ಕೇಂದ್ರ ಜಲಶಕ್ತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅವರನ್ನು ಭೇಟಿಯಾದ ಸಂಸದೆ ಸುಮಲತಾ ಅಂಬರೀಶ್ 
ರಾಜ್ಯ

ಕಾವೇರಿ ವಿವಾದ: ಆಯಾ ರಾಜ್ಯಗಳ ಜಂಟಿ ಸಮಿತಿ ರಚಿಸುವುದಾಗಿ ಕೇಂದ್ರ ಜಲಶಕ್ತಿ ಸಚಿವರು ಭರವಸೆ- ಸುಮಲತಾ ಅಂಬರೀಶ್

ಮಂಡ್ಯ ರೈತರ ಜೀವನಾಡಿ ಆಗಿರುವ ಕಾವೇರಿಯಿಂದ ನಿರಂತರವಾಗಿ ತಮಿಳು ನಾಡಿಗೆ ನೀರು ಬಿಡಲಾಗುತ್ತಿದೆ. ಇದರಿಂದಾಗಿ ಮಂಡ್ಯ ಭಾಗದ ರೈತರ ಪರಿಸ್ಥಿತಿ ಚಿಂತಾಜನಕವಾಗಿದೆ ಎಂದು ಆತಂಕ ವ್ಯಕ್ತಪಡಿಸಿರುವ ಸಂಸದೆ ಸುಮಲತಾ ಈ ಕುರಿತು ಕೇಂದ್ರ ಜಲಶಕ್ತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿರುವುದಾಗಿ ತಿಳಿಸಿದ್ದಾರೆ.

ಬೆಂಗಳೂರು: ಮಂಡ್ಯ ರೈತರ ಜೀವನಾಡಿ ಆಗಿರುವ ಕಾವೇರಿಯಿಂದ ನಿರಂತರವಾಗಿ ತಮಿಳು ನಾಡಿಗೆ ನೀರು ಬಿಡಲಾಗುತ್ತಿದೆ. ಇದರಿಂದಾಗಿ ಮಂಡ್ಯ ಭಾಗದ ರೈತರ ಪರಿಸ್ಥಿತಿ ಚಿಂತಾಜನಕವಾಗಿದೆ ಎಂದು ಆತಂಕ ವ್ಯಕ್ತಪಡಿಸಿರುವ ಸಂಸದೆ ಸುಮಲತಾ ಈ ಕುರಿತು ಕೇಂದ್ರ ಜಲಶಕ್ತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿರುವುದಾಗಿ ತಿಳಿಸಿದ್ದಾರೆ.

ಈ ಕುರಿತು ಸರಣಿ ಟ್ವೀಟ್ ಮಾಡಿರುವ ಸುಮಲತಾ, ಮಂಡ್ಯ ಮತ್ತು ಕರ್ನಾಟಕದ ರೈತರು ಬರ ಕಾರಣದಿಂದಾಗಿ ತತ್ತರಿಸಿ ಹೋಗಿದ್ದಾರೆ. ಈ ನಡುವೆ ಮಂಡ್ಯ ರೈತರ ಜೀವನಾಡಿ ಆಗಿರುವ ಕಾವೇರಿಯಿಂದ ನಿರಂತರವಾಗಿ ತಮಿಳು ನಾಡಿಗೆ ನೀರು ಬಿಡಲಾಗುತ್ತಿದೆ. ಮಂಡ್ಯ ಭಾಗದ ರೈತರ ಪರಿಸ್ಥಿತಿ ಚಿಂತಾಜನಕವಾಗಿರುವಾಗ ಮತ್ತೆ 15 ದಿನಗಳ ಕಾಲ 5 ಸಾವಿರ ಕ್ಯೂಸೆಕ್ಸ್ ನೀರು ಬಿಡುವಂತೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಹೇಳಿದ್ದು ನಿಜಕ್ಕೂ ಆಘಾತಕಾರಿ ಬೆಳವಣಿಗೆ ಎಂದಿದ್ದಾರೆ.

