ಸಂಗ್ರಹ ಚಿತ್ರ 
ರಾಜ್ಯ

ಗಣೇಶ ಮೂರ್ತಿ ವಿಸರ್ಜನೆ: ಸೆ.31 ರವರೆಗೆ ನಗರದ ಹಲವೆಡೆ ಮದ್ಯ ಮಾರಾಟಕ್ಕೆ ನಿಷೇಧ!

ದೇಶದಲ್ಲೆಡೆ ಗಣೇಶ ಚತುರ್ಥಿ ಹಬ್ಬವನ್ನು ವಿಜೃಂಭಣೆಯಿಂದ ನಡೆಸಲಾಗುತ್ತಿದ್ದು, ಅದರಂತೆ ಬೆಂಗಳೂರಿನ ಹಲವೆಡೆ ಇಂದು ಗಣೇಶ ವಿಸರ್ಜನೆ ಮಾಡಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಬೆಂಗಳೂರು ಕೇಂದ್ರ, ಉತ್ತರ, ಪೂರ್ವ ಹಾಗೂ ಈಶಾನ್ಯ ವಿಭಾಗದಲ್ಲಿ ಮದ್ಯ ನಿಷೇಧ ಮಾಡಲಾಗಿದೆ.

ಬೆಂಗಳೂರು: ದೇಶದಲ್ಲೆಡೆ ಗಣೇಶ ಚತುರ್ಥಿ ಹಬ್ಬವನ್ನು ವಿಜೃಂಭಣೆಯಿಂದ ನಡೆಸಲಾಗುತ್ತಿದ್ದು, ಅದರಂತೆ ಬೆಂಗಳೂರಿನ ಹಲವೆಡೆ ಇಂದು ಗಣೇಶ ವಿಸರ್ಜನೆ ಮಾಡಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಬೆಂಗಳೂರು ಕೇಂದ್ರ, ಉತ್ತರ, ಪೂರ್ವ ಹಾಗೂ ಈಶಾನ್ಯ ವಿಭಾಗದಲ್ಲಿ ಮದ್ಯ ನಿಷೇಧ ಮಾಡಲಾಗಿದೆ.

ನಗರದಲ್ಲಿ ಗಣಪತಿ ವಿಸರ್ಜನೆ ವೇಳೆ ಯಾವುದೇ ಅಹಿತಕರ ಘಟನೆ ನಡೆಯದಂತೆ ಮುಂಜಾಗೃತ ಕ್ರಮವಾಗಿ ಪೊಲೀಸ್​ ಇಲಾಖೆ ಈ ಕ್ರಮ ಕೈಗೊಂಡಿದೆ.

ಬೆಂಗಳೂರು ಉತ್ತರ ವಿಭಾಗದ ಜೆ.ಸಿ.ನಗರ, ಆರ್.ಟಿ.ನಗರ, ಹೆಬ್ಬಾಳ, ಸಂಜಯನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸೆ.21ರ ಬೆಳಗ್ಗೆ 6ರಿಂದ ಸೆ.22ರ ಬೆಳಗ್ಗೆ 6ರವರೆಗೆ ಮದ್ಯ ಮಾರಾಟ ನಿಷೇಧ ಮಾಡಲಾಗಿದೆ.

ಪೂರ್ವ ವಿಭಾಗದ ಡಿ.ಜೆ.ಹಳ್ಳಿ, ಭಾರತಿನಗರ, ಪುಲಿಕೇಶಿನಗರ ಠಾಣಾ ವ್ಯಾಪ್ತಿಯಲ್ಲಿ ಸೆಪ್ಟೆಂಬರ್ 23ರ ಬೆಳಗ್ಗೆ 6ರಿಂದ ಸೆ.24ರ ಬೆಳಗ್ಗೆ 6ವರೆಗೆ ಮದ್ಯ ನಿಷೇಧಿಸಲಾಗಿದೆ.

ಪೂರ್ವ ವಿಭಾಗದ ಕಮರ್ಷಿಯಲ್ ಸ್ಟ್ರೀಟ್, ಹಲಸೂರು, ಶಿವಾಜಿನಗರದಲ್ಲಿ ಸೆಪ್ಟೆಂಬರ್ 24ರ ಬೆಳಗ್ಗೆ 6ರಿಂದ ಸೆ.25ರ ಬೆಳಗ್ಗೆ 6ವರೆಗೆ ಮದ್ಯ ನಿಷೇಧ ಮಾಡಲಾಗಿದೆ.

ಇನ್ನುಳಿದಂತೆ ಬೆಂಗಳೂರಿನ ಈಶಾನ್ಯ ವಿಭಾಗದ ವಿದ್ಯಾರಣ್ಯಪುರ, ಯಲಹಂಕ, ಕೊಡಿಗೆಹಳ್ಳಿ, ಯಲಹಂಕ ಉಪನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸೆಪ್ಟೆಂಬರ್ 23ರ ಸಂಜೆ 6ರಿಂದ ಸೆ.25ರ ಬೆಳಗ್ಗೆ 6 ಗಂಟೆವರೆಗೆ ಮದ್ಯ ನಿಷೇಧ ಮಾಡಲಾಗಿದೆ. ಇನ್ನು ಕೇಂದ್ರ ವಿಭಾಗದ ಹೈಗ್ರೌಂಡ್ಸ್ ಠಾಣಾ ವ್ಯಾಪ್ತಿಯಲ್ಲಿ ಸೆ.30ರ ಬೆಳಗ್ಗೆ 6ರಿಂದ ಅಕ್ಟೋಬರ್ 1ರ ಬೆಳಗ್ಗೆ 6ರವರೆಗೆ ಮದ್ಯ ನಿಷೇಧಿಸಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT