ಅಭಿನವ ಹಾಲಸ್ವಾಮಿ ಸ್ಥಳ ಮಹಜರು ವೇಳೆ ಮಠದಲ್ಲಿ ಸಿಕ್ಕಿದ ರಾಶಿ ಹಣ 
ರಾಜ್ಯ

ಅಭಿನವ ಹಾಲಸ್ವಾಮಿಯನ್ನು ಸ್ಥಳ ಮಹಜರು ಮಾಡಲು ಕರೆತಂದಿದ್ದ ವೇಳೆ ಮಠದಲ್ಲಿ ಕಂತೆ ಕಂತೆ ಹಣ ಪತ್ತೆ!

ಬಳ್ಳಾರಿ ಜಿಲ್ಲೆಯ ಹೊಸಪೇಟೆ ಸಮೀಪದ ಹಿರೇಹಡಗಲಿಯ ಹಾಲಸ್ವಾಮಿ ಮಹಾಸಂಸ್ಥಾನ ಮಠದ ಪೀಠಾಧಿಪತಿ ಅಭಿನವ ಹಾಲಸ್ವಾಮಿಯನ್ನು ಬಂಧಿಸಿದ ಒಂದು ದಿನದ ನಂತರ ನಿನ್ನೆ ಕೇಂದ್ರ ಅಪರಾಧ ವಿಭಾಗದ (CCB) ಪೊಲೀಸರು ಸ್ಥಳ ಮಹಜರಿಗೆ ಹೋಗಿದ್ದ ಸಂದರ್ಭದಲ್ಲಿ ಲಕ್ಷ ಲಕ್ಷ ಕಂತೆ ನೋಟು ಸಿಕ್ಕಿದೆ. 

ಬೆಂಗಳೂರು/ಬಳ್ಳಾರಿ: ಬಳ್ಳಾರಿ ಜಿಲ್ಲೆಯ ಹೊಸಪೇಟೆ ಸಮೀಪದ ಹಿರೇಹಡಗಲಿಯ ಹಾಲಸ್ವಾಮಿ ಮಹಾಸಂಸ್ಥಾನ ಮಠದ ಪೀಠಾಧಿಪತಿ ಅಭಿನವ ಹಾಲಸ್ವಾಮಿಯನ್ನು ಬಂಧಿಸಿದ ಒಂದು ದಿನದ ನಂತರ ನಿನ್ನೆ ಕೇಂದ್ರ ಅಪರಾಧ ವಿಭಾಗದ (CCB) ಪೊಲೀಸರು ಸ್ಥಳ ಮಹಜರಿಗೆ ಹೋಗಿದ್ದ ಸಂದರ್ಭದಲ್ಲಿ ಲಕ್ಷ ಲಕ್ಷ ಕಂತೆ ನೋಟು ಸಿಕ್ಕಿದೆ. 

ಪೊಲೀಸರಿಗೆ ನಿನ್ನೆ 50 ಲಕ್ಷ ರೂಪಾಯಿ ಸಿಕ್ಕಿದೆ ಎನ್ನಲಾಗಿದೆ. ಈವರೆಗೆ ಪೊಲೀಸರು 2.81 ಕೋಟಿ ರೂಪಾಯಿಗಳನ್ನು ವಶಪಡಿಸಿಕೊಂಡಿದ್ದಾರೆ. 

ಬೈಂದೂರು ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಲು ಬಿಜೆಪಿ ಟಿಕೆಟ್ ಭರವಸೆ ನೀಡಿ ಗೋವಿಂದ ರಾಜು ಬಾಬು ಎಂಬ ಉದ್ಯಮಿಯೊಬ್ಬರಿಗೆ 5 ಕೋಟಿ ವಂಚನೆ ಎಸಗಿದ ಪ್ರಕರಣ ಇದಾಗಿದೆ. 

ಮೂರು ದಿನಗಳ ಹಿಂದೆ ಒಡಿಶಾದಲ್ಲಿ ಸಿಕ್ಕಿದ ಹಾಲಸ್ವಾಮಿ ಅವರನ್ನು ನಿನ್ನೆ ಬುಧವಾರ ಬೆಳಗ್ಗೆ ಹೆಚ್ಚುವರಿ ಮುಖ್ಯ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ಕೋರ್ಟ್ (ಎಸಿಎಂಎಂ) ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು. ನ್ಯಾಯಾಲಯ ಅವರನ್ನು 10 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಒಪ್ಪಿಸಿ, ನಂತರ ಹಾಲಸ್ವಾಮಿಯನ್ನು ಹೊಸಪೇಟೆಯ ಮಠಕ್ಕೆ ಕರೆದೊಯ್ಯಲಾಯಿತು.

