ಸಂಗ್ರಹ ಚಿತ್ರ 
ರಾಜ್ಯ

ಮೈಸೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಅಪಘಾತ: ನೌಕಾಪಡೆಯ ಮಾಜಿ ಅಧಿಕಾರಿ ಸಾವು

ಮೈಸೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರು ಅಪಘಾತ ಸಂಭವಿಸಿದ್ದು, ಘಟನೆಯಲ್ಲಿ ಭಾರತೀಯ ನೌಕಾಪಡೆಯ ನಿವೃತ್ತ ಅಧಿಕಾರಿಯೊಬ್ಬರು ಸಾವನ್ನಪ್ಪಿ, ನಾಲ್ವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಭಾನುವಾರ ನಡೆದಿದೆ.

ಮೈಸೂರು: ಮೈಸೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರು ಅಪಘಾತ ಸಂಭವಿಸಿದ್ದು, ಘಟನೆಯಲ್ಲಿ ಭಾರತೀಯ ನೌಕಾಪಡೆಯ ನಿವೃತ್ತ ಅಧಿಕಾರಿಯೊಬ್ಬರು ಸಾವನ್ನಪ್ಪಿ, ನಾಲ್ವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಭಾನುವಾರ ನಡೆದಿದೆ

ಬೆಂಗಳೂರು ಸಮೀಪದ ಆನೇಕಲ್‌ನ ಕಿಶೋರ್ ಬಾಬು (45) ಸಾವನ್ನಪ್ಪಿದ ನೌಕಾಪಡೆಯ ಮಾಜಿ ಅಧಿಕಾರಿಯಾಗಿದ್ದಾರೆ. ಗಾಯಾಳುಗಳನ್ನು ಕಿಶೋರ್ ಅವರ ಸಹೋದರ ನವೀನ್ ಬಾಬು, ಸ್ನೇಹಿತರಾದ ಯುವರಾಜ್, ರಮೇಶ್ ಮತ್ತು ಧನಪಾಲ್ ಎಂದು ಗುರ್ತಿಸಲಾಗಿದೆ.

ಕಿಶೋರ್ ಬಾಬು ತಮಿಳುನಾಡು ಮೂಲದವರಾಗಿದ್ದು, ಭಾರತೀಯ ನೌಕಾಪಡೆಯಲ್ಲಿ ಸೇವೆ ಸಲ್ಲಿಸಿದ್ದರು. ಆನೇಕಲ್‌ನಿಂದ ಮೈಸೂರು ಮಾರ್ಗವಾಗಿ ಊಟಿಗೆ ತೆರಳುತ್ತಿದ್ದ ವೇಳೆ ನಗುವನಹಳ್ಳಿಯಲ್ಲಿ ಬೆಳಗ್ಗೆ 5.30ರ ಸುಮಾರಿಗೆ ಅಪಘಾತ ಸಂಭವಿಸಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಎಸ್ ಯುವಿ ವಾಹನವನ್ನು ಅಜಾಗರೂಕತೆಯಿಂದ ಚಾಲನೆ ಮಾಡಲಾಗಿದ್ದು, ಈ ವೇಳೆ ಮುಂಭಾಗದಲ್ಲಿ ಸಾಗುತ್ತಿದ್ದ ಮತ್ತೊಂದು ಕಾರಿಗೆ ಡಿಕ್ಕಿ ಹೊಡೆದಿದ್ದಾರೆ. ಈ ವೇಳೆ ಕಾರು ಪಲ್ಟಿಯಾಗಿದೆ. ಡಿಕ್ಕಿಯ ರಭಸಕ್ಕೆ ಎಸ್‌ಯುವಿ ಹೊತ್ತಿ ಉರಿದಿದೆ. ಕೂಡಲೇ ಗಾಯಗೊಂಡ ನಾಲ್ವರನ್ನು ಸ್ಥಳೀಯರು ರಕ್ಷಣೆ ಮಾಡಿದ್ದಾರೆ. ಬಳಿಕ ಅವರನ್ನು ಮೈಸೂರಿನ ಕೆಆರ್ ಆಸ್ಪತ್ರೆಗೆ ಮತ್ತು ಶ್ರೀರಂಗಪಟ್ಟಣದ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ. ಆದರೆ ಕಾರಿನಿಂದ ಹೊರಕ್ಕೆ ರಭಸದಿಂದ ಬಿದ್ದ ಕಿಶೋರ್ ಅವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಈ ನಡುವೆ ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ದಳದವರು ಬೆಂಕಿ ನಂದಿಸಿದರು. ಘಟನೆ ಸಂಬಂಧ ಶ್ರೀರಂಗಪಟ್ಟಣ ಗ್ರಾಮಾಂತರ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?