ಬಿಜೆಪಿ ರಾಜ್ಯಸಭಾ ಸದಸ್ಯ ಲಹರ್‌ ಸಿಂಗ್ ಸಿರೋಯಾ 
ರಾಜ್ಯ

ಕಾವೇರಿ ವಿವಾದವನ್ನು ಮಾನವೀಯ ಬಿಕ್ಕಟ್ಟು ಎಂದು ಪರಿಗಣಿಸಿ: ಸ್ಟಾಲಿನ್, ಸಿದ್ದರಾಮಯ್ಯಗೆ ಬಿಜೆಪಿ ಸಂಸದ ಲಹರ್‌ ಸಿಂಗ್

ಬೆಂಗಳೂರು: ಕಾವೇರಿ ನದಿ ನೀರು ಬಿಡುವ ಸಂಬಂಧ ಉಂಟಾಗಿರುವ ಬಿಕ್ಕಟ್ಟು ಬಗೆಹರಿಸಿಕೊಳ್ಳಲು  ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಜೊತೆ ಮಾತುಕತೆ ನಡೆಸುವಂತೆ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಅವರಿಗೆ ಬಿಜೆಪಿ ರಾಜ್ಯಸಭಾ ಸದಸ್ಯ ಲಹರ್‌ ಸಿಂಗ್ ಸಿರೋಯಾ ಪತ್ರ ಬರೆದಿದ್ದಾರೆ.

ಬೆಂಗಳೂರು: ಕಾವೇರಿ ನದಿ ನೀರು ಬಿಡುವ ಸಂಬಂಧ ಉಂಟಾಗಿರುವ ಬಿಕ್ಕಟ್ಟು ಬಗೆಹರಿಸಿಕೊಳ್ಳಲು  ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಜೊತೆ ಮಾತುಕತೆ ನಡೆಸುವಂತೆ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಅವರಿಗೆ ಬಿಜೆಪಿ ರಾಜ್ಯಸಭಾ ಸದಸ್ಯ ಲಹರ್‌ ಸಿಂಗ್ ಸಿರೋಯಾ ಪತ್ರ ಬರೆದಿದ್ದಾರೆ.

ಕಾವೇರಿ ನದಿ ನೀರು ಹಂಚಿಕೆ ವಿವಾದದಲ್ಲಿ ರಾಜ್ಯದ ಪ್ರಸ್ತುತ ನೀರಿನ ಲಭ್ಯತೆ, ಶೇಕಡಾ 70 ರಷ್ಟು ಮಳೆ ಕೊರತೆ ಸೇರಿದಂತೆ ಜಲಾಶಯಗಳು ಖಾಲಿ ಆಗಿರುವ ಅಂಶಗಳನ್ನು ಪ್ರಸ್ತಾಪಿಸಿ ಎರಡು ರಾಜ್ಯಗಳ ಸಿಎಂಗಳು ಕುಳಿತು ಮಾತನಾಡಿ ಸಮಸ್ಯೆ ಇತ್ಯರ್ಥ ಪಡಿಸಿಕೊಳ್ಳುವಂತೆ ಪತ್ರದಲ್ಲಿ ಮನವಿ ಮಾಡಿದ್ದಾರೆ.

ತಮಿಳುನಾಡು ಸಿಎಂ ಸ್ಟಾಲಿನ್ ಗೆ ಬರೆದ ಪತ್ರದ ಪ್ರತಿಯನ್ನು ರಾಜ್ಯದ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆಶಿ, ಪಿಎಂ ಕಾರ್ಯಾಲಯ, ಕೇಂದ್ರ ಜಲಶಕ್ತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಹಾಗೂ ಎರಡೂ ರಾಜ್ಯದ ಮುಖ್ಯ ಕಾರ್ಯದರ್ಶಿಗಳಿಗೂ ರವಾನಿಸಿದ್ದಾರೆ.

ಮಾನ್ಯ ಶ್ರೀ ಎಂ.ಕೆ.ಸ್ಟಾಲಿನ್ ಅವರೇ, ಕರ್ನಾಟಕ ಮತ್ತು ತಮಿಳುನಾಡು ನಡುವಿನ ಸಂಕಷ್ಟದ ಕಾಲದ ಕಾವೇರಿ ನದಿ ನೀರು ಹಂಚಿಕೆ ವಿವಾದದ ಸೂಕ್ಷ್ಮ ಸಂದರ್ಭದಲ್ಲಿ ನಾನು ಈ ಪತ್ರವನ್ನು ಬರೆಯುತ್ತಿದ್ದೇನೆ. ಅಂತರ್-ರಾಜ್ಯ ನೀರಿನ ನಿರ್ವಹಣೆ, ನೀರಿನ ಒಪ್ಪಂದಗಳಿಗೆ ಸಂಬಂಧಿಸಿದ ವಿಷಯಗಳ ಬಗ್ಗೆ ನನ್ನ ತಿಳುವಳಿಕೆ ಬಹಳ ಸೀಮಿತವಾಗಿದೆ ಎನ್ನುವುದು ನನಗೆ ತಿಳಿದಿದೆ. ಆದರೂ ಕಿಂಚಿತ್ ಸಾಮಾನ್ಯ ಜ್ಞಾನದ ದೃಷ್ಟಿಕೋನದಿಂದ ನನ್ನ ಕೆಲವು ಅನಿಸಿಕೆಗಳನ್ನು ತಮ್ಮೊಂದಿಗೆ ನಿವೇದಿಸಿಕೊಳ್ಳುತ್ತೇನೆ.

ಕರ್ನಾಟಕ ಉದ್ದೇಶಪೂರ್ವಕವಾಗಿ ನೀರನ್ನು ಹಿಡಿದಿಟ್ಟುಕೊಳ್ಳುತ್ತಿಲ್ಲ ಎನ್ನುವುದನ್ನು ತಮಿಳುನಾಡು ಅರಿತುಕೊಳ್ಳಬೇಕು. ನಮ್ಮ ಜಲಾಶಯಗಳು ಖಾಲಿಯಾಗಿವೆ ಮತ್ತು ನಮ್ಮ ರಾಜ್ಯದ ಸುಮಾರು ಶೇ.70 ರಷ್ಟು ತಾಲೂಕುಗಳಲ್ಲಿ ಬರಗಾಲವಿದೆ. ಜೊತೆಗೆ, ಕುಡಿಯುವ ನೀರಿನ ಸಮಸ್ಯೆ ತಲೆದೋರಿದೆ.

 ಕರ್ನಾಟಕದ ನೀರಿನ ಅಗತ್ಯತೆಗಳಲ್ಲಿ, ಕರ್ನಾಟಕದಲ್ಲಿ ವಾಸಿಸುವ, ಕೆಲಸ ಮಾಡುತ್ತಿರುವ ಲಕ್ಷಾಂತರ ತಮಿಳು ಭಾಷಿಕರ ನೀರಿನ ಅಗತ್ಯತೆಗಳನ್ನೂ ಒಳಗೊಂಡಿದೆ ಎನ್ನುವುದನ್ನು ತಮಿಳುನಾಡು ಅರ್ಥಮಾಡಿಕೊಳ್ಳಬೇಕು ಎನ್ನುವುದು ನನ್ನ ಆಗ್ರಹವಾಗಿದೆ.

ನಾವು ವಲಸಿಗ ಸಮಾಜದಲ್ಲಿ ವಾಸಿಸುತ್ತಿದ್ದೇವೆ. ಅಂತರ್-ರಾಜ್ಯ ವಲಸೆಯು ಕಳೆದ ಒಂದೆರಡು ದಶಕಗಳಲ್ಲಿ ಒಂದು ಪ್ರವೃತ್ತಿಯೇ ಎನ್ನುವಂತಾಗಿದ್ದು, ಉದ್ಯೋಗದ ಕಾರಣಗಳಿಗಾಗಿ ಜನರು ತಮ್ಮ ಸ್ವಂತ ರಾಜ್ಯಗಳನ್ನು ತೊರೆದು ಅನ್ಯತ್ರ ವಾಸಿಸುತ್ತಿದ್ದಾರೆ. ಆದ್ದರಿಂದ ನಾವು ನೀರಿನ ಹಕ್ಕುಗಳ ಬಗ್ಗೆ ಮಾತನಾಡುವಾಗ ಈ ಸಮಕಾಲೀನ ವಲಸೆಯ ಪ್ರವೃತ್ತಿಯನ್ನು ಮತ್ತು ವಾಸ್ತವಗಳನ್ನು ಮನಸ್ಸಿನಲ್ಲಿಟ್ಟುಕೊಂಡು ಚಿಂತಿಸಬೇಕಾಗಿದೆ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಪ್ಯಾಕ್ಸ್ ಸಿಲಿಕಾ ಅಲೈಯನ್ಸ್‌ನ ಸದಸ್ಯ ದೇಶವಾಗಲಿದೆ; ಅಮೆರಿಕಕ್ಕೆ ಭಾರತಕ್ಕಿಂತ ಮುಖ್ಯ ದೇಶ ಮತ್ತೊಂದಿಲ್ಲ: ಸೆರ್ಗಿಯೊ ಗೋರ್

CM ಕುರ್ಚಿ ಗುದ್ದಾಟ: ಅಗತ್ಯವಿದ್ದಾಗ ಸಿದ್ದರಾಮಯ್ಯ, ಶಿವಕುಮಾರ್‌ರನ್ನು ಮಾತುಕತೆಗೆ ಕರೆಯಲಾಗುವುದು; ಮಲ್ಲಿಕಾರ್ಜುನ ಖರ್ಗೆ

'sir' ವಿವಾದ ಕೊನೆಗೂ ಅಂತ್ಯ: 'ಸರ್.. ನೀವು ನನ್ನ ಹಿರಿಯರು': ಕಿಚ್ಚಾ ಸುದೀಪ್ ಗೆ ಧನ್ಯವಾದ ಹೇಳಿದ ನಟ ಯಶ್!

ಟಿ20 ವಿಶ್ವಕಪ್: 'ಅಲ್ಲಿ ಬೇಡ ಅಂದ್ರೆ ಇಲ್ಲಿ ಆಡಿ..': ಬಾಂಗ್ಲಾದೇಶಕ್ಕೆ ಹೊಸ ಮೈದಾನಗಳ ಸೂಚಿಸಿದ ICC

ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ದಳಪತಿ ವಿಜಯ್ ಅಭಿನಯದ 'ಜನ ನಾಯಗನ್'

SCROLL FOR NEXT