ಸಂಗ್ರಹ ಚಿತ್ರ 
ರಾಜ್ಯ

ಕಾರವಾರ: ಅಲೆಗಳ ಹೊಡೆತಕ್ಕೆ ಸಿಲುಕಿ ಕೊಚ್ಚಿ ಹೋಗಿದ್ದ ನಾಲ್ವರು ಪ್ರವಾಸಿಗರ ರಕ್ಷಣೆ

ಗೋಕರ್ಣ ಬೀಚ್‌ನಲ್ಲಿ ಜೀವ ರಕ್ಷಕ ತಂಡದ ಸಮಯೋಚಿತ ಕ್ರಮದಿಂದಾಗಿ ನೀರಿನಲ್ಲಿ ಮುಳುಗುತ್ತಿದ್ದ ನಾಲ್ವರು ಪ್ರವಾಸಿಗರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸೋಮವಾರ ಈ ಘಟನೆ ನಡೆದಿದೆ. 

ಕಾರವಾರ: ಇಲ್ಲಿನ ಗೋಕರ್ಣ ಬೀಚ್‌ನಲ್ಲಿ ಜೀವ ರಕ್ಷಕ ತಂಡದ ಸಮಯೋಚಿತ ಕ್ರಮದಿಂದಾಗಿ ನೀರಿನಲ್ಲಿ ಮುಳುಗುತ್ತಿದ್ದ ನಾಲ್ವರು ಪ್ರವಾಸಿಗರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಸೋಮವಾರ ಈ ಘಟನೆ ನಡೆದಿದೆ. ಬೆಂಗಳೂರಿನಿಂದ ಆಗಮಿಸಿದ್ದ ಯುವಕರು ಸಮುದ್ರ ತೀರದಲ್ಲಿ ಈಜುತ್ತಿದ್ದ ವೇಳೆ ಅಲೆಗಳ ಹೊಡೆತಕ್ಕೆ ಸಿಕ್ಕಿ ಕೊಚ್ಚಿ ಹೋಗಿದ್ದಾರೆ.

ರಕ್ಷಿಸಲಾದ ಯುವಕರನ್ನು ರಿತುರಾಜ್ (26), ಶ್ರೀಖಾಂಶು ಗುಪ್ತಾ (28), ಪ್ರಶಾಂತ್ ಚಂದ್ರಶೇಖರ್ (28) ಮತ್ತು ಆರುಷಿ ಬನ್ಸಾಲ್ (27) ಎಂದು ಗುರುತಿಸಲಾಗಿದೆ. ಅವರು ಬೆಂಗಳೂರಿನಲ್ಲಿ ಉದ್ಯೋಗಿಗಳಾಗಿದ್ದು, ಪ್ರವಾಸಕ್ಕೆಂದು ಗೋಕರ್ಣಕ್ಕೆ ಆಗಮಿಸಿದ್ದರು.

ಅವರು ಸಂಕಷ್ಟದಲ್ಲಿದ್ದುದನ್ನು ಗಮನಿಸಿದ ಜೀವ ರಕ್ಷಕ ತಂಡ ಕೂಡಲೇ ಅವರನ್ನು ರಕ್ಷಿಸಿದ್ದಾರೆ. ಕಡಲತೀರದಲ್ಲಿ ಪ್ರಥಮ ಚಿಕಿತ್ಸೆ ನೀಡಿದ ನಂತರ ಹೆಚ್ಚಿನ ವೈದ್ಯಕೀಯ ಚಿಕಿತ್ಸೆಗಾಗಿ ಗೋಕರ್ಣ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಅವರು ಸದ್ಯ ಅಪಾಯದಿಂದ ಪಾರಾಗಿದ್ದಾರೆ ಎನ್ನಲಾಗಿದೆ.

ಈ ಸಂಬಂಧ ಗೋಕರ್ಣ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಶೀಘ್ರದಲ್ಲೇ ವಿಶ್ವಕ್ಕೆ ಸಿಹಿ ಸುದ್ದಿ: ಅಮೆರಿಕಾ–ಇರಾನ್ ಸಂಘರ್ಷ ಅಂತ್ಯ ಸಾಧ್ಯತೆ, ಮಾರ್ಕೊ ರುಬಿಯೊ ಮಹತ್ವದ ಹೇಳಿಕೆ..!

ಪಾಕಿಸ್ತಾನದಲ್ಲಿ ಮುಂದುವರಿದ ರಕ್ತಪಾತ: ಚಲಿಸುತ್ತಿದ್ದ ರೈಲಿನಲ್ಲಿ ಆತ್ಮಾಹುತಿ ಬಾಂಬ್ ದಾಳಿ; 24 ಪ್ರಯಾಣಿಕರ ಸಾವು, 100ಕ್ಕೂ ಹೆಚ್ಚು ಜನರಿಗೆ ಗಾಯ

ಎಬೋಲಾ ಭೀತಿ: ಡಿಆರ್‌ಸಿ, ಉಗಾಂಡಾ, ದಕ್ಷಿಣ ಸುಡಾನ್‌ಗೆ ಅನಗತ್ಯ ಪ್ರಯಾಣ ಬೇಡ: ಭಾರತೀಯರಿಗೆ ಕೇಂದ್ರ ಸರ್ಕಾರ ಎಚ್ಚರಿಕೆ

ಅಮೆರಿಕ-ಇರಾನ್ ಮಾತುಕತೆಯಲ್ಲಿ ಮಹತ್ವದ ಪ್ರಗತಿ: ಶಾಂತಿ ಒಪ್ಪಂದ ಅಂತಿಮ ಹಂತದಲ್ಲಿದೆ ಎಂದ ಡೊನಾಲ್ಟ್ ಟ್ರಂಪ್, ಹಾರ್ಮುಜ್ ಜಲಸಂಧಿ ಪುನರಾರಂಭ ನಿರೀಕ್ಷೆ

ಅಮೆರಿಕ ಶ್ವೇತಭವನ ಬಳಿ ಮತ್ತೆ ಗುಂಡಿನ ದಾಳಿ: ಪ್ರತಿದಾಳಿಗೆ ಬಂದೂಕುಧಾರಿ ಸಾವು-Video

SCROLL FOR NEXT