ಹೈಕೋರ್ಟ್ 
ರಾಜ್ಯ

ಐಪಿಎಸ್ ಅಧಿಕಾರಿ ಅಲೋಕ್ ಕುಮಾರ್ ವಿರುದ್ಧದ ಲಂಚ ಪ್ರಕರಣ, ರದ್ದುಗೊಳಿಸಿದ ಹೈಕೋರ್ಟ್

ಲಂಚ ಪ್ರಕರಣದಲ್ಲಿ ರೌಡಿ ಶೀಟರ್ ಮಲ್ಲಿಕಾರ್ಜುನ ಎಂಬಿ ಅಲಿಯಾಸ್ ರವಿ ಭ್ರಷ್ಟಾಚಾರ ತಡೆ ಕಾಯ್ದೆಯಡಿ ಹಿರಿಯ ಐಪಿಎಸ್ ಅಧಿಕಾರಿ ಅಲೋಕ್ ಕುಮಾರ್ ವಿರುದ್ಧದ ಕ್ರಿಮಿನಲ್ ಮೊಕದ್ದಮೆಯನ್ನು ಹೈಕೋರ್ಟ್ ರದ್ದುಗೊಳಿಸಿದೆ.

ಬೆಂಗಳೂರು: ಲಂಚ ಪ್ರಕರಣದಲ್ಲಿ ರೌಡಿ ಶೀಟರ್ ಮಲ್ಲಿಕಾರ್ಜುನ ಎಂಬಿ ಅಲಿಯಾಸ್ ರವಿ ಭ್ರಷ್ಟಾಚಾರ ತಡೆ ಕಾಯ್ದೆಯಡಿ ಹಿರಿಯ ಐಪಿಎಸ್ ಅಧಿಕಾರಿ ಅಲೋಕ್ ಕುಮಾರ್ ವಿರುದ್ಧದ ಕ್ರಿಮಿನಲ್ ಮೊಕದ್ದಮೆಯನ್ನು ಹೈಕೋರ್ಟ್ ರದ್ದುಗೊಳಿಸಿದೆ. ಆದಾಗ್ಯೂ, ಸಕ್ಷಮ ಪ್ರಾಧಿಕಾರದಿಂದ ಮಾನ್ಯವಾದ ಮಂಜೂರಾತಿಯನ್ನು ಪ್ರಾಸಿಕ್ಯೂಷನ್‌ನಿಂದ ಹಾಜರುಪಡಿಸಿದ ನಂತರವೇ ಅಲೋಕ್ ಕುಮಾರ್ ವಿರುದ್ಧ ವಿಶೇಷ ನ್ಯಾಯಾಲಯಕ್ಕೆ ಮುಂದುವರಿಯುವ ಸ್ವಾತಂತ್ರ್ಯವನ್ನು ಹೈಕೋರ್ಟ್ ಕಾಯ್ದಿರಿಸಿದೆ.

2015ರಲ್ಲಿ ಲೋಕಾಯುಕ್ತ ಪೊಲೀಸರು ದಾಖಲಿಸಿದ್ದ ಅಪರಾಧಕ್ಕೆ ಸಂಬಂಧಿಸಿದಂತೆ ತಮ್ಮ ವಿರುದ್ಧದ ಅಪರಾಧಗಳ ವಿಚಾರಣೆಗೆ 2022ರ ಡಿಸೆಂಬರ್ 13ರಂದು ವಿಶೇಷ ನ್ಯಾಯಾಲಯ ನೀಡಿದ್ದ ಆದೇಶವನ್ನು ಪ್ರಶ್ನಿಸಿ ಅಲೋಕ್ ಕುಮಾರ್ ಹೈಕೋರ್ಟ್ ಮೆಟ್ಟಿಲೇರಿದ್ದರು. ಅಲೋಕ್ ಕುಮಾರ್ ಅವರ ಅರ್ಜಿಯನ್ನು ಅಂಗೀಕರಿಸಿದ ನ್ಯಾಯಮೂರ್ತಿ ಎಂ ನಾಗಪ್ರಸನ್ನ, ಅರ್ಜಿದಾರರ ವಿರುದ್ಧ ಕಾನೂನು ಕ್ರಮ ಜರುಗಿಸಲು ಅನುಮತಿ ಇಲ್ಲದಿದ್ದಲ್ಲಿ ವಿಶೇಷ ನ್ಯಾಯಾಲಯವು ಸ್ವಯಂ ಪ್ರೇರಿತವಾಗಿ ತೆಗೆದುಕೊಳ್ಳುವಂತಿಲ್ಲ ಎಂದು ಹೇಳಿದರು.  

ಅಪರಾಧ ದಾಖಲಿಸಿದಾಗ, ಅರ್ಜಿದಾರರನ್ನು ಆರೋಪಿ ಎಂದು ಹೆಸರಿಸಲಾಗಿಲ್ಲ. ನಂತರ ಲೋಕಾಯುಕ್ತ ಪೊಲೀಸರು ತನಿಖೆ ನಡೆಸಿ ವಿಶೇಷ ನ್ಯಾಯಾಲಯಕ್ಕೆ ‘ಬಿ’ ರಿಪೋರ್ಟ್ ಸಲ್ಲಿಸಿದ್ದರು. ‘ಬಿ’ ವರದಿಯನ್ನು ತಿರಸ್ಕರಿಸುವಂತೆ ದೂರುದಾರರು ಸಲ್ಲಿಸಿದ ಪ್ರತಿಭಟನಾ ಮೆಮೊ ಆಧರಿಸಿ, ಅರ್ಜಿದಾರರ ವಿರುದ್ಧ ಕಾಗ್ನಿಜೆನ್ಸ್ ತೆಗೆದುಕೊಳ್ಳಲಾಗಿದೆ. ಹೀಗಾಗಿ ಮಂಜೂರಾತಿ ಅನಿವಾರ್ಯ’ ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿದೆ.

ದೂರಿನಲ್ಲಿ ಲಂಚದ ಬೇಡಿಕೆ ಮತ್ತು ಸ್ವೀಕರಿಸುವುದು ಇಲ್ಲ, ಅರ್ಜಿದಾರರು ನಗರದಲ್ಲಿ ರೌಡಿ ಚಟುವಟಿಕೆಗಳನ್ನು ತಡೆಯುವಲ್ಲಿ ಕಟ್ಟುನಿಟ್ಟಾಗಿ ವರ್ತಿಸಿದ್ದಾರೆ ಎಂದು ಅಲೋಕ್ ಕುಮಾರ್ ಪರ ವಕೀಲರು ವಾದಿಸಿದರು. 2015ರ ಮೇ 30ರಂದು ಬಾರ್ ಅಂಡ್ ರೆಸ್ಟೊರೆಂಟ್ ವೊಂದರ ಆಡಳಿತ ಮಂಡಳಿ ಹಾಗೂ ದೂರುದಾರರ ನಡುವೆ ವಾಗ್ವಾದ ನಡೆದಿದ್ದು, ವೈಯಾಲಿಕಾವಲ್ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.ತನಿಖೆಯ ವೇಳೆ ಎಸಿಪಿ ಮತ್ತು ಇತರ ಪೊಲೀಸ್ ಅಧಿಕಾರಿಗಳು ರವಿಗೆ ಕರೆ ಮಾಡಿ ಪ್ರಕರಣವನ್ನು ಮುಚ್ಚಿ ಹಾಕಲು ಲಂಚಕ್ಕೆ ಬೇಡಿಕೆ ಇಟ್ಟಿದ್ದರು ಎನ್ನಲಾಗಿದೆ.

ರವಿ 5 ಲಕ್ಷ ರೂ. ನೀಡಿದ್ದರು ಆದರೆ ಎಸಿಪಿ 1 ಕೋಟಿ ರೂ.ಗೆ ಬೇಡಿಕೆ ಇಟ್ಟಿದ್ದು, ಅದನ್ನು ಅಲೋಕ್ ಕುಮಾರ್ ಅವರಿಗೆ ನೀಡಬೇಕು ಎಂದು ದೂರಿನಲ್ಲಿ ಹೇಳಲಾಗಿದೆ. ರವಿ ಲಂಚ ನೀಡದಿದ್ದಾಗ ಶಸ್ತ್ರಾಸ್ತ್ರ ಕಾಯಿದೆಯಡಿ ಗಂಭೀರ ಅಪರಾಧ ಮಾಡುವುದಾಗಿ ಬೆದರಿಕೆ ಹಾಕಿದ್ದರು. ಇದರ ಆಧಾರದ ಮೇಲೆ ಲೋಕಾಯುಕ್ತ ಪೊಲೀಸರ ಮುಂದೆ ಅಪರಾಧ ಪ್ರಕರಣ ದಾಖಲಾಗಿತ್ತು. ಲಂಚದ ಬೇಡಿಕೆ ಮತ್ತು ಸ್ವೀಕಾರದ ಆರೋಪದಲ್ಲಿ ಯಾವುದೇ ಹುರುಳಿಲ್ಲ ಎಂದು ಪ್ರತಿಪಾದಿಸಿ ಅಲೋಕ್ ಕುಮಾರ್ ವಿರುದ್ಧ ‘ಬಿ’ ರಿಪೋರ್ಟ್ ಸಲ್ಲಿಸಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕದ ಸುಂಕ: ಜವಳಿ ವಲಯದ ಒತ್ತಡ ಕಡಿಮೆ ಮಾಡಲು 40 ಪ್ರಮುಖ ಆಮದು ದೇಶ ಗುರುತು

ಭೀಕರ ಮಳೆಗೆ ಜಮ್ಮು-ಕಾಶ್ಮೀರ ತತ್ತರ: ಸಾವಿನ ಸಂಖ್ಯೆ 41ಕ್ಕೆ ಏರಿಕೆ; ಕೇಂದ್ರದಿಂದ ನೆರವಿನ ಭರವಸೆ; ಮುಂದುವರೆದ ರಕ್ಷಣಾ ಕಾರ್ಯಾಚರಣೆ

ಭಾರತದ ಮೇಲೆ ಅಮೆರಿಕಾ ಸುಂಕಾಸ್ತ್ರ: ದೇಶ ರಕ್ಷಿಸುವಲ್ಲಿ ಪ್ರಧಾನಿ ಮೋದಿ ವಿಫಲ; AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ

ಜಮ್ಮು-ಕಾಶ್ಮೀರದ ಬಂಡಿಪೋರಾದಲ್ಲಿ ಗುಂಡಿನ ಚಕಮಕಿ: ಇಬ್ಬರು ಉಗ್ರರ ಹತ್ಯೆ

RSS Song Controversy: ಡಿಕೆಶಿ ಆರ್‌ಎಸ್‌ಎಸ್‌ ಗೀತೆ ಹಾಡಿದ್ದು ತಪ್ಪು, ಕ್ಷಮೆ ಕೇಳಿದ್ದರಿಂದ ಎಲ್ಲವೂ ಮುಗಿದಿದೆ; ಮಲ್ಲಿಕಾರ್ಜುನ ಖರ್ಗೆ

SCROLL FOR NEXT