ಸಂಗ್ರಹ ಚಿತ್ರ 
ರಾಜ್ಯ

ಗಣೇಶ ಚತುರ್ಥಿ: ಸುರಕ್ಷತೆಗಾಗಿ 80 ಮಂದಿ ಈಜುಗಾರರ ನಿಯೋಜಿಸಿದ ಬಿಬಿಎಂಪಿ

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಗಣೇಶ ಚತುರ್ಥಿ ಹಿನ್ನೆಲೆಯಲ್ಲಿ ಎಲ್ಲಾ ರೀತಿಯ ಸಿದ್ದತೆಗಳನ್ನು ಮಾಡಿಕೊಳ್ಳಲಾಗಿದ್ದು, ಗಣೇಶ ಮೂರ್ತಿಗಳ ವಿಸರ್ಜನೆ ವೇಳೆ ಯಾವುದೇ ರೀತಿಯ ಅಹಿತಕರ ಘಟನೆಗಳು ನಡೆಯದಂತೆ ನಗರದಾದ್ಯಂತ ಇರುವ ಎಲ್ಲಾ ಕಲ್ಯಾಣಿಗಳಲ್ಲಿ 80 ಮಂದಿ ಈಜುಗಾರರನ್ನು ನಿಯೋಜಿಸಲಾಗಿದೆ.

ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಗಣೇಶ ಚತುರ್ಥಿ ಹಿನ್ನೆಲೆಯಲ್ಲಿ ಎಲ್ಲಾ ರೀತಿಯ ಸಿದ್ದತೆಗಳನ್ನು ಮಾಡಿಕೊಳ್ಳಲಾಗಿದ್ದು, ಗಣೇಶ ಮೂರ್ತಿಗಳ ವಿಸರ್ಜನೆ ವೇಳೆ ಯಾವುದೇ ರೀತಿಯ ಅಹಿತಕರ ಘಟನೆಗಳು ನಡೆಯದಂತೆ ನಗರದಾದ್ಯಂತ ಇರುವ ಎಲ್ಲಾ ಕಲ್ಯಾಣಿಗಳಲ್ಲಿ 80 ಮಂದಿ ಈಜುಗಾರರನ್ನು ನಿಯೋಜಿಸಲಾಗಿದೆ.

ಹಲಸೂರು, ಹೆಬ್ಬಾಳ, ಯಡಿಯೂರು, ಸ್ಯಾಂಕಿ ಸೇರಿದಂತೆ 39 ಕಲ್ಯಾಣಿಗಳಲ್ಲಿ ಸೆಪ್ಟೆಂಬರ್ 18ರಿಂದ ಗಣೇಶ ಮೂರ್ತಿ ವಿಸರ್ಜನೆ ಆರಂಭವಾಗಲಿದೆ. ಈ ವೇಳೆ ಯಾವುದೇ ರೀತಿಯ ಅಹಿತಕರ ಘಟನೆಗಳು ನಡೆಯದಂತೆ ಸಿಸಿಟಿವಿ ಕ್ಯಾಮೆರಾಗಳ ಅಳವಡಿಕೆ, ಬ್ಯಾರಿಕೇಡ್ ಗಳ ಹಾಕುವ ಜೊತೆಗೆ ಇತರೆ ಎಲ್ಲಾ ರೀತಿಯ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಬಿಬಿಎಂಪಿ ಅಧಿಕಾರಿಗಳು ಹೇಳಿದ್ದಾರೆ.

ಗಣೇಶ ಮೂರ್ತಿಗಳ ವಿಸರ್ಜನೆಗಾಗಿ 39 ಕೆರೆ ಅಂಗಳದ/ತಾತ್ಕಾಲಿಕ ಕಲ್ಯಾಣಿಗಳು, 418 ತಾತ್ಕಾಲಿಕ  ಮೊಬೈಲ್ ಟ್ಯಾಂಕ್ ಗಳ ವ್ಯವಸ್ಥೆಯನ್ನು ಪಾಲಿಕೆಯ ಎಲ್ಲಾ ವಾರ್ಡ್ ಗಳಲ್ಲಿ ಮಾಡಲಾಗಿದೆ. ಈ ಮೊಬೈಲ್ ಟ್ಯಾಂಕ್ ಗಳು ನಾಗರಿಕರ ಅನುಕೂಲಕ್ಕಾಗಿ ಎಲ್ಲಾ 27 ವಿಧಾನಸಭಾ ಕ್ಷೇತ್ರಗಳನ್ನು ಒಳಗೊಂಡಂತೆ ನಗರದಾದ್ಯಂತ ಸಂಚರಿಸಲಿವೆ ಎಂದು ತಿಳಿಸಿದ್ದಾರೆ.

ಪಾಲಿಕೆ ನಿರ್ದೇಶನದಂತೆ 5 ಇಂಚುಗಳಿಂದ 3 ಅಡಿ ಎತ್ತರದವರೆಗಿನ ಎಲ್ಲಾ ಮಣ್ಣಿನ ಗಣೇಶ ಮೂರ್ತಿಗಳನ್ನು ಮೊಬೈಲ್ ಟ್ಯಾಂಕರ್‌ಗಳಲ್ಲಿ ವಿಸರ್ಜನೆಗೊಳಿಸಬೇಕಿದೆ. ಈಗಾಗಲೇ ಪಿಒಪಿ ಗಣೇಶ ಮೂರ್ತಿಗಳ ಮೇಲೆ ನಿಷೇಧ ಹೇರಲಾಗಿದ್ದು, ನಿಯಮ ಉಲ್ಲಂಘಿಸುವವರ ವಿರುದ್ಧ ಅಧಿಕಾರಿಗಳು ಕ್ರಮ ಕೈಗೊಳ್ಳಲಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT