ಕೃಷ್ಣ ಬೈರೇಗೌಡ 
ರಾಜ್ಯ

ರಾಜ್ಯದಲ್ಲಿ ಬರದಿಂದ 40 ಲಕ್ಷ ಹೆಕ್ಟೇರ್‌ ಪ್ರದೇಶದಲ್ಲಿ ಬೆಳೆ ಹಾನಿ: ಸಚಿವ ಕೃಷ್ಣ ಬೈರೇಗೌಡ

ರಾಜ್ಯದಲ್ಲಿ ಬರದಿಂದ ಅಂದಾಜು 40 ಲಕ್ಷ ಹೆಕ್ಟೇರ್ ಕೃಷಿ ಬೆಳೆ ಮತ್ತು ಎರಡು ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ತೋಟಗಾರಿಕೆ ಬೆಳೆ ಹಾನಿಗೊಳಗಾಗಿದ್ದು, 195 ತಾಲ್ಲೂಕುಗಳನ್ನು ಬರಪೀಡಿತ ಎಂದು ಘೋಷಿಸಲಾಗಿದೆ ಎಂದು ಕಂದಾಯ ಸಚಿವ...

ಬೆಂಗಳೂರು: ರಾಜ್ಯದಲ್ಲಿ ಬರದಿಂದ ಅಂದಾಜು 40 ಲಕ್ಷ ಹೆಕ್ಟೇರ್ ಕೃಷಿ ಬೆಳೆ ಮತ್ತು ಎರಡು ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ತೋಟಗಾರಿಕೆ ಬೆಳೆ ಹಾನಿಗೊಳಗಾಗಿದ್ದು, 195 ತಾಲ್ಲೂಕುಗಳನ್ನು ಬರಪೀಡಿತ ಎಂದು ಘೋಷಿಸಲಾಗಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು ಮಂಗಳವಾರ ಹೇಳಿದ್ದಾರೆ.

ಪರಿಹಾರ ಕೋರಿ ಕೇಂದ್ರ ಸರ್ಕಾರಕ್ಕೆ ಒಂದು ವಾರದೊಳಗೆ ಮನವಿ ಪತ್ರ ಸಲ್ಲಿಸಲಾಗುವುದು ಮತ್ತು ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ(ಎನ್‌ಡಿಆರ್‌ಎಫ್) ನಿಯಮಗಳ ಪ್ರಕಾರ ಒಟ್ಟು 5000 ರಿಂದ 6000 ಕೋಟಿ ರೂಪಾಯಿ ಪರಿಹಾರ ಪಡೆಯಲು ಅವಕಾಶವಿದೆ ಎಂದು ಸಚಿವರು ತಿಳಿಸಿದ್ದಾರೆ.

‘ರಾಜ್ಯಾದ್ಯಂತ ಈ ವರ್ಷ ತೀವ್ರ ಮಳೆಯ ಕೊರತೆ ಉಂಟಾಗಿದ್ದು, ಈಗಾಗಲೇ 195 ತಾಲೂಕುಗಳನ್ನು ಬರಪೀಡಿತ ಎಂದು ಘೋಷಿಸಲಾಗಿದೆ. ಅಂದಾಜು 40 ಲಕ್ಷ ಹೆಕ್ಟೇರ್ ಕೃಷಿ ಬೆಳೆ ಹಾನಿಯಾಗಿದ್ದು, 2 ಲಕ್ಷ ಹೆಕ್ಟೇರ್ ತೋಟಗಾರಿಕೆ ಬೆಳೆ ಹಾನಿಯಾಗಿದೆ ಎಂದು ಕೃಷ್ಣ ಬೈರೇಗೌಡ ಅವರು ವಿವರಿಸಿದ್ದಾರೆ.

ಬರಪೀಡಿತ ತಾಲೂಕುಗಳಿಗೆ ಸಂಬಂಧಿಸಿದಂತೆ ಕೇಂದ್ರಕ್ಕೆ ಸಲ್ಲಿಸಬೇಕಾದ ಮನವಿ ಪತ್ರವನ್ನು ತ್ವರಿತವಾಗಿ ಸಿದ್ಧಪಡಿಸುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಸಚಿವರು ಸುದ್ದಿಗಾರರಿಗೆ ತಿಳಿಸಿದ್ದಾರೆ.

ಮನವಿ ಪತ್ರ ಸಿದ್ಧಪಡಿಸುವ ಕಾರ್ಯ ಈಗಾಗಲೇ ಶೇ.70ರಷ್ಟು ಪೂರ್ಣಗೊಂಡಿದೆ. ಮೇವು, ಕುಡಿಯುವ ನೀರಿಗೆ ಪ್ರತ್ಯೇಕ ಪರಿಹಾರ ಪಡೆಯಲು ಅವಕಾಶವಿದ್ದು, ಮುಂದಿನ ಮೂರು ದಿನಗಳಲ್ಲಿ ಸಂಪೂರ್ಣ ಮನವಿ ಪತ್ರ ಸಿದ್ಧಪಡಿಸಲಾಗುವುದು ಎಂದರು.

ಮನವಿ ಪತ್ರ ಸಲ್ಲಿಕೆಯಾದ ಕೂಡಲೇ ರಾಜ್ಯಕ್ಕೆ ಆಗಮಿಸಿ ಪರಿಶೀಲನೆ ನಡೆಸುವುದಾಗಿ ಕೇಂದ್ರ ಸರ್ಕಾರದ ಅಧಿಕಾರಿಗಳು ಭರವಸೆ ನೀಡಿದ್ದಾರೆ. ಹೀಗಾಗಿ ಸಂಪುಟ ಸಭೆಯಲ್ಲಿ ಒಪ್ಪಿಗೆ ಪಡೆದು ವಾರಾಂತ್ಯದೊಳಗೆ ಮನವಿ ಸಲ್ಲಿಸಲಾಗುವುದು ಎಂದು ಸಚಿವರು ಹೇಳಿದ್ದಾರೆ.

ಕೇಂದ್ರದ ಬರ ಮಾರ್ಗಸೂಚಿಯಂತೆ 161 ತಾಲೂಕುಗಳಲ್ಲಿ ತೀವ್ರ ಬರವಿದ್ದು, 34ರಲ್ಲಿ ಭಾಗಶಃ ಬರವಿದೆ. ಉಳಿದ 41 ತಾಲೂಕುಗಳಲ್ಲಿಯೂ ಪರಿಸ್ಥಿತಿ ಭಿನ್ನವಾಗಿಲ್ಲ. ಆದರೆ ಮಾರ್ಗಸೂಚಿ ಪ್ರಕಾರ ಅಲ್ಲಿ ಬರ ಘೋಷಣೆ ಮಾಡಲು ಸಾಧ್ಯವಿಲ್ಲ. ಈ ತಾಲೂಕುಗಳಲ್ಲಿನ ಬರ ಪರಿಸ್ಥಿತಿಯ ಕುರಿತು ಈ ತಿಂಗಳ ಅಂತ್ಯದಲ್ಲಿ ಮತ್ತೊಮ್ಮೆ ಪರಿಶೀಲಿಸಲಾಗುವುದು ಎಂದಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನಮ್ಮಲ್ಲೂ ಅಸ್ತ್ರಗಳಿವೆ, ದಾಳಿಗೆ ಸಂಪೂರ್ಣ ಸಿದ್ಧ: ಅಮೆರಿಕಾ ಆರ್ಥಿಕ ದಿಗ್ಬಂಧನಕ್ಕೆ ಇರಾನ್‌ ಪ್ರತಿರೋಧ, ಭಾರೀ ಪ್ರತೀಕಾರದ ಎಚ್ಚರಿಕೆ

‘Iran ನನ್ನ ಪುತ್ರನನ್ನು ಹತ್ಯೆ ಮಾಡಲು ಯತ್ನಿಸಿತ್ತು’: ಟೆಹ್ರಾನ್‌ ವಿರುದ್ಧ ನೆತನ್ಯಾಹು ಗಂಭೀರ ಆರೋಪ

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