ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ರಾಜ್ಯ

ನಾವು ಸುಪ್ರೀಂ ಕೋರ್ಟ್ ಮೊರೆ ಹೋಗುತ್ತೇವೆ- ಡಿ ಕೆ ಶಿವಕುಮಾರ್; ದೆಹಲಿಯಲ್ಲಿ ಕಾನೂನು ತಜ್ಞರ ಜೊತೆ ಸಿಎಂ ಸಿದ್ದರಾಮಯ್ಯ ಸಭೆ

ರಾಜ್ಯದಲ್ಲಿ ಈ ವರ್ಷ ಮುಂಗಾರು ಮಳೆ ಕೈಕೊಟ್ಟು ರೈತರು ಪರಿತಪಿಸುತ್ತಿರುವ ಸಂದರ್ಭದಲ್ಲಿ ತಮಿಳು ನಾಡಿಗೆ ನಿತ್ಯ 5 ಸಾವಿರ ಕ್ಯುಸೆಕ್ ನೀರನ್ನು ಬಿಡಬೇಕು ಎಂಬ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ(CWMA) ಆದೇಶ ನೀಡಿರುವ ಹಿನ್ನೆಲೆಯಲ್ಲಿ ಕಾವೇರಿ ಜಲಾನಯನ ಪ್ರದೇಶಗಳ ರೈತರಿಂದ ನಿತ್ಯವೂ ಪ್ರತಿಭಟನೆ ವ್ಯಕ್ತವಾಗುತ್ತಿದೆ.

ಕಾವೇರಿ ಸಭೆಯಲ್ಲಿ ಪಾಲ್ಗೊಳ್ಳಲು ದೆಹಲಿಗೆ ಆಗಮಿಸಿದ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ ಕೆ ಶಿವಕುಮಾರ್
Sumana Upadhyaya
Updated On : 20 Sept 2023, 1:33 pm

ನವದೆಹಲಿ/ಬೆಂಗಳೂರು: ರಾಜ್ಯದಲ್ಲಿ ಈ ವರ್ಷ ಮುಂಗಾರು ಮಳೆ ಕೈಕೊಟ್ಟು ರೈತರು ಪರಿತಪಿಸುತ್ತಿರುವ ಸಂದರ್ಭದಲ್ಲಿ ತಮಿಳು ನಾಡಿಗೆ ನಿತ್ಯ 5 ಸಾವಿರ ಕ್ಯುಸೆಕ್ ನೀರನ್ನು ಬಿಡಬೇಕು ಎಂಬ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ(CWMA) ಆದೇಶ ನೀಡಿರುವ ಹಿನ್ನೆಲೆಯಲ್ಲಿ ಕಾವೇರಿ ಜಲಾನಯನ ಪ್ರದೇಶಗಳ ರೈತರಿಂದ ನಿತ್ಯವೂ ಪ್ರತಿಭಟನೆ ವ್ಯಕ್ತವಾಗುತ್ತಿದೆ. 

ವಿರೋಧ ಪಕ್ಷಗಳು ಸಹ ಕೇಂದ್ರದ ಮುಂದೆ ರಾಜ್ಯ ಸರ್ಕಾರ ಸಮರ್ಥವಾಗಿ ವಾದ ಮಂಡಿಸಬೇಕೆಂದು ಆಗ್ರಹಿಸುತ್ತಿವೆ. ಈ ನಡುವೆ ಇಂದು ಬುಧವಾರ ದೆಹಲಿಯಲ್ಲಿ ಕಾನೂನು ತಜ್ಞರ ಜೊತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಭೆ ನಡೆಸಲಿದ್ದಾರೆ. ಅದಕ್ಕಾಗಿ ಕಳೆದ ರಾತ್ರಿಯೇ ದೆಹಲಿಗೆ ಆಗಮಿಸಿದ್ದಾರೆ. 

ದೆಹಲಿಯ ತಾಜ್ ಮಾನ್ ಸಿಂಗ್ ಹೋಟೆಲ್​ನಲ್ಲಿ ನಡೆಯುವ ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ರಾಜ್ಯದ ಸಂಸದರು, ಕೇಂದ್ರ ಸಚಿವರು, ರಾಜ್ಯಸಭಾ ಸದಸ್ಯರು ಭಾಗಿಯಾಗಲಿದ್ದಾರೆ.

Advertisement

Advertisement

ಸಿಡಬ್ಲೂಎಮ್​​ಎ ಆದೇಶ ವಿಚಾರವಾಗಿ ರಾಜ್ಯದ ಜನಪ್ರತಿನಿಧಿಗಳ ಜೊತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಾಜ್​ಮಾನ್ ಸಿಂಗ್ ಹೋಟೆಲ್​​ನಲ್ಲಿ ಸಭೆ ನಡೆಸುತ್ತಿದ್ದಾರೆ. ಡಿಸಿಎಂ ಡಿ.ಕೆ.ಶಿವಕುಮಾರ್, ಸಚಿವ ಚಲುವರಾಯಸ್ವಾಮಿ, ದೆಹಲಿ ವಿಶೇಷ ಪ್ರತಿನಿಧಿ ಪ್ರಕಾಶ್ ಹುಕ್ಕೇರಿ, ಸಂಸದರಾದ ಗದ್ದಿಗೌಡರ್, ಲೆಹರ್ ಸಿಂಗ್, ಬಚ್ಚೇಗೌಡ, ಸುಮಲತಾ ಅಂಬರೀಶ್​​, ಕೇಂದ್ರ ಸಚಿವರಾದ ನಾರಾಯಣಸ್ವಾಮಿ, ಶೋಭಾ ಕರಂದ್ಲಾಜೆ ಭಾಗವಹಿಸಿದ್ದಾರೆ. 

ಇದನ್ನೂ ಓದಿ: ಕಾವೇರಿ ವಿವಾದ: ಕೇಂದ್ರ ಸಚಿವ ಗಜೇಂದ್ರ ಸಿಂಗ್ ಶೇಖಾವತ್‌ ಭೇಟಿ ಮಾಡಿದ ತಮಿಳುನಾಡು ಸಂಸದರು

ಇಂದು ಬೆಳಗ್ಗೆ ದೆಹಲಿಯ ಕರ್ನಾಟಕ ಭವನದಲ್ಲಿ ಡಿಸಿಎಂ ಡಿ ಕೆ ಶಿವಕುಮಾರ್ ಪ್ರಾರ್ಥನೆ ಸಲ್ಲಿಸಿದರು. ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ರಾಜ್ಯದ ಮುಖಂಡರು, ಸಂಸದರು ಎಲ್ಲಾ ಇಂದು ತಾಜ್ ಮಾನ್ ಸಿಂಗ್ ಹೊಟೇಲ್ ನಲ್ಲಿ ಸಭೆ ಸೇರಲಿದ್ದು, ರಾಜ್ಯದಲ್ಲಿ ಈ ವರ್ಷ ಉಂಟಾಗಿರುವ ನೀರಿನ ಸಮಸ್ಯೆ ಬಗ್ಗೆ ಗಹನ ಚರ್ಚೆ ನಡೆಸಲಿದ್ದೇವೆ. ಕರ್ನಾಟಕ ರಾಜ್ಯದ ಹಿತಾಸಕ್ತಿ ನಮಗೆ ಆದ್ಯತೆಯಾಗಿದ್ದು ಆ ನಿಟ್ಟಿನಲ್ಲಿ ಮುಂದಿನ ಕಾನೂನು ಹೋರಾಟ ರೂಪುರೇಷೆ ಬಗ್ಗೆ ಚರ್ಚಿಸಲಿದ್ದೇವೆ ಎಂದರು.

ಕಾವೇರಿ ನೀರು ವಿವಾದದಲ್ಲಿ ಮಧ್ಯೆ ಪ್ರವೇಶಿಸಿ ಸಮಸ್ಯೆ ಬಗೆಹರಿಸಬೇಕೆಂದು ನಾನು ಪ್ರಧಾನಿಯವರನ್ನು ಭೇಟಿ ಮಾಡಿ ಮನವಿ ಸಲ್ಲಿಸಲು ಸಮಯ ಕೇಳಿದ್ದೇನೆ. ಇಂದಿನ ಸಭೆಯಲ್ಲಿ ಎಲ್ಲಾ ಸಂಸದರು, ಕೇಂದ್ರ ಸಚಿವರು ಭಾಗವಹಿಸುತ್ತಿದ್ದಾರೆ. ಪಕ್ಷಬೇಧ ಮರೆತು ಸಹಕಾರ ನೀಡುತ್ತಿದ್ದಾರೆ. ಕೇಂದ್ರ ಜಲ ಶಕ್ತಿ ಸಚಿವರನ್ನು ಭೇಟಿ ಮಾಡಿದ್ದೇನೆ. ನಾವು ಸುಪ್ರೀಂ ಕೋರ್ಟ್ ಗೆ ಮನವಿ ಸಲ್ಲಿಸಲಿದ್ದೇವೆ ಎಂದು ಡಿ ಕೆ ಶಿವಕುಮಾರ್ ಹೇಳಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement