾವೇರಿ ನೀರು ನಿಯಂತ್ರಣ ಸಮಿತಿ ನಿರ್ಧರಿಸಿರುವಂತೆ 15 ದಿನಗಳ ಕಾಲ ಕೆ.ಆರ್.ಎಸ್.ಹಾಗೂ ಕಬಿನಿಯಿಂದ 5000 ಕ್ಯೂಸೆಕ್ಸ್ ನೀರನ್ನು ಬಿಳಿಗುಂಡ್ಲುವಿನಿಂದ ಹರಿಸುವುದು ಸಾಧ್ಯವಿಲ್ಲ ಎಂದು ಸ್ಪಷ್ಟಪಡಿಸಿರುವ ಮುಖ್ಯಮಂತ್ರಿ, ಕರ್ನಾಟಕದ ಮನವಿಯನ್ನು ಪರಿಗಣಿಸಿ ಕಾವೇರಿ ನೀರು ನಿಯಂತ್ರಣ ಸಮಿತಿಯ ನಿರ್ಧಾರವನ್ನು ಮರುಪರಿಶೀಲಿಸುವಂತೆ ಕೋರಿದ್ದಾರಲ್ಲದೆ, ಬರಪೀಡಿತವಾಗಿರುವ ರಾಜ್ಯದ ಜನತೆ ಹಾಗೂ ಜಾನುವಾರುಗಳ ಹಿತಾಸಕ್ತಿಯನ್ನು ಕಾಪಾಡಲು ಮನವಿ ಮಾಡಿದ್ದಾರೆ. 

ಕರ್ನಾಟಕ ರಾಜ್ಯ ಸಮಿತಿಯ ಹಿಂದಿನ ನಿರ್ದೇಶನವನ್ನು ಪಾಲಿಸಿದ್ದು, ಕಾವೇರಿ ಜಲಾನಯನ ಪ್ರದೇಶದಲ್ಲಿರುವ ಬಹುತೇಕ ತಾಲ್ಲೂಕುಗಳು ಮುಂಗಾರು ವೈಫಲ್ಯ ದಿಂದ  ತೀವ್ರ ಬರಕ್ಕೆ ತುತ್ತಾಗಿವೆ. ಜೂನ್ ಮಾಹೆಯಿಂದ ಸೆಪ್ಟೆಂಬರ್ ಮಧ್ಯದವರೆಗೂ 92 ದಿನಗಳ ಕಾಲ 100 ಟಿಎಂಸಿ ನೀರನ್ನು ತಮಿಳುನಾಡು ಬಳಸಿಕೊಂಡಿದ್ದು, ಇದು ಹಿಂದೆ 1987-88, 2002-03, 2012-13, 2016-17 ಹಾಗೂ 2017-18 ರ ಬರಪರಿಸ್ಥಿತಿಯಲ್ಲಿ ಬಳಕೆಯಾದ ನೀರಿಗಿಂತಲೂ ಹೆಚ್ಚಾಗಿದೆ. ಕರ್ನಾಟಕದ ಜಲಾಶಯಗಳಲ್ಲಿ ಸಂಕಷ್ಟದ ಸ್ಥಿತಿಯಿದ್ದರೂ ತಮಿಳುನಾಡು ಭತ್ತವನ್ನು ವ್ಯಾಪಕವಾಗಿ ಬೆಳೆಯುತ್ತಿದೆ ಎಂದು ವಿವರಿಸಿದ್ದಾರೆ. 

ಸೆಪ್ಟೆಂಬರ್ 12 ಹಾಗೂ 24 ವರೆಗೆ ಐಎಂಡಿ ಹವಾಮಾನ ಮುನ್ಸೂಚನೆಯಂತೆ ಮಳೆಯಾಗುವ ಲಕ್ಷಣಗಳಿಲ್ಲ. ಮೆಟ್ಟೂರು ಜಲಾಶಯದಲ್ಲಿ ದಿನಾಂಕ 12.09.2023 ರಂದು 24.233 ಟಿಎಂಸಿ ಸಂಗ್ರಹವಿದ್ದು (live storage) ಪ್ರಸ್ತುತ ಬಿಡುಗಡೆಯಾಗಿರುವ ನೀರನ್ನು ಪರಿಗಣಿಸಿದರೆ, ತಮಿಳುನಾಡಿನ ಅವಶ್ಯಕತೆ ಯನ್ನು ಪೂರೈಸಲು ಸಾಕಾಗುವಷ್ಟು ನೀರು ಲಭ್ಯವಿದೆ. ಕರ್ನಾಟಕದ ಬೆಳೆಗಳ ರಕ್ಷಣೆಗೆ 70 ಟಿಎಂಸಿ, ಕುಡಿಯುವ ನೀರಿಗೆ 33 ಹಾಗೂ ಕೈಗಾರಿಕೆಗಳಿಗೆ 3 ಟಿಎಂಸಿ ನೀರು ಅಗತ್ಯವಿದೆ. ನಮ್ಮ ಸಂಗ್ರಹ 53 ಟಿಎಂಸಿ ಮಾತ್ರವಿದ್ದು, ನಮ್ಮ ಅವಶ್ಯಕತೆಗಳನ್ನು ಪೂರೈಸಿಕೊಳ್ಳಲು ಈ ಸಂಗ್ರಹ ಸಾಕಾಗುವುದಿಲ್ಲ ಎಂದು ಮುಖ್ಯಮಂತ್ರಿ ಪತ್ರದಲ್ಲಿ ತಿಳಿಸಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ವಿಮಾನ ನಿಲ್ದಾಣದ ಮೇಲೆ ಡ್ರೋನ್ ದಾಳಿ: ಇಬ್ಬರಿಗೆ ಗಾಯ, ಇರಾನ್ ರಾಯಭಾರಿಗೆ ಅಜರ್ ಬೈಜಾನ್ ಸಮನ್ಸ್!

T20 World Cup 2026 ಸೆಮಿಫೈನಲ್: ಸ್ಯಾಮ್ಸನ್ ಮಿಂಚಿನ ಅರ್ಧಶತಕ; ಇಂಗ್ಲೆಂಡ್ ಗೆ ಬೃಹತ್ 254 ರನ್ ಟಾರ್ಗೆಟ್ ನೀಡಿದ ಭಾರತ!

ಮಧ್ಯಪ್ರಾಚ್ಯ ಸಂಘರ್ಷ: ಅಚ್ಚರಿ ಮೂಡಿಸಿದ ಜೈಶಂಕರ್- ಇರಾನ್ ವಿದೇಶಾಂಗ ಸಚಿವ ಅಬ್ಬಾಸ್ ಅರಘ್ಚಿ ಮಾತುಕತೆ

T20 World Cup Semi Final 2026: 19 ವರ್ಷಗಳ ಐತಿಹಾಸಿಕ ದಾಖಲೆ ಮುರಿದ ಸಂಜು-ಇಶಾನ್ ಕಿಶಾನ್! Video

T20 World Cup 2026: 2ನೇ ಸೆಮಿಫೈನಲ್; ಟಾಸ್ ಗೆದ್ದು ಮೊದಲು ಫೀಲ್ಡಿಂಗ್ ಆಯ್ದುಕೊಂಡ ಇಂಗ್ಲೆಂಡ್!

SCROLL FOR NEXT