ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ರಾಜ್ಯ

ಪ್ರಧಾನಿ ಬಳಿಗೆ ಸರ್ವಪಕ್ಷಗಳ ನಿಯೋಗ ಕರೆದೊಯ್ಯುವ ಮುನ್ನ ಬರದ ಸಂಪೂರ್ಣ ವಿವರ ಪಡೆಯಿರಿ: ಕೆಎಸ್ ಈಶ್ವರಪ್ಪ

ಕರ್ನಾಟಕದಲ್ಲಿ ಉಂಟಾಗಿರುವ ಬರ ಪರಿಸ್ಥಿತಿಯ ನಿಖರವಾದ ವಿವರವನ್ನು ಒಂದು ತಿಂಗಳಲ್ಲಿ ಸರ್ಕಾರ ಸಂಗ್ರಹಿಸಬೇಕು. ನಂತರವಷ್ಟೇ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಲು ಸರ್ವಪಕ್ಷ ನಿಯೋಗವನ್ನು ಕರೆದೊಯ್ಯೋಣ ಎಂದು ಬಿಜೆಪಿ ಹಿರಿಯ ನಾಯಕ ಕೆಎಸ್ ಈಶ್ವರಪ್ಪ ಸಲಹೆ ನೀಡಿದ್ದಾರೆ.

ಕೆಎಸ್ ಈಶ್ವರಪ್ಪ
Ramyashree GN
Updated On : 21 Sept 2023, 2:15 pm

ಬೆಂಗಳೂರು: ಕರ್ನಾಟಕದಲ್ಲಿ ಉಂಟಾಗಿರುವ ಬರ ಪರಿಸ್ಥಿತಿಯ ನಿಖರವಾದ ವಿವರವನ್ನು ಒಂದು ತಿಂಗಳಲ್ಲಿ ಸರ್ಕಾರ ಸಂಗ್ರಹಿಸಬೇಕು. ನಂತರವಷ್ಟೇ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಲು ಸರ್ವಪಕ್ಷ ನಿಯೋಗವನ್ನು ಕರೆದೊಯ್ಯೋಣ ಎಂದು ಬಿಜೆಪಿ ಹಿರಿಯ ನಾಯಕ ಕೆಎಸ್ ಈಶ್ವರಪ್ಪ ಸಲಹೆ ನೀಡಿದ್ದಾರೆ.

ಬುಧವಾರ ಇಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮಳೆ ಕೊರತೆಯಿಂದ ಆಗಿರುವ ಬೆಳೆ ನಷ್ಟದ ಪ್ರಮಾಣವನ್ನು ತಿಳಿದುಕೊಳ್ಳಬೇಕು. ಎಷ್ಟು ರೈತರು ತಮ್ಮ ಬದುಕನ್ನು ಕೊನೆಗೊಳಿಸಿದ್ದಾರೆ ಎಂಬುದನ್ನೂ ನಾವು ತಿಳಿದುಕೊಳ್ಳಬೇಕು. ಎಲ್ಲಾ ವಿವರಗಳೊಂದಿಗೆ ನಾವು ಮೋದಿ ಅವರನ್ನು ಭೇಟಿ ಮಾಡಿ, ಬರ ಪರಿಸ್ಥಿತಿಯನ್ನು ವಿವರಿಸಬೇಕು ಎಂದರು.

ಈ ನಿಟ್ಟಿನಲ್ಲಿ ನಾವು ಸರ್ಕಾರದ ಪರವಾಗಿ ನಿಲ್ಲುತ್ತೇವೆ. ಆದರೆ, ಸರ್ಕಾರ ಅದನ್ನು ಮಾಡದೆ ಕೇಂದ್ರದ ಮೇಲೆ ಆರೋಪ ಮಾಡುತ್ತಿದೆ. ರಾಜ್ಯದ ರೈತರ ಸಂಕಷ್ಟಗಳಿಗೆ ಸ್ಪಂದಿಸುತ್ತಿಲ್ಲ ಎಂದು ಆರೋಪಿಸಿದರು.

Advertisement

Advertisement

ಇದನ್ನೂ ಓದಿ: ರಾಜ್ಯಕ್ಕೆ ತುಸು ನಿರಾಳ ನೀಡಿದ ಮಳೆರಾಯ: ಜಲಾಶಯಗಳಲ್ಲಿ ನೀರಿನ ಮಟ್ಟ ಕೊಂಚ ಎರಿಕೆ, ಆದರೂ ತಮಿಳುನಾಡಿಗೆ ನೀರು ಬಿಡುವ ಸ್ಥಿತಿಯಲ್ಲಿಲ್ಲ ರಾಜ್ಯ!

ಬರ ಪರಿಹಾರ ಪಡೆಯಲು ಕೇಂದ್ರಕ್ಕೆ ವಿವರ ನೀಡಲು ಸಿದ್ದರಾಮಯ್ಯ ನೇತೃತ್ವದ ಸರ್ಕಾರ ವಿಫಲವಾಗಿದೆ. ಕೇಂದ್ರದ ಮಾರ್ಗಸೂಚಿಯಂತೆ ಬೆಳೆ ನಷ್ಟದ ಸಮೀಕ್ಷೆ ನಡೆಸಬೇಕು. ಆದರೆ, ಬರ ಪರಿಸ್ಥಿತಿ ಬಗ್ಗೆ ಅಧಿಕಾರಿಗಳಿಗೆ ಮಾಹಿತಿ ಇಲ್ಲ. ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಬೇಜವಾಬ್ದಾರಿಯಿಂದ ವರ್ತಿಸುತ್ತಿದ್ದಾರೆ ಎಂದು ಆರೋಪಿಸಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅವರ ಪುತ್ರ ಯತೀಂದ್ರ ಭ್ರಷ್ಟಾಚಾರದಲ್ಲಿ ತೊಡಗಿದ್ದಾರೆ. ಚುನಾವಣೆ ಸಂದರ್ಭದಲ್ಲಿ ವರುಣಾ ಕ್ಷೇತ್ರದಲ್ಲಿ ಮತದಾರರಿಗೆ ಕುಕ್ಕರ್, ಐರನ್ ಬಾಕ್ಸ್ ಹಂಚಿರುವುದನ್ನು ಯತೀಂದ್ರ ಒಪ್ಪಿಕೊಂಡಿದ್ದಾರೆ. ಚುನಾವಣಾ ಆಯೋಗ ಮಧ್ಯ ಪ್ರವೇಶಿಸಿ ಸಿದ್ದರಾಮಯ್ಯ ಅವರನ್ನು ಶಾಸಕ ಸ್ಥಾನದಿಂದ ಅನರ್ಹಗೊಳಿಸಬೇಕು ಎಂದು ಈಶ್ವರಪ್ಪ ಒತ್ತಾಯಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments