ಕೆಆರ್ ಎಸ್ ಜಲಾಶಯ(ಸಂಗ್ರಹ ಚಿತ್ರ) 
ರಾಜ್ಯ

ಕಾವೇರಿ: ತಮಿಳುನಾಡಿಗೆ ಮತ್ತೆ ನೀರು ಬಿಡುವಂತೆ ಕರ್ನಾಟಕಕ್ಕೆ ಪ್ರಾಧಿಕಾರ ಆದೇಶ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಕರ್ನಾಟಕಕ್ಕೆ ಮತ್ತೆ ಕಾವೇರಿ ನದಿ ನೀರು ನಿರ್ವಹಣಾ ಪ್ರಾಧಿಕಾರ ಶಾಕ್ ನೀಡಿದ್ದು, ತಮಿಳುನಾಡಿಗೆ ಮತ್ತೆ ನೀರು ಬಿಡುವಂತೆ ಆದೇಶ ನೀಡಿದೆ.

ನವದೆಹಲಿ: ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಕರ್ನಾಟಕಕ್ಕೆ ಮತ್ತೆ ಕಾವೇರಿ ನದಿ ನೀರು ನಿರ್ವಹಣಾ ಪ್ರಾಧಿಕಾರ ಶಾಕ್ ನೀಡಿದ್ದು, ತಮಿಳುನಾಡಿಗೆ ಮತ್ತೆ ನೀರು ಬಿಡುವಂತೆ ಆದೇಶ ನೀಡಿದೆ.

ತಮಿಳುನಾಡಿಗೆ ಪ್ರತಿದಿನ 5,000 ಕ್ಯೂಸೆಕ್ ನೀರು ಬಿಡುಗಡೆ ಮಾಡಲು ಕರ್ನಾಟಕಕ್ಕೆ‌ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಸೋಮವಾರ ಆದೇಶಿಸಿದೆ. 15 ದಿನ 5,000 ಕ್ಯೂಸೆಕ್ ನೀರು ಬಿಡಲು ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಆದೇಶಿಸಿದೆ. ಸಭೆ ಆರಂಭದ ವೇಳೆ, ನೀರಿಗಾಗಿ ತಮಿಳುನಾಡು ಪಟ್ಟು ತೀವ್ರಗೊಳಿಸಿತ್ತು. ನಿತ್ಯ 12,500 ಕ್ಯೂಸೆಕ್ ನೀರು ಹರಿಸಲು ಪಟ್ಟು ಹಿಡಿದಿತ್ತು. ಆದರೆ ನೀರು ನಿರ್ವಹಣಾ ಪ್ರಾಧಿಕಾರ, ಸಿಡಬ್ಲ್ಯೂಆರ್‌ಸಿ ಆದೇಶವನ್ನು ಮುಂದುವರಿಸುವಂತೆ ಸೂಚಿಸಿದೆ. ಪ್ರಾಧಿಕಾರದ ಆದೇಶ ತಮಿಳುನಾಡಿನ ಪರ ಬಂದಿದ್ದು, ಈ ಆದೇಶದಿಂದ ಕರ್ನಾಟಕ ಸರ್ಕಾರಕ್ಕೆ ಹಿನ್ನಡೆಯಾಗಿದ್ದು, ಮತ್ತೆ ಕಾವೇರಿ ಸಂಕಷ್ಟ ಎದುರಾಗಿದೆ.

ನೀರು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷ ಎಸ್.ಕೆ.ಹಲ್ದಾರ್ ನೇತೃತ್ವದಲ್ಲಿ ತುರ್ತು ಸಭೆ ನಡೆದಿದ್ದು, ಸಭೆಯಲ್ಲಿ ಕಾವೇರಿ ನೀರು ನಿಯಂತ್ರಣ ಸಮಿತಿ ಅಧ್ಯಕ್ಷ ವಿನೀತ್ ಗುಪ್ತಾ ಹಾಜರಿದ್ದರು. 24ನೇ ಪ್ರಾಧಿಕಾರದ ಸಭೆಯಲ್ಲಿ ತಮಿಳುನಾಡು ಜಲಸಂಪನ್ಮೂಲ ಕಾರ್ಯದರ್ಶಿ ಸಂದೀಪ್ ಸಸೇನಾ, ಕಾವೇರಿ ತಾಂತ್ರಿಕ ಸಮಿತಿ ಅಧ್ಯಕ್ಷ ಸುಬ್ರಮಣಿಯನ್, ಕೇರಳದ ಅಧಿಕಾರಿಗಳೂ ಖುದ್ದು ಹಾಜರಿದ್ದರು. ಕರ್ನಾಟಕ ಮತ್ತು ಪುದುಚೇರಿಯ ಅಧಿಕಾರಿಗಳು ವೀಡಿಯೋ ಕಾನ್ಫರೆನ್ಸ್ ಮೂಲಕ ಸಭೆಯಲ್ಲಿ ಭಾಗಿಯಾಗಿದ್ದರು. ಸುಮಾರು 2 ಗಂಟೆಗಳ ಕಾಲ ಸಭೆ ನಡೆಯಿತು.

ಈ ಹಿಂದೆ ಸೆಪ್ಟಂಬರ್ 12ರ ಆದೇಶದಂತೆ 15 ದಿನ ನೀರು ಬಿಡಲು ಸೂಚನೆ ನೀಡಲಾಗಿದೆ. ಪ್ರಾಧಿಕಾರ ದೆಹಲಿಯ CWMA ಕಚೇರಿಯಿಂದ ಆದೇಶ ಹೊರಡಿಸಿದೆ. ಕಾವೇರಿ ಪ್ರಾಧಿಕಾರದ ಕಚೇರಿಯಲ್ಲಿ ತಮಿಳುನಾಡು ಮತ್ತು ಕೇರಳ ರಾಜ್ಯದ ಅಧಿಕಾರಿಗಳು ಖುದ್ದು ಭಾಗಿಯಾಗಿದ್ದರೆ ಕರ್ನಾಟಕ ಮತ್ತು ಪುದುಚೇರಿ ಅಧಿಕಾರಿಗಳು ವಿಡಿಯೋ ಕಾನ್ಫರೆನ್ಸ್ ಮೂಲಕ ಭಾಗಿಯಾಗಿದ್ದರು.
 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test: ‘ಶ್ರೀಲಂಕಾ ಆಟಗಾರರ ವರ್ತನೆ ವೃತ್ತಿಪರವಾಗಿರಲಿಲ್ಲ’: ಬ್ಯಾಡ್ ಲೈಟ್ ವಿವಾದಕ್ಕೆ Sanjay Manjrekar ಕಿಡಿ

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel

ಮಂಡ್ಯ ಜೈಲಿನ ಕರ್ಮಕಾಂಡ ಬಯಲು: ಆಸ್ಪತ್ರೆ​​ ವಾರ್ಡ್​​​ನಲ್ಲಿ ಮಹಿಳೆ​​ ಜೊತೆ ಸಿಕ್ಕಿಬಿದ್ದ ವಿಚಾರಣಾಧೀನ ಸರ್ಕಾರಿ ಅಧಿಕಾರಿ!