ಕೇವಲ ರೈತರ ಗದ್ದೆಗಳಿಗೆ ಮಾತ್ರವಲ್ಲ, ಮುಂದಿನ ದಿನಗಳಲ್ಲಿ ಕುಡಿಯುವ ನೀರಿಗೂ ಹಾಹಾಕಾರ ಎದುರಾಗಲಿದೆ. ಈ ಎಲ್ಲ ಸಂಗತಿಗಳನ್ನು ದೆಹಲಿಯಲ್ಲಿ ಜಲಶಕ್ತಿ ಸಚಿವರಾದ ಮಾನ್ಯ ಶ್ರೀ ಗಜೇಂದ್ರ ಸಿಂಗ್ ಶಿಕಾವತ್ ಅವರನ್ನು ಭೇಟಿ ಮಾಡಿ ವಿವರಿಸಿದ್ದೇನೆ. ಆಯಾ ರಾಜ್ಯಗಳ ಜಂಟಿ ಸಮಿತಿಯನ್ನು ರಚಿಸುವುದಾಗಿ ಮತ್ತು ಮುಂದಿನ ವಾರದಲ್ಲೇ ಸಮೀಕ್ಷೆ ನಡೆಸುವುದಾಗಿ, ನಮ್ಮ ರೈತರ ಪರವಾಗಿ ನಿಂತುಕೊಂಡು ಕುಡಿಯುವ ನೀರಿನ ಸಮಸ್ಯೆಯನ್ನೂ ಬಗೆಹರಿಸುವುದಾಗಿ ಅವರು ಭರವಸೆ ಕೊಟ್ಟಿದ್ದಾರೆ. ಆದಷ್ಟು ಬೇಗ ಭರವಸೆ ಈಡೇರುತ್ತದೆ ಎನ್ನುವ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ರಾಜ್ಯ ಸರಕಾರ ಕೂಡ ಮಾನ್ಯ ಕೇಂದ್ರ ಸಚಿವರನ್ನು ಮತ್ತು ಸಂಬಂಧಿಸಿದ ಪ್ರಾಧಿಕಾರದ ಅಧ್ಯಕ್ಷರನ್ನು ಖುದ್ದಾಗಿ ಭೇಟಿ ಮಾಡಿ, ಭೀಕರವಾಗಿರುವ ವಸ್ತುಸ್ಥಿತಿಯನ್ನು ಮನವರಿಕೆ ಮಾಡಿಕೊಡಲಿ. ತಮಿಳು ನಾಡಿಗೆ ನೀರು ಹರಿಸುವುದನ್ನು ನಿಲ್ಲಿಸಿ, ನಾವೆಲ್ಲರೂ ನಮ್ಮ ರೈತರ ಪರವಾಗಿ ನಿಲ್ಲೋಣ ಎಂದು ಮನವಿ ಮಾಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಮುಂಬೈ: ಖ್ಯಾತ ಹಿರಿಯ ಗಾಯಕಿ ಆಶಾ ಭೋಸ್ಲೆ ನಿಧನ, ಗಣ್ಯರ ಕಂಬನಿ

US-Iran Peace Talks: ಇಸ್ಲಾಮಾಬಾದ್‌ನಲ್ಲಿ 21 ಗಂಟೆ ಮಾತುಕತೆಯಾದ್ರು, ಯುಎಸ್- ಇರಾನ್ ಶಾಂತಿ ಒಪ್ಪಂದ ವಿಫಲ! ಕಾರಣಗಳೇನು?

'ಇರಾನ್ ನಮಗೆ ಬೆದರಿಕೆಯೊಡ್ಡಿತ್ತು, ಆದರೆ ಈಗ ಬದುಕುಳಿಯಲು ಹೋರಾಡುತ್ತಿದೆ': ಶಾಂತಿ ಮಾತುಕತೆ ವಿಫಲದ ಬಳಿಕ ಇಸ್ರೇಲ್!

"Bad News": ಅಮೆರಿಕದ ಷರತ್ತುಗಳನ್ನು ಇರಾನ್ ಒಪ್ಪುತ್ತಿಲ್ಲ- ಜೆಡಿ ವ್ಯಾನ್ಸ್!

ಕೊಡಗು: 100 ಎಕರೆ ಅರಣ್ಯ ವಲಯದಲ್ಲಿ ಬೌದ್ಧಧರ್ಮ ಜೊತೆಗೆ ಪರಿಸರ ಸಂರಕ್ಷಣೆ ಮಾಡುತ್ತಿರುವ 'ಕರ್ಮ ಕರ್ಗ್ಯು ಮಠ!

SCROLL FOR NEXT