ಮಠದಲ್ಲಿರುವ ‘ಪಲ್ಲಕ್ಕಿ’ಯಲ್ಲಿ 56 ಲಕ್ಷ ರೂಪಾಯಿ ಇಡಲಾಗಿದೆ ಎಂದು ದರ್ಶಕರು ಖಚಿತಪಡಿಸಿದ್ದಾರೆ ಎಂದು ತನಿಖೆಯಿಂದ ತಿಳಿದುಬಂದಿದೆ. ತಮ್ಮ ಡ್ರೈವರ್ ಮೂಲಕ ಹಣವನ್ನು ಸ್ವಾಮೀಜಿ ಪಡೆದುಕೊಂಡಿದ್ದಾರೆ. ಡ್ರೈವರ್ ಕೊಡುತ್ತಿದ್ದ ಹಣವನ್ನು ಅವರ ಶಿಷ್ಯರೊಬ್ಬರು ಇಟ್ಟುಕೊಂಡಿದ್ದರು. ಆ ಮಾಹಿತಿಯ ಮೇರೆಗೆ ಹಾಲಸ್ವಾಮಿಯನ್ನು ಮಠಕ್ಕೆ ಸ್ಥಳ ಮಹಜರು ಮಾಡಲು ಕರೆದೊಯ್ದು ಹಣ ವಸೂಲಿ ಮಾಡಲಾಗಿದೆ ಎಂದು ಅಧಿಕಾರಿ ತಿಳಿಸಿದರು.

ದೂರುದಾರರಿಂದ 1.5 ಕೋಟಿ ರೂಪಾಯಿಗಳನ್ನು ಪಡೆದಿರುವ ಆರೋಪವನ್ನು ಹೊಂದಿದ್ದು, ದೂರು ದಾಖಲಿಸುವ ಮುನ್ನವೇ 50 ಲಕ್ಷ ರೂಪಾಯಿ ಹಿಂತಿರುಗಿಸಿದ್ದಾರೆ. ಈಗ ಅವರಿಂದ 44 ಲಕ್ಷ ರೂಪಾಯಿ ವಸೂಲಿ ಮಾಡಬೇಕಿದೆ. ಜಮೀನು ಗುತ್ತಿಗೆ ಪಡೆದು ಹಣ ಹೂಡಿಕೆ ಮಾಡಿದ್ದಾರೆ. ಶೀಘ್ರದಲ್ಲೇ ಅದನ್ನು ಮರುಪಡೆಯಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ. 

ಪ್ರಕರಣದಲ್ಲಿ ಇತರರು ಭಾಗಿಯಾಗಿರುವ ಬಗ್ಗೆಯೂ ಹಾಲಸ್ವಾಮಿಯನ್ನು ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ಬಲಪಂಥೀಯ ಕಾರ್ಯಕರ್ತೆ ಹಾಗೂ ಪ್ರಕರಣದ ಪ್ರಮುಖ ಆರೋಪಿ ಚೈತ್ರಾ ಕುಂದಾಪುರ ಮತ್ತು ಇತರರು 2.25 ಕೋಟಿ ರೂಪಾಯಿ ಹಣವನ್ನು ಚಿನ್ನದಲ್ಲಿ ಮತ್ತು ವಿವಿಧ ಬ್ಯಾಂಕ್‌ಗಳಲ್ಲಿ ಸ್ಥಿರ ಠೇವಣಿಯಾಗಿ ಹೂಡಿಕೆ ಮಾಡಲಾಗಿದ್ದು ಅದನ್ನು ವಶಪಡಿಸಿಕೊಳ್ಳಲಾಗಿದೆ. ಉಳಿದ ಮೊತ್ತವನ್ನು ವಸೂಲಿ ಮಾಡುವ ಪ್ರಯತ್ನ ನಡೆಯುತ್ತಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ರಾಜ್ಯದಲ್ಲಿ ಸಿಎಂ ಗದ್ದುಗೆ ಗುದ್ದಾಟ: ಎಲ್ಲ ಗೊಂದಲಗಳಿಗೆ ಹೈಕಮಾಂಡ್ ತೆರೆ ಎಳೆಯಬೇಕು- ಸಿಎಂ ಸಿದ್ದರಾಮಯ್ಯ

ಇದು ಕೇವಲ ಧ್ವಜವಲ್ಲ ಭಾರತೀಯ ನಾಗರಿಕತೆಯ ಪುನರ್‌ ಜಾಗೃತಿಯ ಧ್ವಜ, ಶತಮಾನಗಳಷ್ಟು ಹಳೆಯ ಗಾಯ ಈಗ ವಾಸಿಯಾಗುತ್ತಿದೆ: ಪ್ರಧಾನಿ ಮೋದಿ

ಕೆಲಸದ ಹೊರೆ ಖಂಡಿಸಿ ಪಶ್ಚಿಮ ಬಂಗಾಳ CEO ಕಚೇರಿ ಮುಂದೆ BLOಗಳಿಂದ ಅಹೋರಾತ್ರಿ ಧರಣಿ!

ಅಯೋಧ್ಯೆ ರಾಮ ಮಂದಿರ ನಿರ್ಮಾಣ ಪೂರ್ಣ: ರಾಮ-ಸೀತೆ ವಿವಾಹ ಪರ್ವದಂದೇ ದೇಗುಲದ ಶಿಖರದ ಮೇಲೆ ಧ್ವಜಾರೋಹಣ ನೆರವೇರಿಸಿದ ಪ್ರಧಾನಿ ಮೋದಿ

"Misfit For Army": ಗುರುದ್ವಾರ ಪ್ರವೇಶಿಸಲು ನಿರಾಕರಣೆ; ಕ್ರಿಶ್ಚಿಯನ್ ಸೇನಾ ಅಧಿಕಾರಿಗೆ ಸುಪ್ರೀಂ ಕೋರ್ಟ್ ತರಾಟೆ!

SCROLL FOR NEXT