ಸಂಗ್ರಹ ಚಿತ್ರ 
ರಾಜ್ಯ

ಕಂಡಕ್ಟರ್ ಗಳಿಗೆ ತಲೆನೋವಾಗಿ ಪರಿಣಮಿಸಿದೆ ಶಕ್ತಿ ಯೋಜನೆ: ಸಭೆ ನಡೆಸುವಂತೆ ಎಂಡಿಗೆ ಪತ್ರ

ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಶಕ್ತಿ ಯೋಜನೆ ಜಾರಿಯಾಗಿ ಮೂರು ತಿಂಗಳು ಪೂರೈಸಿದ್ದು,  ಈ ನಡುವಲ್ಲೇ ಕೆಎಸ್‌ಆರ್‌ಟಿಸಿ ಸ್ಟಾಫ್ ಅ್ಯಂಡ್ ವರ್ಕರ್ಸ್ ಫೆಡರೇಶನ್ ಕೆಎಸ್‌ಆರ್‌ಟಿಸಿ ವ್ಯವಸ್ಥಾಪಕ ನಿರ್ದೇಶಕ ಅನ್ಬುಕುಮಾರ್ ಅವರಿಗೆ ಪತ್ರ ಬರೆದಿದ್ದು, ಈ ಯೋಜನೆ ಅನುಷ್ಠಾನದ ಬಳಿಕ ಕಂಡಕ್ಟರ್‌ಗಳು ಎದುರಿಸುತ್ತಿರುವ ಸಮಸ್ಯೆಗಳನ್ನು ವಿವರಿಸಿದ್ದಾರೆ.

ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಶಕ್ತಿ ಯೋಜನೆ ಜಾರಿಯಾಗಿ ಮೂರು ತಿಂಗಳು ಪೂರೈಸಿದ್ದು,  ಈ ನಡುವಲ್ಲೇ ಕೆಎಸ್‌ಆರ್‌ಟಿಸಿ ಸ್ಟಾಫ್ ಅ್ಯಂಡ್ ವರ್ಕರ್ಸ್ ಫೆಡರೇಶನ್ ಕೆಎಸ್‌ಆರ್‌ಟಿಸಿ ವ್ಯವಸ್ಥಾಪಕ ನಿರ್ದೇಶಕ ಅನ್ಬುಕುಮಾರ್ ಅವರಿಗೆ ಪತ್ರ ಬರೆದಿದ್ದು, ಈ ಯೋಜನೆ ಅನುಷ್ಠಾನದ ಬಳಿಕ ಕಂಡಕ್ಟರ್‌ಗಳು ಎದುರಿಸುತ್ತಿರುವ ಸಮಸ್ಯೆಗಳನ್ನು ವಿವರಿಸಿದ್ದಾರೆ.

ಸೆಪ್ಟೆಂಬರ್ 19 ರಂದು ಕೆಎಸ್‌ಆರ್‌ಟಿಸಿ ಸ್ಟಾಫ್ ಅ್ಯಂಡ್ ವರ್ಕರ್ಸ್ ಫೆಡರೇಶನ್'ನ ಪ್ರಧಾನ ಕಾರ್ಯದರ್ಶಿ ವಿಜಯ್ ಭಾಸ್ಕರ್ ಡಿ ಎ ಅವರು ಅನ್ಬುಕುಮಾರ್ ಅವರಿಗೆ ಪತ್ರ ಬರೆದಿದ್ದಾರೆ.

ಪತ್ರದಲ್ಲಿ ಸರಕಾರಿ ಬಸ್ ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ ನೀಡುವ ಶಕ್ತಿ ಯೋಜನೆ ಯಶಸ್ವಿಯಾಗಿ ಮೂರು ತಿಂಗಳು ಪೂರೈಸಿದೆ. ಆದರೆ, ಈ ಯೋಜನೆಯನ್ನು ಅನುಷ್ಠಾನದ ಬಳಿಕ ಕಂಡಕ್ಟರ್‌ಗಳು ಸಾಕಷ್ಟು ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಹೀಗಾಗಿ ತುರ್ತು ಸಭೆ ನಡೆಸಿ, ಸಮಸ್ಯೆಗಳಿಗೆ ಪರಿಹಾರ ನೀಡಬೇಕೆಂದು ಮನವಿ ಮಾಡಿಕೊಂಡಿದ್ದಾರೆ.

