ಪ್ರಾತಿನಿಧಿಕ ಚಿತ್ರ 
ರಾಜ್ಯ

ತುಮಕೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಬಳಿ ಕಾರು ಪಲ್ಟಿಯಾಗಿ ಮೂವರು ಸಾವು, ಇಬ್ಬರಿಗೆ ಗಂಭೀರ ಗಾಯ

ತುಮಕೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಅಂಚೆಪಾಳ್ಯ ಬಳಿ ಸೋಮವಾರ ಮುಂಜಾನೆ ಕಾರು ಪಲ್ಟಿಯಾಗಿ ಮೂವರು ಮೃತಪಟ್ಟು, ಇಬ್ಬರು ಗಾಯಗೊಂಡಿದ್ದಾರೆ.

ಬೆಂಗಳೂರು: ತುಮಕೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಅಂಚೆಪಾಳ್ಯ ಬಳಿ ಸೋಮವಾರ ಮುಂಜಾನೆ ಕಾರು ಪಲ್ಟಿಯಾಗಿ ಮೂವರು ಮೃತಪಟ್ಟು, ಇಬ್ಬರು ಗಾಯಗೊಂಡಿದ್ದಾರೆ.

ಮೃತರನ್ನು ದಾರೆಡ್ಡಿ, ನಿರೋಶ್ ಮತ್ತು ಆಗಸ್ಟಿನ್ ಎಂದು ಗುರುತಿಸಲಾಗಿದ್ದು, ಇವರೆಲ್ಲರೂ 25 ರಿಂದ 30 ವರ್ಷ ವಯಸ್ಸಿನವರು. ಕಾರು ಚಲಾಯಿಸುತ್ತಿದ್ದ ಮಿಥುನ್ ಯಾದವ್ ಮತ್ತು ಶತ್ರುಘ್ನ ಅಪಘಾತದಲ್ಲಿ ಗಾಯಗೊಂಡಿದ್ದಾರೆ. ಈ ಐವರೂ ಹೆಬ್ಬಾಳ ಸಮೀಪದ ಮಾನ್ಯತಾ ಟೆಕ್ ಪಾರ್ಕ್‌ನಲ್ಲಿರುವ ಬಹುರಾಷ್ಟ್ರೀಯ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿದ್ದರು.

ಅಂಚೆಪಾಳ್ಯ ಸಮೀಪದ ಜಿಂದಾಲ್ ಮಹಿಳಾ ಕಾಲೇಜು ಮುಂಭಾಗ ಸೋಮವಾರ ಮುಂಜಾನೆ 4.30ರ ಸುಮಾರಿಗೆ ಅವರ ಕಾರು ಹೆದ್ದಾರಿಯ ಸುರಕ್ಷತಾ ಗೋಡೆಗೆ ಡಿಕ್ಕಿ ಹೊಡೆದು ಉರುಳಿ ಬಿದ್ದಿರುವ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

'ಮೂವರು ಸ್ಥಳದಲ್ಲೇ ಸಾವಿಗೀಡಾದರೆ, ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಅತಿವೇಗ ಮತ್ತು ನಿರ್ಲಕ್ಷ್ಯದ ಚಾಲನೆಯೇ ಈ ಅನಾಹುತಕ್ಕೆ ಕಾರಣ. ಸ್ನೇಹಿತರು ಪ್ರವಾಸಕ್ಕೆ ಹೋಗಿ ಹಿಂತಿರುಗುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ' ಎಂದು ನೆಲಮಂಗಲ ಸಂಚಾರ ಪೊಲೀಸರು ಹೇಳಿಕೆಯಲ್ಲಿ ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

T20 World Cup, IND vs Pak: ಇಶಾನ್ ಕಿಶಾನ್ ಬ್ಯಾಟಿಂಗ್ ಅಬ್ಬರ; ಸ್ಪಿನ್ ಮೋಡಿಗೆ ಪಾಕ್ ತತ್ತರ, ಭಾರತಕ್ಕೆ 61 ರನ್ ಗೆಲುವು!

T20 World Cup 2026: ಸೂಪರ್ 8 ಹಂತಕ್ಕೆ ಭಾರತ ಲಗ್ಗೆ; ದೇಶಾದ್ಯಂತ ಸಂಭ್ರಮಾಚರಣೆ, ಗಣ್ಯರ ಶುಭಾಶಯ!

Bengaluru: 'ಮನೆಗೆ ಸೂರ್ಯನ ಬೆಳಕು ಬರುತ್ತದೆ' ಎಂಬ ಒಂದೇ ಕಾರಣಕ್ಕೆ 80 ಸಾವಿರ ಬಾಡಿಗೆ ಕೇಳಿದ ಮಾಲೀಕ!

T20 World Cup 2026: 27 ಬಾಲ್ ಗಳಲ್ಲಿ ಅರ್ಧಶತಕ ಹೊಡೆದು, ಭಾರತದ ಸ್ಕೋರ್ ಹೆಚ್ಚಿಸಿದ ಇಶಾನ್ ಕಿಶಾನ್!

RSS ದೆವ್ವವಿದ್ದಂತೆ, ಬಿಜೆಪಿ ದೆವ್ವದ ನೆರಳು: ಪ್ರಿಯಾಂಕ್ ಖರ್ಗೆ ವಾಗ್ದಾಳಿ

SCROLL FOR NEXT