ಸಾಂದರ್ಭಿಕ ಚಿತ್ರ 
ರಾಜ್ಯ

ಹಾಸನದಲ್ಲಿ ಆಲ್ಕೋಹಾಲ್ ಚಾಲೆಂಜ್: ಅರ್ಧಗಂಟೆಯಲ್ಲಿ 900 ಎಂಎಲ್ ಮದ್ಯ ಸೇವಿಸಿದ್ದ ವ್ಯಕ್ತಿ ಸಾವು!

ಅರ್ಧ ಗಂಟೆಯಲ್ಲಿ 90 ಎಂಲ್‌ನ 10 ಪ್ಯಾಕೆಟ್ ಮದ್ಯ ಕುಡಿಯುವ ಚಾಲೆಂಜ್ ನಲ್ಲಿ ಹೆಚ್ಚು ಮದ್ಯ ಸೇವಿಸಿದ್ದ ವ್ಯಕ್ತಿ ಮೃತಪಟ್ಟ ಪ್ರಕರಣ ಹಾಸನ ಜಿಲ್ಲೆಯ ಹೊಳೆನರಸೀಪುರ ತಾಲೂಕು ಸಿಗರನಹಳ್ಳಿ ಗ್ರಾಮದಲ್ಲಿ ವರದಿಯಾಗಿದೆ.

ಹೊಳೆನರಸೀಪುರ: ಅರ್ಧ ಗಂಟೆಯಲ್ಲಿ 90 ಎಂಲ್‌ನ 10 ಪ್ಯಾಕೆಟ್ ಮದ್ಯ ಕುಡಿಯುವ ಚಾಲೆಂಜ್ ನಲ್ಲಿ ಹೆಚ್ಚು ಮದ್ಯ ಸೇವಿಸಿದ್ದ ವ್ಯಕ್ತಿ ಮೃತಪಟ್ಟ ಪ್ರಕರಣ ಹಾಸನ ಜಿಲ್ಲೆಯ ಹೊಳೆನರಸೀಪುರ ತಾಲೂಕು ಸಿಗರನಹಳ್ಳಿ ಗ್ರಾಮದಲ್ಲಿ ವರದಿಯಾಗಿದೆ.

ತಿಮ್ಮೇಗೌಡ (60) ಮೃತ ವ್ಯಕ್ತಿ. ಗ್ರಾಮದ ಬಸ್ ನಿಲ್ದಾಣದಲ್ಲಿ ದೇವರಾಜು ಹಾಗೂ ತಿಮ್ಮೇಗೌಡರ ನಡುವೆ ಮೂವತ್ತು ನಿಮಿಷದಲ್ಲಿ 90 ಎಂಲ್‌ನ ಹತ್ತು ಪ್ಯಾಕೆಟ್ ಮದ್ಯ ಕುಡಿಯುವ ಪಂಥ ಕಟ್ಟಿದ್ದರು. ಇಬ್ಬರಿಗೂ ಕೃಷ್ಣೇಗೌಡ ಮದ್ಯದ ಪ್ಯಾಕೆಟ್‌ಗಳನ್ನು ನೀಡಿದ್ದ ಎಂದು ಆರೋಪಿಸಲಾಗಿದೆ.

ಚಾಲೆಂಜ್‌ಗಾಗಿ ಮದ್ಯ ಕುಡಿದು ರಕ್ತ ವಾಂತಿ ಮಾಡಿಕೊಂಡ ತಿಮ್ಮೇಗೌಡ ವಾಂತಿ ಮಾಡುತ್ತಲೇ ಬಸ್ ನಿಲ್ದಾಣದಲ್ಲೇ ಬಿದ್ದಿದ್ದ. ಈ ವೇಳೆ ಸ್ಥಳದಿಂದ ದೇವರಾಜು ಮತ್ತು ಕೃಷ್ಣೇಗೌಡ ಪರಾರಿಯಾಗಿದ್ದರು ಎಂದು ದೂರಲಾಗಿದೆ. ಕುಡಿದು ಬಿದ್ದಿದ್ದ ತಿಮ್ಮೇಗೌಡನ ಶವವನ್ನು ಗ್ರಾಮಸ್ಥರು ಆತನ ಮನೆಗೆ ತಂದಿದ್ದಾರೆ.

ಕೃಷ್ಣಗೌಡ ಮತ್ತು ದೇವರಾಜು ಸ್ಥಳದಿಂದ ಪರಾರಿಯಾಗಿದ್ದಾರೆ. ತಲೆಮರೆಸಿಕೊಂಡಿರುವ ಅವರ ವಿರುದ್ಧ ಹೊಳೆನರಸೀಪುರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

KPSC ಪಶುವೈದ್ಯಾಧಿಕಾರಿ ನೇಮಕಾತಿ ಹಗರಣ: ಎಲ್ಲಾ 329 ಅಭ್ಯರ್ಥಿಗಳಿಗೆ CID ಶಾಕ್, ಇಂದೇ ವಿಚಾರಣೆಗೆ ಹಾಜರಾಗುವಂತೆ ನೋಟಿಸ್!

ನಮ್ಮಲ್ಲೂ ಅಸ್ತ್ರಗಳಿವೆ, ದಾಳಿಗೆ ಸಂಪೂರ್ಣ ಸಿದ್ಧ: ಅಮೆರಿಕಾ ಆರ್ಥಿಕ ದಿಗ್ಬಂಧನಕ್ಕೆ ಇರಾನ್‌ ಪ್ರತಿರೋಧ, ಭಾರೀ ಪ್ರತೀಕಾರದ ಎಚ್ಚರಿಕೆ

‘Iran ನನ್ನ ಪುತ್ರನನ್ನು ಹತ್ಯೆ ಮಾಡಲು ಯತ್ನಿಸಿತ್ತು’: ಟೆಹ್ರಾನ್‌ ವಿರುದ್ಧ ನೆತನ್ಯಾಹು ಗಂಭೀರ ಆರೋಪ

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!