ಇದೇ ವೇಳೆ ಕಂಡಕ್ಟರ್ ಗಳಿಗೆ ಮಹಿಳೆಯರಿಂದ ಎದುರಾಗುತ್ತಿರುವ ಕಿರುಕುಳವನ್ನೂ ಉದಾಹರಣೆ ಸಮೇತ ವಿವರಿಸಿದ್ದಾರೆ.

ಸೆಪ್ಟೆಂಬರ್ 14 ರಂದು ಸಿಗಂದೂರಿನಿಂದ ಕೋಲಾರಕ್ಕೆ ಕೆಎಸ್‌ಆರ್‌ಟಿಸಿ ಬಸ್ ತೆರಳಿದ್ದು, ಈ ವೇಲೆ ಬಸ್ ಹತ್ತಿದ್ದ ನಾಲ್ವರು ಮಹಿಳೆಯರು ಸೀಟು ಕಾಯ್ದಿರಿಸಿದ್ದರು. ಎಂದಿನಂತೆ ಕಂಡಕ್ಟರ್ ರಾಮಣ್ಣ ರಿಸರ್ವೇಶನ್ ಟಿಕೆಟ್ ಪರಿಶೀಲಿಸಿ ಟಿಕೆಟ್ ಚಾರ್ಟ್ ನಲ್ಲಿ ಗುರುತು ಮಾಡಿ ಪ್ರಯಾಣಕ್ಕೆ ಅನುವು ಮಾಡಿಕೊಟ್ಟಿದ್ದರು. ಬಸ್ ರಿಪ್ಪನ್‌ಪೇಟೆ ತೆರಳಿದಾಗ ತಪಾಸಣಾ ತಂಡ ಟಿಕೆಟ್‌ ಪರಿಶೀಲನೆ ಆರಂಭಿಸಿದ್ದು, ನಾಲ್ವರು ಮಹಿಳೆಯರು ‘ಶೂನ್ಯ ಟಿಕೆಟ್‌’ ನೀಡಿಲ್ಲ. ಕಂಡಕ್ಟರ್‌ಗೆ ಮೆಮೋ ನೀಡಲಾಗಿದೆ. ಈ ರೀತಿ ಸಾಕಷ್ಟು ಘಟನೆಗಳಿವೆ.

ಪ್ರತೀನಿತ್ಯ ಓಡಾಡುತ್ತಿದ್ದ ಹಿನ್ನೆಲೆಯಲ್ಲಿ ಮಹಿಳೆಯರಿಗೆ ನಿರ್ವಾಹಕ ಶೂನ್ಯ ಟಿಕೆಟ್ ನೀಡಿಲ್ಲ. ಇದರಲ್ಲಿ ನಿರ್ವಾಹಕರ ಯಾವುದೇ ವೈಯಕ್ತಿ ಲಾಭವಿರಲಿಲ್ಲ. ನಿರ್ವಾಹಕರು ಯೋಜನೆಗೆ ಒಗ್ಗಿಕೊಳ್ಳುವವರೆಗೆ ಅವರ ವಿರುದ್ಧ ಕ್ರಮ ಕೈಗೊಳ್ಳಬಾರದು. ಕಾಲಾವಕಾಶ ನೀಡಬೇಕು ಎಂದು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ

'ಕಿವಿಲಿ ಹೊಗೆ ಬರುವಂತಿದೆ': ಲಂಕಾ-ಭಾರತ ಟೆಸ್ಟ್ ಪಂದ್ಯದಲ್ಲಿ ಮತ್ತೊಂದು ವಿವಾದ, ಗ್ಲೌಸ್ ಕಿತ್ತೆಸೆದ ಬ್ಯಾಟರ್, ಆಗಿದ್ದೇನು?

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್