ಪುನೀತ್ ಕೆರೆಹಳ್ಳಿ 
ರಾಜ್ಯ

ಗೂಂಡಾ ಕಾಯ್ದೆ ರದ್ದು: ಜೈಲಿನಿಂದ ಬಿಡುಗಡೆಯಾದ ಹಿಂದೂ ಕಾರ್ಯಕರ್ತ ಪುನೀತ್ ಕೆರೆಹಳ್ಳಿ!

ಹಿಂದೂ ಕಾರ್ಯಕರ್ತ, ಗೋರಕ್ಷಕ ಮತ್ತು ರಾಷ್ಟ್ರ ರಕ್ಷಣಾ ಪಡೆ ಅಧ್ಯಕ್ಷ ಪುನೀತ್ ಕೆರೆಹಳ್ಳಿ ವಿರುದ್ಧ ಗೂಂಡಾ ಕಾಯ್ದೆಯಡಿ ದಾಖಲಿಸಿದ್ದ ಪ್ರಕರಣವನ್ನು ರದ್ದುಪಡಿಸಲಾಗಿದ್ದು, ಅವರನ್ನು ಜೈಲಿನಿಂದ ಬಿಡುಗಡೆ ಮಾಡಲಾಗಿದೆ.

ಬೆಂಗಳೂರು: ಹಿಂದೂ ಕಾರ್ಯಕರ್ತ, ಗೋರಕ್ಷಕ ಮತ್ತು ರಾಷ್ಟ್ರ ರಕ್ಷಣಾ ಪಡೆ ಅಧ್ಯಕ್ಷ ಪುನೀತ್ ಕೆರೆಹಳ್ಳಿ ವಿರುದ್ಧ ಗೂಂಡಾ ಕಾಯ್ದೆಯಡಿ ದಾಖಲಿಸಿದ್ದ ಪ್ರಕರಣವನ್ನು ರದ್ದುಪಡಿಸಲಾಗಿದ್ದು, ಅವರನ್ನು ಜೈಲಿನಿಂದ ಬಿಡುಗಡೆ ಮಾಡಲಾಗಿದೆ.

ಹಾಸನ ಜಿಲ್ಲೆಯ ಆಲೂರು ತಾಲ್ಲೂಕಿನ ಕೆರೆಹಳ್ಳಿಯ ಪುನೀತ್, ಬೆಂಗಳೂರಿನಲ ಜೆಪಿ ನಗರ 7ನೇ ಹಂತದಲ್ಲಿ ವಾಸವಿದ್ದರು. ಅವರ ವಿರುದ್ಧ ರಾಜ್ಯದ 11 ಠಾಣೆಗಳಲ್ಲಿ ಎಫ್ಐಆರ್ ದಾಖಲಾಗಿತ್ತು. ಕೆಲವು ಪ್ರಕರಣಗಳಲ್ಲಿ ಶಿಕ್ಷೆಯೂ ಆಗಿತ್ತು. 

ಅಪರಾಧ ಪ್ರಕರಣಗಳಲ್ಲಿ ಪದೇ ಪದೆ ಭಾಗಿಯಾಗುತ್ತಿರುವುದರಿಂದ ಪುನೀತ್ ಕೆರೆಹಳ್ಳಿ ವಿರುದ್ಧ ಗೂಂಡಾ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿತ್ತು. ಅವರನ್ನು ಬಂಧಿಸುವಂತೆ ಕಮಿಷನರ್ ಆದೇಶ ಹೊರಡಿಸಿದ್ದರಿಂದ, ಅವರನ್ನು ಬಂಧಿಸಿ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹಕ್ಕೆ ಕಳುಹಿಸಲಾಗಿತ್ತು.

ಬಂಧನ ಆದೇಶವನ್ನು ಪುನೀತ್ ಪ್ರಶ್ನಿಸಿದ್ದರು. ಇದರ ವಿಚಾರಣೆಗಾಗಿ ಸರ್ಕಾರ ಸಲಹಾ ಸಮಿತಿಯನ್ನು ರಚಿಸಿತ್ತು. ವಿಚಾರಣೆ ನಡೆಸಿದ್ದ ಸಮಿತಿ, 'ಅವರನ್ನು ಬಂಧನದಲ್ಲಿಡಲು ಸಾಕಷ್ಟು ಕಾರಣಗಳಿಲ್ಲ' ಎಂದು ಅಭಿಪ್ರಾಯಪಟ್ಟು ವರದಿ ನೀಡಿದೆ.

ಈ ಹಿನ್ನೆಲೆಯಲ್ಲಿ ವರದಿಯನ್ವಯ ಆದೇಶ ಹೊರಡಿಸಿರುವ ಸರ್ಕಾರ, ಕಮಿಷನರ್ ಆದೇಶವನ್ನು ರದ್ದುಪಡಿಸಿದೆ. ಪುನೀತ್ ಅವರನ್ನು ಬಂಧನ ಮುಕ್ತಗೊಳಿಸುವಂತೆ ಸೂಚಿಸಿದೆ. ಇದರ ಬೆನ್ನಲ್ಲೇ ಪುನೀತ್‌ನನ್ನು ಜೈಲಿನಿಂದ ಬಿಡುಗಡೆ ಮಾಡಲಾಗಿದೆ.
ಗೂಂಡಾ ಕಾಯ್ದೆಯಡಿ ದಾಖಲಾದ ಪ್ರಕರಣವನ್ನು ರದ್ದುಪಡಿಸಿದ ಮೊದಲ ಪ್ರಕರಣ ಇದಾಗಿದೆ.

ಗೂಂಡಾ ಕಾಯ್ದೆ ಜಾರಿ ಬಗ್ಗೆ ಪೊಲೀಸರಿಗೆ ಹೈಕೋರ್ಟ್ ನೋಟಿಸ್‌ ಜಾರಿ

ರಾಷ್ಟ್ರ ರಕ್ಷಣಾ ಪಡೆ ಸಂಘಟನೆಯ ಮುಖಂಡ ಪುನೀತ್‌ಕುಮಾರ್‌ ಅಲಿಯಾಸ್‌ ಪುನೀತ್‌ ಕೆರೆಹಳ್ಳಿಯನ್ನು ಗೂಂಡಾ ಕಾಯ್ದೆಯಡಿ ಬಂಧಿಸಿರುವ ಸಂಬಂಧ ರಾಜ್ಯ ಸರ್ಕಾರ, ನಗರ ಪೊಲೀಸ್‌ ಆಯುಕ್ತರು ಮತ್ತು ಸಿಸಿಬಿ ಪೊಲೀಸರಿಗೆ ಆಗಸ್ಟ್ 24ರಂದು ಹೈಕೋರ್ಟ್‌ ನೋಟಿಸ್‌ ಜಾರಿ ಮಾಡಿತ್ತು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನಿರ್ಬಂಧದ ಹೊರತಾಗಿಯೂ ರಷ್ಯಾದಲ್ಲಿ ಇಳಿದ ಅಮೆರಿಕದ C-17 ಮಿಲಿಟರಿ ವಿಮಾನ: ಮಿಷನ್ ಮಾತ್ರ ನಿಗೂಢ!

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test: ‘ಶ್ರೀಲಂಕಾ ಆಟಗಾರರ ವರ್ತನೆ ವೃತ್ತಿಪರವಾಗಿರಲಿಲ್ಲ’: ಬ್ಯಾಡ್ ಲೈಟ್ ವಿವಾದಕ್ಕೆ Sanjay Manjrekar ಕಿಡಿ

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel