ಕೇರಳ ಶಾಶಕ ಅಶ್ರಫ್ 
ರಾಜ್ಯ

ಕನ್ನಡದಲ್ಲಿ ಸಿಎಂ ಸಿದ್ದರಾಮಯ್ಯ- ಡಿಸಿಎಂ ಡಿಕೆಶಿ ಹೊಗಳಿದ ಕೇರಳ ಶಾಸಕ! ವಿಡಿಯೋ ವೈರಲ್

ಕನ್ನಡದಲ್ಲಿ ಮಾತನಾಡಿದ ಅಶ್ರಫ್ ಗಡಿ ಭಾಗದ ಜನರ ಮನ ಗೆದ್ದಿದ್ದಾರೆ. ನಾನು ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ಅವರನ್ನು ಅಭಿನಂದಿಸುತ್ತೇನೆ ಎಂದು ಅಶ್ರಫ್ ಹೇಳಿದ್ದಾರೆ

ಬೆಂಗಳೂರು: ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್ ಶಾಸಕ ಎಕೆಎಂ ಅಶ್ರಫ್ ಅವರು ಕೇರಳ ವಿಧಾನಸಭೆಯಲ್ಲಿ ಕರ್ನಾಟಕದ ಜನರನ್ನು ವಿಶೇಷವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರನ್ನು ಹೊಗಳಿದ ಭಾಷಣದ ಕ್ಲಿಪ್ ವೈರಲ್ ಆಗಿದೆ.

ಕನ್ನಡದಲ್ಲಿ ಮಾತನಾಡಿದ ಅಶ್ರಫ್ ಗಡಿ ಭಾಗದ ಜನರ ಮನ ಗೆದ್ದಿದ್ದಾರೆ. ನಾನು ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ಅವರನ್ನು ಅಭಿನಂದಿಸುತ್ತೇನೆ ಎಂದು ಅಶ್ರಫ್ ಹೇಳಿದ್ದಾರೆ. ಕೇರಳದಲ್ಲಿ ವಾಸಿಸುವ, ವಿಶೇಷವಾಗಿ ಉತ್ತರದ ಪ್ರದೇಶಗಳಲ್ಲಿ ನೆಲೆಸಿರುವ ಕನ್ನಡ ಮಾತನಾಡುವ ಸಾಕಷ್ಟು ದೊಡ್ಡ ಜನ ವಿಡಿಯೋ ಇಷ್ಟಪಟ್ಟಿದ್ದಾರೆ.

ಅಶ್ರಫ್ ಅವರ ವೀಡಿಯೊವನ್ನು ಸಾಮಾಜಿಕ ಮಾಧ್ಯಮ ಗುಂಪುಗಳಲ್ಲಿ ವ್ಯಾಪಕವಾಗಿ ಪ್ರಸಾರ ಮಾಡಲಾಗಿದೆ. ತಿರುವನಂತಪುರಂನಲ್ಲಿರುವ ISRO ದಲ್ಲಿ ಕನ್ನಡ ಮಾತನಾಡುವ ನೂರಾರು ಮಂದಿ ಇದ್ದಾರೆ. ವಲಸೆ ಕಾರ್ಮಿಕರಲ್ಲದೆ ಕರ್ನಾಟಕದ ಅನೇಕ ಕೇಂದ್ರ ಸರ್ಕಾರದ ಅಧಿಕಾರಿಗಳು ಇದ್ದಾರೆ ಎಂದು ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಗೆ ಅಶ್ರಫ್ ತಿಳಿಸಿದ್ದಾರೆ.

ನಾನು ಕನ್ನಡಿಗ ಮತ್ತು ಗೋವಿಂದ ಪೈ ಮತ್ತು ಕುವೆಂಪು ಅವರ ಕೃತಿಗಳನ್ನು ಪ್ರೀತಿಸುತ್ತೇನೆ, ನಾನು ಕೇರಳ ವಿಧಾನಸಭೆಯಲ್ಲಿ ಕನ್ನಡ ಮಾತನಾಡುವ ಏಕೈಕ ರಾಜಕಾರಣಿ ಎಂದು ಹೇಳಿದ್ದಾರೆ.

ನನಗೆ ವೈಯಕ್ತಿಕವಾಗಿ ಅಶ್ರಫ್ ಪರಿಚಯವಿದೆ. ನಮ್ಮ ದೇಶ ಪ್ರಗತಿಯಾಗಬೇಕಾದರೆ ಎಲ್ಲರನ್ನೂ ಜೊತೆಯಲ್ಲಿ ಕರೆದುಕೊಂಡು ಹೋಗಬೇಕು. ಜಾತ್ಯತೀತ ಧ್ವನಿಗಳನ್ನು ಪ್ರೋತ್ಸಾಹಿಸಬೇಕು. ಕೇರಳ ವಿಧಾನಸಭೆಯಲ್ಲಿ ಕನ್ನಡದಲ್ಲಿ ಮಾತನಾಡುವುದು ನಮ್ಮ ಹೃದಯವನ್ನು ಬೆಚ್ಚಗಾಗಿಸುತ್ತದೆ. ನಾವೆಲ್ಲರೂ ಭಾರತೀಯರು ಮತ್ತು ಅನೇಕ ಭಾಷೆಗಳನ್ನು ಮಾತನಾಡಬಲ್ಲೆವು. ಅಶ್ರಫ್ ಅತ್ಯುತ್ತಮ ಕನ್ನಡ ಮಾತನಾಡುತ್ತಾರೆ ಎಂದು ಮಂಗಳೂರು ಮೂಲದ ಶಾಂತಿನಗರ ಶಾಸಕ ಎನ್‌ಎ ಹ್ಯಾರೀಸ್ ಹೇಳಿದ್ದಾರೆ.  ರಾಜ್ಯಗಳ ಮರುಸಂಘಟನೆಯ ಮೊದಲು, ಈ ಪ್ರದೇಶವು ಹಿಂದಿನ ದಕ್ಷಿಣ ಕೆನರಾ ಭಾಗವಾಗಿತ್ತು, ಹೀಗಾಗಿ ಅನೇಕ ನಿರರ್ಗಳವಾಗಿ ಕನ್ನಡ ಮಾತನಾಡುವವರು ಈ ಭಾಗದಲ್ಲಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT